ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ 50 ಸಾವಿರ ದಂಡ!

Date:

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ. ಆದರೆ ಇತ್ತೀಚಿನ ದಿನಗಳಲ್ಲಿ ಮದುವೆ ಮತ್ತು ಆದಾದ ಬಳಿಕ ಅದ್ದೂರಿಯಾಗಿ ಹಮ್ಮಿಕೊಳ್ಳುವ ‘ಬೀಗರ ಊಟ’ (ಬಾಡೂಟ) ಕೇವಲ ಸಂಪ್ರದಾಯವಾಗಿ ಉಳಿಯದೆ, ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.

- Advertisement -

ಅವರು ಹತ್ತು ಕುರಿ ಹಾಕಿಸಿದ್ದಾರೆ. ನಾವು ಕಡಿಮೆ ಮಾಡಬಾರದು ‘ ಎಂಬ ಅಹಮಿಕೆಯು ಬಡ ಮಧ್ಯಮ ವರ್ಗದವರನ್ನು ಸಾಲದ ಶೂಲೆಗೆ ತಳ್ಳುತ್ತಿದೆ.ಈ ದುಂದುವೆಚ್ಚಕ್ಕೆ ಬ್ರೇಕ್ ಹಾಕಲು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹರಗಿ ಗ್ರಾಮಸ್ಥರು ದಿಟ್ಟ ಹೆಜ್ಜೆ ಇಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಾಳೆ ಜಿಎಸ್‌ಟಿ ಮಂಡಳಿ ಸಭೆ: ಅಧಿಕಾರ ಹಂಚಿಕೆಯ ಅಸಮತೋಲನ;...

ಜಿಎಸ್‌ಟಿ ಮಂಡಳಿಯು ದೇಶದ 'ಸಹಕಾರ ಒಕ್ಕೂಟ ವ್ಯವಸ್ಥೆ'ಗೆ ಒಂದು ಉದಾಹರಣೆಯಾಗಿದ್ದರೂ, ಮತದಾನದ ಪ್ರಕ್ರಿಯೆಯಲ್ಲಿ ಕೇಂದ್ರಕ್ಕಿರುವ ಮೇಲುಗೈ ರಾಜ್ಯಗಳ ಸ್ವಾಯತ್ತತೆಗೆ ಧಕ್ಕೆ ತರುತ್ತಿದೆ ಎಂಬುದು ಸ್ಪಷ್ಟ. ಜಿಎಸ್‌ಟಿ ಜಾರಿಗೆ ಬಂದ ನಂತರ ರಾಜ್ಯಗಳು ತಮ್ಮ...

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ...

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ, ಪೊಲೀಸ್, ದೈಹಿಕ ಶಿಕ್ಷಣ ಶಿಕ್ಷಕ, ರಾಜಕಾರಣಿ, ಕಾದಂಬರಿಕಾರ... ಅವರ ಬದುಕೇ ಕಾದಂಬರಿಯ ಕಥಾವಸ್ತುವಾಗಿತ್ತು. ತಮ್ಮ ಬದುಕಿನ ಕೊನೆಯ ದಿನವೂ ಅವರು...

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...
535125

ಬರಗಾಲದಿಂದ ರೈತರು ಹಾಗೂ ಬಡ ಕುಟುಂಬಗಳು ತತ್ತರಿಸಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಬೀಗರ ಊಟ ಆಯೋಜಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ.

ಗ್ರಾಮಸ್ಥರ ಒಮ್ಮತದ ನಿರ್ಣಯದಂತೆ, ಮುಂದಿನ ದಿನಗಳಲ್ಲಿ ಆಯೋಜಿಸುವುದು ಕಂಡುಬಂದರೆ ಅಂತಹವರಿಗೆ 1 ಲಕ್ಷ ದಂಡ ಹಾಗೂ ಹೋಗುವವರಿಗೆ 50 ಸಾವಿರ ರೂಪಾಯಿ ಭಾರಿ ದಂಡ ವಿಧಿಸಲು ತೀರ್ಮಾನಿಸಲಾಗಿದೆ. ಆರ್ಥಿಕ ಶಿಸ್ತನ್ನು ಕಾಪಾಡಿಕೊಳ್ಳಲು ಗ್ರಾಮಸ್ಥರು ತೆಗೆದುಕೊಂಡಿರುವ ಈ ಕಠಿಣ ನಿರ್ಧಾರ ಈಗ ಸುತ್ತಮುತ್ತಲಿನ ಗ್ರಾಮಗಳಲ್ಲೂ ಭಾರಿ ಚರ್ಚೆಗೆ ಗ್ರಾಸವಾಗಿದೆ.

Advertisements
535127

ಬಡತನದಲ್ಲೂ ಸಾಲ ಮಾಡಿ ಬಾಡೂಟ!

