ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ (90) ಅವರು ಇಂದು ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ನಿಧನರಾದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ಶರಣಬಸಪ್ಪ ಅಪ್ಪ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಿಂದ ಇಂದು ಅವರ ಮನೆಗೆ ಕರೆದೊಯ್ದ ಬಳಿಕ ಕೆಲಹೊತ್ತಿನಲ್ಲಿ ವಿಧಿವಶರಾದರು.
ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಅನಾದಿಕಾಲದಿಂದಲೂ ದಾಸೋಹ ಪರಂಪರೆಯನ್ನು ಮುಂದುವರೆಸಿಕೊಂಡು ಬರುತ್ತಿದೆ. ಡಾ. ಶ್ರೀ ಶರಣಬಸಪ್ಪ ಅಪ್ಪ ಅವರು ಅದನ್ನು ದಾಸೋಹ ಜೊತೆಗೆ ಕಲಬುರಗಿಯಲ್ಲಿ ಶರಣಬಸವೇಶ್ವರ ವಿಶ್ವವಿದ್ಯಾಲಯ ಸೇರಿದಂತೆ ಅನೇಕ ಶಾಲಾ-ಕಾಲೇಜುಗಳ ಸ್ಥಾಪಿಸಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಕ್ರಾಂತಿಗೆ ಹೆಸರುವಾಸಿಯಾಗಿದ್ದರು.
ಅವರಿಗೆ ಪತ್ನಿ ದಾಕ್ಷಾಯಣಿ ಅಪ್ಪ, ಮೂವರು ಪುತ್ರಿಯರು, ಪುತ್ರ ಸಂಸ್ಥಾನದ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಇದ್ದಾರೆ.
ಶರಣಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿಯೇ ಶರಣಬಸಪ್ಪ ಅಪ್ಪಾ ಅವರ ಅಂತ್ಯಸಂಸ್ಕಾರವನ್ನು ಶುಕ್ರವಾರ ಸಂಜೆ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತರ ಆಗಮನ ಹಿನ್ನೆಲೆಯಲ್ಲಿ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ. ಸಾರ್ವಜನಿಕರಿಗೆ ಅಂತಿಮ ದರ್ಶನ ವ್ಯವಸ್ಥೆ ಮಾಡಲು ಕುಟುಂಬಸ್ಥರ ಜೊತೆ ಸಮಾಲೋಚನೆ ನಡೆಸಿ ತಿಳಿಸಲಾಗುವುದು ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ. ಹೇಳಿದರು.
ಇದನ್ನೂ ಓದಿ : ಬೀದರ್ | ಒಪ್ಪೊದಿಲ್ಲ, ಒಪ್ಪೊದಿಲ್ಲ ನಾಗಮೋಹನದಾಸ್ ವರದಿ ಒಪ್ಪೊದಿಲ್ಲ : ಬೃಹತ್ ಪ್ರತಿಭಟನಾ ರ್‍ಯಾಲಿ
https://shorturl.fm/cUn6i
https://shorturl.fm/PPd2L