ಶಿವಮೊಗ್ಗದ ಪುರಲೆಯಲ್ಲಿರುವ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೆಡಿಕಲ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ವಿಷ್ಣುಪ್ರಿಯಾ ನೇಣಿಗೆ ಶರಣಾದವರು.
ವೈದ್ಯಕೀಯ ಶಿಕ್ಷಣವನ್ನು ಮುಗಿಸಿ ಇಂಟರ್ ಶಿಪ್ ನ್ನು ಮುಗಿಸುವ ಹಂತದಲ್ಲಿದ್ದ ವೇಳೆ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾರೆ. ಬರ್ಲಿನ್ ನಲ್ಲಿ ಯುವತಿಯ ಪೋಷಕರಿದ್ದಾರೆ. ಇವರು ಮೂಲತಃ ಬೆಂಗಳೂರಿನವರಾಗಿದ್ದಾರೆ. ಇಂಟರ್ನ್ ಶಿಪ್ ಮುಗಿಯಲು 10 ದಿನಬಾಕಿ ಉಳಿದಿದ್ದು, ಈ ವೇಳೆ ಯುವತಿಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಶವವನ್ನು ಶಿವಮೊಗ್ಗದ ಮರಣೋತ್ತರ ಪರೀಕ್ಷೆ ಕೇಂದ್ರಕ್ಕೆ ಸಾಗಿಸಲಾಗಿದೆ. ಪ್ರಕರಣ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