ಸುಮಾರು 350 ಕುಟುಂಬಗಳಿರುವ ಹರಗಿ ಗ್ರಾಮದಲ್ಲಿ ಬಹುಪಾಲು ದೀವರ(ಈಡಿಗ) ಸಮುದಾಯದವರಿ ದ್ದಾರೆ. ಹಿಂದೆಲ್ಲಾ 10ರಿಂದ 15 ಜನರಿಗೆ ಸೀಮಿತವಾಗಿ ನಡೆಯುತ್ತಿದ್ದ ಸಂಬಂಧದ ಊಟ, ಈಗ ಶಾಮಿಯಾನ, ಟೇಬಲ್, ದಿನಸಿ ಹಾಗೂ ಬಾಣಸಿಗರ ಖರ್ಚು ಸೇರಿ 8ರಿಂದ 15 ಲಕ್ಷ ರೂಪಾಯಿಗಳವರೆಗೆ ವ್ಯಯಿಸುವ ದೊಡ್ಡ ಮಟ್ಟದ ‘ಟ್ರೆಂಡ್’ ಆಗಿದೆ.

535126

ಬಡವರು ಕನಿಷ್ಠ 2 ಲಕ್ಷ ರೂಪಾಯಿ ಸಾಲ ಮಾಡಿ ಈ ಊಟ ಹಾಕಿಸಬೇಕಾದ ಅನಿವಾರ್ಯತೆ ಇದೆ. ವಿಶೇಷವಾಗಿ ಹೆಣ್ಣು ಕೊಟ್ಟವರ (ಹೆಣ್ಣು ಹೆತ್ತವರ) ಪಾಲಿಗೆ ಈ ಸಂಪ್ರದಾಯ ದೊಡ್ಡ ಆರ್ಥಿಕ ಹೊರೆಯಾಗಿ ಪರಿಣಮಿಸಿತ್ತು.ಹಾಗೆ ಈ ಬೀಗರೂಟ ಮಲೆನಾಡಿನ ನೋಡಿದರೆ ಸಂಪ್ರದಾಯವಲ್ಲ, ಹಳೆ ಮೈಸೂರು ಭಾಗದ ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಭಾಗದ ಪದ್ಧತಿ ಈ ಕಡೆಯೂ ವಿಸ್ತರಣೆಯಾಗಿದೆ.ಒಟ್ಟಾರೆ, ಪ್ರತಿಷ್ಠೆಯ ಪ್ರದರ್ಶನಕ್ಕಿಂತ ಮನುಷ್ಯತ್ವ ಮತ್ತು ಆರ್ಥಿಕ ಭದ್ರತೆ ಮುಖ್ಯ ಎಂಬ ಮಹತ್ವದ ಸಂದೇಶವನ್ನು ಹರಗಿ ಗ್ರಾಮ ಸಾರಿದೆ.

ಈ ಕುರಿತು ಈದಿನ.ಕಾಮ್‌ ಜೊತೆಗೆ ಮಾತನಾಡಿದ ಗ್ರಾಮಭಿವೃದ್ಧಿ ಕಾರ್ಯದರ್ಶಿ ಗುರುಮೂರ್ತಿ ಹರಗಿ, “ಇತ್ತೀಚಿನ ವರ್ಷಗಳಲ್ಲಿ ಬೀಗರ ಊಟದ ಪದ್ಧತಿ ಹೆಚ್ಚಾಗಿದೆ. ಇದರಿಂದ ಹಿಂದುಳಿದ ವರ್ಗದ ಕುಟುಂಬಗಳಿಗೆ ಹೆಚ್ಚಿನ ಆರ್ಥಿಕ ಹೊರೆ ಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಒಗ್ಗಟ್ಟಿನಿಂದ ನಿರ್ಧಾರ ಕೈಗೊಂಡಿದ್ದಾರೆ” ಎಂದಿದ್ದಾರೆ.

SDMC ಉಪಾಧ್ಯಕ್ಷರ ಸೋಮಶೇಖರ್ ಮಾತನಾಡಿ, “ಶಿಕಾರಿಪುರ ಗ್ರಾಮಸ್ಥರ ನಿರ್ಧಾರ ಸ್ವಾಗತಾರ್ಹ. ಇಂತಹ ಸಂಪ್ರದಾಯಕ್ಕೆ ಕಡಿವಾಣ ಹಾಕುವುದರಿಂದ ಕುಟುಂಬಗಳ ಆರ್ಥಿಕ ಹೊರೆ ಕಡಿಮೆಯಾಗಲಿದೆ. ಇತರ ಗ್ರಾಮಗಳೂ ಸ್ವಯಂಪ್ರೇರಿತವಾಗಿ ಇಂತಹ ನಿರ್ಧಾರ ಕೈಗೊಳ್ಳಬೇಕು” ಎಂದು ಅಭಿಪ್ರಾಯಿಸಿದರು.

WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ರೇಷನ್‌ ಕಾರ್ಡ್‌ ಇ-ಕೆವೈಸಿ ಮಾಡಿಸಿಕೊಳ್ಳಲು ʼಅನ್ನ ಸೇವೆʼ ಮೊಬೈಲ್ ಆ್ಯಪ್

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಐದು ವರ್ಷಗಳ ಹಿಂದೆ ಇ-ಕೆವೈಸಿ ಮಾಡಿಸಿರುವ...

ಕೊಲ್ಹಾರ | ಗ್ರಾಮಸಭೆ ಮಾಹಿತಿ, ಅಧಿಕಾರಿಗಳ ಹಾಜರಾತಿ ಬಹಿರಂಗಪಡಿಸಿ: ಪ್ರದೀಪ ಪಾಟೀಲ

ಗಾಂಧಿ ಜಯಂತಿ ಅಂಗವಾಗಿ ಅಕ್ಟೋಬರ್ 2ರಂದು ವಿಜಯಪುರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ...