ಶಿಕಾರಿಪುರ | ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ; ಆರೋಪಿ ನಾಪತ್ತೆ

Date:

ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಆಡು ಮೇಯಿಸಲು ಹೋದ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಮಾಲೀಕ ಮಹಿಳೆಗೆ ಜಾತಿನಿಂದನೆ ಮಾಡಿರುವ ಘಟನೆ ನಡೆದಿದೆ.

- Advertisement -

ಸಂತ್ರಸ್ತೆ ಮಹಿಳೆ ಸರೋಜಮ್ಮ ಎಂಬುವವರು ಹಲ್ಲೆಗೊಳಗಾಗಿರುವವರು. ತೋಟದಲ್ಲಿ ಆಡು ಮೇಯಿಸಲು ಬಂದ ಮಹಿಳೆ ಮೇಲೆ ಫೆಬ್ರವರಿ 23ರಂದು ಮಾಲೀಕನಿಂದ ಹಲ್ಲೆ ನಡೆದಿತ್ತು. ಘಟನೆ ನಡೆದು ಐದು ದಿನಗಳ ಬಳಿಕ ಶಿಕಾರಿಪುರ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಹಲ್ಲೆ ಬಳಿಕ ಮಹಿಳೆ ಶಿಕಾರಿಪುರ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆದುಕೊಂಡಿದ್ದಾರೆ. ಮಹಿಳೆಯ ಮೇಲೆ ಹಲ್ಲೆ ನಡೆದಿದ್ದನ್ನು ಹೇಳಿಕೆ ನೀಡಿದ್ದ ವಿಡಿಯೊ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ದೂರು ನೀಡಿದ ಬಳಿಕ ತೋಟದ ಮಾಲೀಕ ತಲೆಮರೆಸಿಕೊಂಡಿರುವುದಾಗಿ ತಿಳಿದುಬಂದಿದೆ. ತೋಟದ ಮಾಲೀಕ ಅರುಣ್ ಕುಮಾರ್ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅಡಿ ಪ್ರಕರಣ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಸತ್ಯಾಗ್ರಹ ನಿರತ ಬೌದ್ಧ ಬಿಕ್ಕುಗಳ ಮೇಲೆ ದೌರ್ಜನ್ಯ; ಪ್ರತಿಭಟನೆಗೆ ಬುದ್ಧಿಸ್ಟ್ ಫೋರಂ ಕರೆ

“ಈಸೂರು ಗ್ರಾಮದ ರಾಮವಳ್ಳಿ ಗ್ರಾಮಕ್ಕೆ ಕುರಿ ಮೇಯಸಲು ಹೋಗಿದ್ದ ವೇಳೆ ಅರುಣ ಎಂಬಾತ ಏಕಾಏಕಿ ಜಾತಿನಿಂದನೆ ಮಾಡಿ, ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾನೆ” ಎಂದು ಮಹಿಳೆ ಆರೋಪ ಮಾಡಿದ್ದಾರೆ.

“ಘಟನೆ ಹಿನ್ನೆಲೆ ತೀವ್ರವಾದ ತನಿಖೆ ಮುಂದುವರೆದಿದೆ. ಆರೋಪಿಯ ಸುಳಿವು ಪತ್ತೆ ಹಚ್ಚಲಾಗುತ್ತಿದ್ದು, ಶೀಘ್ರದಲ್ಲಿಯೇ ಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಶಿಕಾರಿಪುರ ಡಿವೈಎಸ್‌ಪಿ ಕೇಶವ್ ಈ ದಿನ.ಕಾಮ್‌ಗೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...