ಹೋರಿಹಬ್ಬದಲ್ಲಿ ಹೋರಿ ತಿವಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿ ಪುನೀತ್ ಆಚಾರ್(19) ಮೃತಪಟ್ಟ ಯುವಕ. ಇವರು ಶಿಕಾರಿಪುರ ಪಟ್ಟಣದ ವಿದ್ಯಾರ್ಥಿ ನಿಲಯದಲ್ಲಿದ್ದುಕೊಂಡು ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಕಲ್ಮನೆ ಗ್ರಾಮದಲ್ಲಿ ನಡೆದ ಹೋರಿಹಬ್ಬವನ್ನು ವೀಕ್ಷಿಸಲು ತೆರಳಿದ್ದ ಸಂದರ್ಭದಲ್ಲಿ ಹೋರಿ ತಿವಿದ ಪರಿಣಾಮ ತೀವ್ರ ಗಾಯಗೊಂಡಿದ್ದರು. ಬಳಿಕ ಇವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ತೆಲಂಗಾಣ ಮಾದರಿಯಲ್ಲಿ ಸಾಲಮನ್ನಾಗೆ ರೈತರ ಒತ್ತಾಯ
ಈ ಬಗ್ಗೆ ಪುನೀತ್ ತಂದೆ ಗಜೇಂದ್ರ ಆಚಾರ್ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಹೋರಿಹಬ್ಬ ಆಯೋಜಕರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.