ಶಿಕಾರಿಪುರ | ಮಹಿಳೆಯರಿಗೆ ಮನೆಯಲ್ಲೇ ಉದ್ಯೋಗ ಸೃಷ್ಟಿಯ ಗುರಿ: ರಾಗಿ ಬಿಸ್ಕತ್ ತಯಾರಿಕೆ ಶಿಬಿರ

Date:

ಮಹಿಳೆಯರು ತಮ್ಮ ಆರೋಗ್ಯದತ್ತ ಹೆಚ್ಚು ಗಮನ ಹರಿಸಬೇಕು, ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡುವುದರಿಂದ ದೇಹ ಮತ್ತು ಮನಸ್ಸು ತಾಜಾವಾಗುತ್ತದೆ ಎಂದು ಆಹಾರ ವಿಜ್ಞಾನ ವಿಭಾಗ ಪ್ರಾಧ್ಯಾಪಕಿ ಜ್ಯೋತಿ ರಾಥೋಡ್ ರಾಗಿ ಬಿಸ್ಕತ್ ತಯಾರಿಕೆ ಶಿಬಿರದಲ್ಲಿ ಹೇಳಿದರು.

- Advertisement -

ಶಿಕಾರಿಪುರ ತಾಲೂಕಿನ ಹಿತ್ತಲ ಗ್ರಾಮದಲ್ಲಿ ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂತಿಮ ವರ್ಷದ ಬಿಎಸ್‌ಸಿ(ಹಾನರ್ಸ್) ಕೃಷಿ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ಸಮುದಾಯ ಭವನದಲ್ಲಿ ನಡೆದ ಮಹಿಳೆಯರಿಗೆ ಮನೆಯಲ್ಲೇ ಬಿಸ್ಕತ್ ತಯಾರಿಸುವುದರ ಬಗೆಗಿನ ಗುಂಪು ಚರ್ಚೆಯಲ್ಲಿ ಮಾಹಿತಿ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮಹಿಳೆಯರ ಆರೋಗ್ಯದ ಮಹತ್ವ, ಸಮತೋಲನ ಆಹಾರದ ಅವಶ್ಯಕತೆ ಮತ್ತು ಮನೆಯಲ್ಲೇ ಉದ್ಯಮಿಯಾಗುವ ಮೂಲಕ ಸ್ವಯಂ ಉದ್ಯೋಗದ ಅವಕಾಶಗಳ ಬಗ್ಗೆ ಮಹತ್ವದ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ರಾಗಿ ಬಿಸ್ಕತ್ ತಯಾರಿಸುವ ವಿಧಾನವನ್ನು ಸ್ಥಳದಲ್ಲೇ ಪ್ರದರ್ಶಿಸಿ, ಅದರ ಆರೋಗ್ಯಕಾರಿ ಗುಣಗಳ ಕುರಿತು ವಿವರಿಸಿ, “ರಾಗಿಯು ಕಬ್ಬಿಣ, ಕ್ಯಾಲ್ಸಿಯಂ ಮತ್ತು ನಾರಿನ ಅಂಶಗಳಲ್ಲಿ ಸಮೃದ್ಧವಾಗಿದ್ದು, ಶಕ್ತಿಯುತ ಆಹಾರವಾಗಿದೆ. ಇಂತಹ ಪೌಷ್ಟಿಕ ಬಿಸ್ಕತ್‌ಗಳನ್ನು ಮನೆಯಲ್ಲೇ ತಯಾರಿಸಿ ಮಾರಾಟ ಮಾಡುವ ಮೂಲಕ ಮಹಿಳೆಯರು ಸ್ವಾವಲಂಬಿಗಳಾಗಬಹುದು, ತಮ್ಮ ಕುಟುಂಬದ ಆರ್ಥಿಕ ಸ್ಥಿತಿಯನ್ನೂ ಸುಧಾರಿಸಬಹುದು” ಎಂಬ ಸಂದೇಶವನ್ನು ನೀಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ರಾಷ್ಟ್ರಗೀತೆಗೆ ಅಪಮಾನ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಜಾಕ್ಕೆ ಎನ್‌ಎಸ್‌ಯುಐ ಆಗ್ರಹ

ಕಾರ್ಯಕ್ರಮದಲ್ಲಿ ಹಾಜರಾಗಿದ್ದ ಮಹಿಳೆಯರು ಉತ್ಸಾಹದಿಂದ ಭಾಗವಹಿಸಿ, ಅವರ ಪ್ರಶ್ನೆಗಳನ್ನು ಕೇಳಿ ರಾಗಿ ಬಿಸ್ಕತ್ ತಯಾರಿಸುವ ಅನುಭವವನ್ನು ಪಡೆದರು ಮತ್ತು ಕಾರ್ಯಕ್ರಮದಲ್ಲಿ ಕೃಷಿ ಸೂಕ್ಷ್ಮಜೀವಾಣುಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶಿಲ್ಪಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...