ಶಿವಮೊಗ್ಗ 19 ವರ್ಷದ ಯುವಕನಿಗೆ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಶಿವಮೊಗ್ಗ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ 2.01 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ.
ಏನಿದು ಪ್ರಕರಣ
ಕಳೆದ ಮೂರು ವರ್ಷಗಳ ಹಿಂದೆ ಅಂದರೆ 2022 ರಲ್ಲಿ ಭದ್ರಾವತಿಯ19 ವರ್ಷದ ಯುವಕನೊಬ್ಬ 15 ವರ್ಷದ ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದ.
ಈ ಹಿನ್ನೆಲೆ ಬಾಲಕಿ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾರೆ. ಆಗ ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸಿ ಆತನ ಮೇಲೆ ಫೋಕ್ಸೊ ಕೇಸ್ ದಾಖಲಿಸಿ ಆತನನ್ನು ಕೋರ್ಟ್‌ಗೆ ಹಾಜರು ಪಡಿಸಿದ್ದರು.
ಆ ಪ್ರಕರಣ ಈಗ ಇತಾರ್ಥವಾಗಿದ್ದು, ಆರೋಪಿಗೆ 20 ವರ್ಷ ಕಠಿಣ ಸಜೆ ಹಾಗೂ 2.01 ಲಕ್ಷದಷ್ಟು ದಂಡವನ್ನು ನ್ಯಾಯಾಲಯ ವಿಧಿಸಿದೆ. ಅಷ್ಟೇ ಅಲ್ಲದೆ ದಂಡದ 2 ಲಕ್ಷ ರೂಪಾಯಿಗೆ ಇನ್ನೆರಡು ಲಕ್ಷ ರೂಪಾಯಿ ಸೇರಿಸಿ ಬಾಲಕಿಗೆ ಪರಿಹಾರ ನೀಡುವಂತೆ ಕೋರ್ಟ್ ಆದೇಶಿಸಿದೆ.