ವಿಜಯಪುರದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸುವಂತೆ ಶಶಿಕಾಂತ ಪಟ್ಟಣ ಆಗ್ರಹ

Date:

ರಾಜ್ಯ ಸರ್ಕಾರ ಉದ್ದೇಶದ ವಚನ ವಿಶ್ವವಿದ್ಯಾಲಯವನ್ನು ಬೀದರ್‌ನಲ್ಲಿ ಸ್ಥಾಪಿಸುವ ಬದಲು ಕೂಡಲಸಂಗಮ ಅಥವಾ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಸ್ಥಾಪಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಸಂಸ್ಥಾಪಕ ಡಾ. ಶಶಿಕಾಂತ ಪಟ್ಟಣ ಹೇಳಿದರು.

- Advertisement -

ವಿಜಯಪುರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ವಚನ ಸಾಹಿತ್ಯ ಮತ್ತು ಸಂವಿಧಾನಕ್ಕೆ ಇಂದು ಅಪಾಯ ಎದುರಾಗಿದೆ. ಸನಾತನಿಗಳು, ಪಟ್ಟ ಭದ್ರ ಹಿತಾಸಕ್ತಿಗಳಿಂದ ಕುತ್ತು ಎದುರಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಸನಾತನಿಗಳು ಶರಣರ ವಚನಗಳನ್ನು ತಿರುಚಿ, ವಿರೂಪಗೊಳಿಸುತ್ತಿದ್ದಾರೆ. ನಕಲಿ ವಚನಗಳನ್ನು ಸೇರಿಸುವ ಮೂಲಕ ದಾಳಿ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಚನಗಳನ್ನು ಸಮಗ್ರವಾಗಿ ಪರಿಷ್ಕರಿಸಿ, ಶುದ್ಧೀಕರಣ ಮಾಡುವ ಅಗತ್ಯವಿದೆ” ಎಂದರು.

“ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗಾಗಿ ರಾಜ್ಯ ಸರ್ಕಾರವು ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕು. ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟವು ಯಾರದೇ ವಿರುದ್ಧವೂ ಅಲ್ಲ, ಯಾರದೇ ಪರವೂ ಅಲ್ಲ. ನಾವು ಹಿಂದೂಗಳ ಧಾರ್ಮಿಕ ನಂಬಿಕೆ, ಆಚರಣೆ ವಿರೋಧಿಗಳಲ್ಲ. ಹೀಗಾಗಿ ಲಿಂಗಾಯತ ವಿಚಾರಧಾರೆಗಳಿಗೆ ಯಾರೂ ಅಡ್ಡಿಪಡಿಸಬಾರದು” ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಶರಣರ ವಚನಗಳು ನಮ್ಮ ಬದುಕಿಗೆ ದಾರಿದೀಪ : ಗುರುಬಸವ ಪಟ್ಟದ್ದೇವರು

“ವಿಜಯಪುರದ ಮಹಿಳಾ ವಿಶ್ವವಿದ್ಯಾಲಯದ ಎದುರು ಹಾಗೂ ಶಿವಮೊಗ್ಗ ಜಿಲ್ಲೆಯ ಉಡತಡಿಯಲ್ಲಿ ಪ್ರತಿಷ್ಠಾಪಿಸಿರುವ ಅಕ್ಕಮಹಾದೇವಿಯ ಅರಬೆತ್ತಲೆ ಪ್ರತಿಮೆಯನ್ನು ತೆರವುಗೊಳಿಸಿ, ಶ್ವೇತ ವಸ್ತ್ರಧಾರಿ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು” ಎಂದು ಆಗ್ರಹಿಸಿದರು.

“ಬಸವಣ್ಣ ಹುಟ್ಟಿದ ವಿಜಯಪುರದ ನೆಲದಲ್ಲಿ ಇಂದು ಬಸವಣ್ಣನ ವಿಚಾರಧಾರೆಗಳು ಕಂಡುಬರುತ್ತಿಲ್ಲ. ಜಿಲ್ಲೆಯಲ್ಲಿ ಬಸವಾದಿ ಶರಣರ ಸ್ಮಾರಕಗಳೂ ಇಲ್ಲ. ಬಡಾವಣೆಗಳಿಗೆ ಅವರ ಹೆಸರು ಇಡುವಂತೆ ಮನವಿ ಮಾಡಿದರೂ ಕೂಡ ಮಹಾನಗರ ಪಾಲಿಕೆ ಸ್ಪಂದಿಸುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...