ಉಡುಪಿ | ದ.ಸಂ.ಸ ಮೈಸೂರು ವಿಭಾಗದ ಸಂಘಟನಾ ಸಂಚಾಲಕರಾಗಿ ಶ್ಯಾಮರಾಜ್ ಬಿರ್ತಿ ಆಯ್ಕೆ

Date:

Advertisements

ಮೈಸೂರಿನ ರೋಟರಿ ಭವನದಲ್ಲಿ ಇತ್ತೀಚೆಗೆ ನಡೆದ ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ ಜಿಲ್ಲೆಯನ್ನೊಳಗೊಂಡ 8 ಜಿಲ್ಲೆಗಳ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಮೈಸೂರು ವಿಭಾಗದ ಮಟ್ಟದ ಸರ್ವ ಸದಸ್ಯರ ಸಭೆ ಮತ್ತು ದಲಿತ ಚಳುವಳಿಯ ವರ್ತಮಾನದ ಸವಾಲುಗಳು ಮತ್ತು ಮಾರ್ಗೋಪಾಯಗಳು ವಿಚಾರ ಸಂಕಿರಣ ನಡೆಯಿತು.

1004621240

ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಜ್ಯ ಪ್ರಧಾನ ಸಂಚಾಲಕರಾದ ಅಣ್ಣಾ ಮಾವಳ್ಳಿ ಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರು ವಿಭಾಗೀಯ ಮಟ್ಟದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಉಡುಪಿ ಜಿಲ್ಲೆಯ ಕ್ರಿಯಾತ್ಮಕ ದಲಿತ ಹೋರಾಟಗಾರ ಶ್ಯಾಮರಾಜ್ ಬಿರ್ತಿಯವರನ್ನು ಮೈಸೂರು ವಿಭಾಗೀಯ ಸಂಚಾಲಕರನ್ನಾಗಿ ಆಯ್ಕೆ ಮಾಡಲಾಯಿತು.

ಶಾಮ್ ರಾಜ್ ಬಿರ್ತಿಯವರು ಉಡುಪಿ ಜಿಲ್ಲೆಯಲ್ಲಿ ಸುಮಾರು ಮೂರು ದಶಕಗಳಿಂದ ದಲಿತ ಚಳುವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ, ಚಲೋ ಉಡುಪಿ, ಮುಂತಾದ ಐತಿಹಾಸಿಕ ಚಳುವಳಿಯನ್ನು ಸಂಘಟಿಸಿದ, ತುಮಕೂರು ಚಲೋ, ಬಿಜಾಪುರ ಚಲೋ, ಮಡಿಕೇರಿ ಚಲೋ ಮುಂತಾದ ರಾಜ್ಯ ಮಟ್ಟದ ಹೋರಾಟದಲ್ಲಿ ತನ್ನನ್ನು ಅರ್ಪಿಸಿಕೊಂಡಂತಹ, ದೇಶದ ಯಾವುದೇ ಮೂಲೆಯಲ್ಲಿ ದೌರ್ಜನ್ಯಗಳಾದಗಲೂ ಅದರ ವಿರುಧ್ಧ ಸಿಡಿದೆದ್ದು ಪ್ರತಿಭಟನೆಯನ್ನು ಸಂಘಟಿಸುವ ಜಿಲ್ಲೆಯ ಕ್ರಿಯಾತ್ಮಕ ದಲಿತ ಹೋರಾಟಗಾರಾಗಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ‌

Advertisements

ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಜ್ಯ ಸಂಘಟನಾ ಸುಂದರ ಮಾಸ್ತರ್ ಮತ್ತು ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು ಇವರ ವತಿಯಿಂದ ಸಮಸ್ತ ಉಡುಪಿ ಜಿಲ್ಲೆಯ ದ.ಸಂ.ಸ. ಅಂಬೇಡ್ಕರ್ ವಾದದ ವತಿಯಿಂದ ಶಾಮ್ ರಾಜ್ ಬಿರ್ತಿಯವರಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X