ಪ್ರಚೋದನಾಕಾರಿ ಪೋಸ್ಟ್​ ಹಂಚಿಕೆ: ಪೊಲೀಸರ ವಶಕ್ಕೆ ವಿಎಚ್‌ಪಿ ಮುಖಂಡ ಶರಣ್​ ಪಂಪ್​ವೆಲ್

Date:

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್‌ ಹಂಚಿಕೊಂಡ ಆರೋಪದ ಮೇಲೆ ವಿಶ್ವಹಿಂದು ಪರಿಷತ್ ಮುಖಂಡ ಆರಣ್ ಪಂಪ್‌ವೆಲ್ ಅವರನ್ನು ಮಂಗಳೂರಿನ ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನು ವಶಕ್ಕೆ ಪಡೆಯುತ್ತಿದ್ದಂತೆಯೇ, ಬಿಜೆಪಿ ಶಾಸಕ ವೇದವಾಸ್ಯ ಕಾಮತ್ ಅವರು ಗುಂಪು ಕಟ್ಟಿಕೊಂಡು ಪೊಲೀಸ್‌ ಠಾಣೆಯ ಬಳಿ ಜಮಾಯಿಸಿ ದಾಂಧಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

- Advertisement -

ಆರ್‌ಎಸ್‌ಎಸ್‌ ಮುಖಂಡರೊಬ್ಬರ ದ್ವೇಷ ಭಾಷಣದ ತುಣುಕನ್ನು ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದರು. ಆ ಪೋಸ್ಟ್‌ಅನ್ನು ಶರಣ್​ ಪಂಪ್​ವೆಲ್​ ಶೇರ್​ ಮಾಡಿದ್ದರು. ಈ ಹಿನ್ನಲೆಯಲ್ಲಿ, ವಿಕಾಸ್‌ ಪುತ್ತೂರು ಮತ್ತು ಶರಣ್ ಪಂಪ್‌ವೆಲ್ ವಿರುದ್ಧ ಪೊಲೀಸರು ಸುಮೋಟೋ ಪ್ರಕರಣ​ ದಾಖಲಿಸಿಕೊಂಡಿದ್ದಾರೆ. FIR ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಈ ಇಬ್ಬರೂ ಆರೋಪಿಗಳು ಹಂಚಿಕೊಂಡಿದ್ದ ವಿಡಿಯೋ ತುಣುಕಿನಲ್ಲಿ; ಆರ್‌ಎಸ್‌ಎಸ್‌ ಮುಖಂಡ “ಎರಡು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 45,700 ಮಕ್ಕಳು ಹುಟ್ಟಿದ್ದಾರೆ. ಆ ಪೈಕಿ 23,200 ಮಕ್ಕಳು ಹಿಂದುಗಳು. 22,200 ಮಕ್ಕಳು ಅಲ್ಪಸಂಖ್ಯಾತರ ಮಕ್ಕಳು. ನಮ್ಮ ಜಿಲ್ಲೆಯ 78% ಜನಸಂಖ್ಯೆಗೆ ಹುಟ್ಟಿದ ಮಕ್ಕಳು 23,000. ಆದರೆ, 22% ಇರುವ ಸಮುದಾಯಕ್ಕೆ ಹುಟ್ಟಿದ್ದ ಮಕ್ಕಳು 22,000. ಹೀಗೆ ಆದರೆ, ಮುಂದಿನ 15 ವರ್ಷಗಳಲ್ಲಿ ನಮ್ಮ ಊರು ಎಲ್ಲಿ ಹೋಗುತ್ತೆ? ಆಗ ದೇಶ, ಸಮಾಜ ಉಳಿಯಲು ಸಾಧ್ಯವೇ?” ಎಂದು ದ್ವೇಷ ಭಾಷಣ ಮಾಡಿದ್ದರು.

ಈ ಲೇಖನ ಓದಿದ್ದೀರಾ?: ಕಾಂಗ್ರೆಸ್‌ ಸರ್ಕಾರಕ್ಕೆ 2.5 ವರ್ಷ: ಮಾಡಿದ್ದೇನು? ಮಾಡಬೇಕಿರುವುದೇನು?

ಶರಣ್​ ಪಂಪ್​ವೆಲ್​ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು, ಆತನನ್ನು ಡಿಸಿಪಿ ಮಿಥುನ್ ಎದುರು ಹಾಜರುಪಡಿಸಿದ್ದಾರೆ. ಶರಣ್ ಪಂಪ್‌ವೆಲ್‌ನಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡು, ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇನ್ನು, ಆತನನ್ನು ವಶಕ್ಕೆ ಪಡೆಯುತ್ತಿದ್ದಂತೆಯೇ ಬಿಜೆಪಿ ಶಾಸಕ ಮೇದವ್ಯಾಸ ಕಾಮತ್ ಮತ್ತು ಅವರ ಬೆಂಬಲಿಗರು ಕದ್ರಿ ಪೊಲೀಸ್ ಠಾಣೆ ಬಳಿ ಜಮಾಯಿಸಿ, ದಾಂಧಲೆ ನಡೆಸಿದ್ದಾರೆ. ‘ಆಪಾದಿತ ವಿಡಿಯೋವನ್ನು ಹಲವರು ಹಂಚಿಕೊಂಡಿದ್ದಾರೆ. ಹೀಗಿದ್ದರೂ, ಶರಣ್ ಪಂಪ್​ವೆಲ್ ಅವರನ್ನೇ ಯಾಕೆ ವಶಕ್ಕೆ ಪಡೆಯಲಾಗಿದೆ. ಅವರ ವಿರುದ್ಧ ಪ್ರಕರಣವನ್ನು ಹಿಂಪಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...