ಶಿವಮೊಗ್ಗ | ಬೈಕ್‌ಗೆ ಅಡ್ಡ ಬಂದ ಕಾಡು ಪ್ರಾಣಿ; ಕಟ್ಟೆಗೆ ಗುದ್ದಿ ಸವಾರ ಸಾವು

Date:

ಬೈಕ್‌ಗೆ ಅಡ್ಡಬಂದ ಕಾಡು ಪ್ರಾಣಿಯನ್ನ ತಪ್ಪಿಸಲು ಹೋಗಿ, ರಸ್ತೆ ಪಕ್ಕದ ಕಟ್ಟೆಗೆ ಗುದ್ದಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಶಿವಮೊಗ್ಗ ಜಿಲ್ಲೆಯ ಘಟನೆ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ಆತನ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಇಟ್ಟಿಗೆಹಳ್ಳಿ ಗ್ರಾಮದ ಗಣೇಶ್ (32) ಮೃತ ದುರ್ದೈವಿ. ತಾಲೂಕಿನ ಯರೆಕಟ್ಟೆ ಗ್ರಾಮದ ಬಳಿ ಈ ಘಟನೆ ನಡೆದಿದೆ. ಕಟ್ಟೆಗೆ ಬೈಕ್ ಢಿಕ್ಕಿಯಾದ ರಭಸಕ್ಕೆ ಗಣೇಶ್‌ ಸ್ಥಳದಲ್ಲೇ ಸಾವನಪ್ಪಿದ್ದು, ಆತನ ಪತ್ನಿ ರಂಜಿತಾ (27) ಗಂಭೀರವಾಗಿ ಗಾಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪತ್ನಿ ರಂಜಿತಾರನ್ನು ಕೆಲಸಕ್ಕೆ ಬಿಡಲು ಕರೆದೊಯ್ಯುತ್ತಿದ್ದಾಗ, ಯರೆಕಟ್ಟೆ ಗ್ರಾಮದ ಭೂತಪ್ಪನ ಕಟ್ಟೆ ಬಳಿ ಬರುವಾಗ ಬೈಕ್‌ಗೆ ಅಡ್ಡ ಬಂದ ಕಾಡುಪ್ರಾಣಿ ತಪ್ಪಿಸಲು ಹೋಗಿ, ರಸ್ತೆ ಬದಿಯ ಕಟ್ಟೆಗೆ ಬೈಕ್ ಡಿಕ್ಕಿಯಾಗಿದೆ. ಪತಿ ಗಣೇಶ್ ಸ್ಥಳದಲ್ಲೇ ಸಾವನ್ನಪ್ಪಿದರೆ, ರಂಜಿತಾ ಕಾಲು ಮತ್ತು ತಲೆಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...