ಶಿಗ್ಗಾಂವಿ | ಕಜಾವಿವಿ ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕೆ ಎಸ್ಎಫ್ಐ ಮನವಿ

Date:

ಶಿಗ್ಗಾಂವಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಎಲ್ಲಾ ವಿಭಾಗದ ವಿದ್ಯಾರ್ಥಿಗಳ ಪ್ರಥಮ, ದ್ವೀತಿಯ, ತೃತೀಯ ಸೆಮಿಸ್ಟರ್ ಫಲಿತಾಂಶ ಬಿಡುಗಡೆ ಹಾಗೂ ಮುದ್ರಿತ ಅಂಕಪಟ್ಟಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ನೇತೃತ್ವದಲ್ಲಿ ವಿವಿ ವಿದ್ಯಾರ್ಥಿಗಳು ಕುಲಸಚಿವ ಪ್ರೊ. ಸಿ.ಟಿ.ಗುರುಪ್ರಸಾದ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

- Advertisement -

ದೇಶದ ಪ್ರತಿಷ್ಠಿತ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ಪ್ರಥಮ, ದ್ವೀತಿಯ, ತೃತೀಯ ಸೆಮಿಸ್ಟರ್ ಫಲಿತಾಂಶ ಹಾಗೂ ಅಂಕಪಟ್ಟಿಯನ್ನು ಬಿಡದಿರುವ ಕಾರಣ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅವಧಿಯು ಮುಗಿದಿದೆ. ಹಾಗಾಗಿ ಅಂಕಪಟ್ಟಿಯನ್ನು ಕೂಡಲೇ ಬಿಡುಗಡೆಮಾಡಿ ಸ್ಕಾಲರ್ಶಿಪ್ ಅವಧಿಯನ್ನು ಪುನರಾರಂಭಿಸಬೇಕು. ಉನ್ನತ ಶಿಕ್ಷಣಕ್ಕೆ ಪೂರಕವಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಕುಲಪತಿಗಳು ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಎಸ್ಎಫ್ಐ ಒತ್ತಾಯಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, ಕೂಡಲೇ ಕಜಾವಿವಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಫಲಿತಾಂಶ ಹಾಗೂ ಅಂಕಪಟ್ಟಿ ಸಮಸ್ಯೆಗಳನ್ನು ತ್ವರಿತವಾಗಿ ಪರಿಹಾರಕ್ಕೆ ಜಾವಿವಿ ಆಡಳಿತ ಮಂಡಳಿ ಸೂಕ್ತ ಕ್ರಮಕೈಗೊಳಲು ಮುಂದಾಗಬೇಕು. ಯಾವುದೇ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ ವಾಗದ ರೀತಿಯಲ್ಲಿ ನೋಡಿಕೊಳ್ಳಬೇಕು. ಯುಸಿಸಿಎಮ್ಎಸ್ ತಾಂತ್ರಿಕ ಸಮಸ್ಯೆ ರಾಜ್ಯಾದ್ಯಂತ ಎಲ್ಲಾ ವಿದ್ಯಾರ್ಥಿಗಳಿಗೆ ಮುಳುವಾಗಿದೆ ಸರ್ಕಾರಗಳು ಎಚ್ಚೆತ್ತುಕೊಂಡು ಕೂಡಲೇ ವಿದ್ಯಾರ್ಥಿ ವಿರೋಧಿ ಈ ತಾಂತ್ರಿಕ ಪೋರ್ಟಲ್ ಅನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿದರು.

ವಿದ್ಯಾರ್ಥಿಗಳು ನಿರಂತರವಾಗಿ ಮನವಿ ಪತ್ರ ನೀಡಿದರು ಯಾವುದೇ ರೀತಿಯ ಸ್ಪಂದನೆ ಸಿಗುತ್ತಿಲ್ಲ. ಈಗಾಗಲೇ ಆಗಿರುವ ಸೆಮಿಸ್ಟರ್‌ಗಳ  ಫಲಿತಾಂಶ ಬಿಟ್ಟರೆ ಮಾತ್ರ ಮುಂದಿನ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗುತ್ತೇವೆ. ಇಲ್ಲವಾದರೆ ಪರೀಕ್ಷೆಯನ್ನು ಬಹಿಷ್ಕರಿಸುತ್ತೇವೆ. ಈ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕೊಡುವುದಾಗಿ ಕುಲಪತಿಗಳು ನೀಡಿರುವ ಭರವಸೆ ಹುಸಿಯಾದರೆ ವಿವಿ ಎದರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಜಾವಿವಿ ಎಸ್ಎಫ್ಐ ಘಟಕ ಅಧ್ಯಕ್ಷ ಅರುಣ್ ಪಾಂಡೆ, ಕಾರ್ಯದರ್ಶಿ ಸೌಭಾಗ್ಯ ಕೋಳಿವಾಡ ಆಕ್ರೋಶ ವ್ಯಕ್ತಪಡಿಸಿದರು.

ಮನವಿ ಪತ್ರ ಸ್ವೀಕರಿಸಿ ಜಾವಿವಿ ಕುಲಸಚಿವರಾದ ಪ್ರೊ. ಸಿ.ಟಿ. ಗುರುಪ್ರಶಾದ್ ಮಾತನಾಡಿ, ತಾಂತ್ರಿಕ ಸಮಸ್ಯೆ ಉಂಟಾಗಿ ಫಲಿತಾಂಶ ಬಿಡುಗಡೆಗೆ ತೊಡಕಾಗಿದೆ. ಆಡಳಿತ ಮಂಡಳಿ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದೆ. ಕೂಡಲೇ ಸಮಸ್ಯೆಗಳನ್ನು ಸರಿಪಡಿಸಿ ಶೀಘ್ರವಾಗಿ ಫಲಿತಾಂಶ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ?: ಶಿಗ್ಗಾಂವಿ | ಯಾಸಿರ್‌ ಪಠಾಣ್‌ ಗೆಲುವಿನೊಂದಿಗೆ ಬಿಜೆಪಿ ಮುಕ್ತ ಜಿಲ್ಲೆಯಾದ ‘ಹಾವೇರಿ’

ಈ ಸಂದರ್ಭದಲ್ಲಿ ಎಸ್ಎಫ್ಐ ಘಟಕ ಉಪಾಧ್ಯಕ್ಷೆ ಕಾವ್ಯ ಎಮ್ ಕೆ, ಪ್ರತಿಭಾ ಪಿ ಬಿ, ಬಸವರಾಜ ಬಡಿಗೇರ್, ಚನ್ನಪ್ಪ, ಸಹ ಕಾರ್ಯದರ್ಶಿ ಗೀತಾ ಕೆ, ಶಿಲ್ಪಾ ಎಸ್, ವಿನೋದಕುಮಾರ್ ಡಿ, ಉಮೇಶ್ ಟಿ, ಪ್ರಶಾಂತ, ಸಂಜಯ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...