ಶಿವಮೊಗ್ಗ | ಭೀಕರ ಅಪಘಾತ; ಇಬ್ಬರ ಸಾವು, 30ಕ್ಕೂ ಅಧಿಕ ಮಂದಿಗೆ ಗಾಯ

Date:

ಭೀಕರ ಅಪಘಾತದಲ್ಲಿ ಬಸ್ ಚಾಲಕ ಹಾಗೂ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಚೋರಡಿ ಕುಮದ್ವತಿ ಸೇತುವೆ ಬಳಿ ಸಂಭವಿಸಿದೆ. ಚಾಲಕನ ಅಜಾರೂಕತೆಯೇ ಅಫಘಾತಕ್ಕೆ ಕಾರಣ ಎನ್ನಲಾಗಿದೆ.

“ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ ಇಬ್ಬರಿಗೆ ತೀವ್ರ ಗಾಯಗಳಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ” ಎಂದು ಸಿಮ್ಸ್ ಮೆಡಿಕಲ್ ಆಸ್ಪತ್ರೆಯ ನಿರ್ದೇಶಕ ವಿರೂಪಾಕ್ಷಪ್ಪ ತಿಳಿಸಿದ್ದಾರೆ.

“ಡ್ರೈವರ್ ಮೊಬೈಲ್ ಫೋನ್​ನಲ್ಲಿ ಮಾತನಾಡುತ್ತಿದ್ದರು. ಶಿವಮೊಗ್ಗಕ್ಕೆ ಬೇಗ ಹೋಗಬೇಕೆಂಬ ಅವಸರದಲ್ಲಿ ಬಸ್ ಚಲಾಯಿಸುತ್ತಿದ್ದರು. ನಾವು ಹೇಳಿದರೂ ಕೂಡ ಅವರು ಮೊಬೈಲ್​​ನಲ್ಲಿ ಮಾತನಾಡುತ್ತಿದ್ದರು” ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.

ಚಿತ್ರದುರ್ಗ ಜಿಲ್ಲೆ ಹೊರಕೆರೆಪುರದ ಬಳಿ ಎಂ.ಜೆ.ಕಟ್ಟೆ ಗ್ರಾಮದಿಂದ ಶಿಕಾರಿಪುರ ಹುಚ್ಚರಾಯ ದೇವರ ದರ್ಶನಕ್ಕೆ ಮೃತ ತಿಪ್ಪೇಸ್ವಾಮಿ ಹಾಗೂ ಅವರ ಪತ್ನಿ‌ ಜಯಮ್ಮ‌ ಸೇರಿದಂತೆ ಒಂದೇ ಕುಟುಂಬದಿಂದ ಒಟ್ಟು ಆರು ಮಂದಿ ಬಂದಿದ್ದರು. ದೇವರ ದರ್ಶನ ಮುಗಿಸಿ ಹಿಂದಿರುಗುವಾಗ  ಅಪಘಾತವಾಗಿದೆ. ಘಟನೆಯಲ್ಲಿ ತಿಪ್ಪೇಸ್ವಾಮಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

“ನಮ್ಮ ಯಜಮಾನರು ಸಾವನ್ನಪ್ಪಿದ್ದಾರೆ. ಅವರನ್ನು ನಾನು ನೋಡಿಲ್ಲ” ಎಂದು ಮೃತ ತಿಪ್ಪೇಸ್ವಾಮಿ ಪತ್ನಿ ಜಯಮ್ಮ ಕಣ್ಣೀರಿಟ್ಟಿದ್ದಾರೆ.

ಆಸ್ಪತ್ರೆಗೆ ಸಂಸದ ರಾಘವೇಂದ್ರ, ವಿಜಯೇಂದ್ರ ಭೇಟಿ:

ಅಪಘಾತ ವಿಷಯ ತಿಳಿದ ಕೂಡಲೇ ಸಂಸದ ಬಿ ವೈ ರಾಘವೇಂದ್ರ ಹಾಗೂ ಶಿಕಾರಿಪುರ ಬಿಜೆಪಿ ಅಭ್ಯರ್ಥಿ ಬಿ ವೈ ವಿಜಯೇಂದ್ರ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಸಹೋದರಿಬ್ಬರು ಗಾಯಾಳುಗಳ ಆರೋಗ್ಯ ವಿಚಾರಿಸಿ, ಸಾಂತ್ವನ ಹೇಳಿದ್ದಾರೆ. ಬಳಿಕ ಸಂತ್ರಸ್ತ ಕುಟುಂಬದವರಿಗೆ ಧೈರ್ಯ ಹೇಳಿದ್ದು, ಉತ್ತಮ ಚಿಕಿತ್ಸೆ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕೆಕೆಆರ್‌ಟಿಸಿ ಬಸ್ ಚಾಲಕನ ಭೀಕರ ಹತ್ಯೆ

ಜಿಲ್ಲಾಧಿಕಾರಿ ಸೆಲ್ವಮಣಿ ಹಾಗೂ ಎಸ್​ಪಿ ಮಿಥುನ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಾಯಾಳುಗಳ ಬಗ್ಗೆ ಮಾಹಿತಿ ಪಡೆದು‌ಕೊಂಡರು. ಎಸ್​ಪಿ ಮಿಥುನ್ ಕುಮಾರ್ ಮಾತನಾಡಿ, “ಎರಡು ಬಸ್​​ಗಳ‌ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡಸಲಾಗುತ್ತದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೀತಾಫಲ ಹಣ್ಣಿಗೆ ಭಾರೀ ಬೇಡಿಕೆ; ಬೇಕಿದೆ ಮಾರುಕಟ್ಟೆ ಸೌಲಭ್ಯ

ಸೀತಾಫಲ ಹಣ್ಣು ತಿನ್ನಲು ತುಂಬಾ ರುಚಿಕರ ಹಾಗೂ ಅಷ್ಟೇ ಸ್ವಾದಿಷ್ಟ, ರೋಗ...

ಕಾವೇರಿ ವಿವಾದ | ತಮಿಳು ನಟ ಸಿದ್ಧಾರ್ಥ್‌ ಕ್ಷಮೆ ಕೇಳಿದ ನಟ ಶಿವರಾಜ್‌ಕುಮಾರ್

ತಮಿಳು ನಟ ಸಿದ್ಧಾರ್ಥ್‌ ಅವರ ಸುದ್ದಿಗೋಷ್ಠಿಗೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ...

ಕರ್ನಾಟಕ ಬಂದ್ | ದಾವಣಗೆರೆ: ತಮಿಳುನಾಡಿ ನೀರು ಹರಿಸದಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವ ರಾಜ್ಯ ಸರ್ಕಾರ ಮತ್ತು ಕಾವೇರಿ ನಿರ್ವಹಣಾ...

ಹಾವೇರಿ | ಕಾವೇರಿ ನೀರು ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸಲಿ

ರಾಜ್ಯ ಸರ್ಕಾರ ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಒತ್ತಾಯ ವಿವಿಧ ಸಂಘಟನೆಗಳ...