ಶಿವಮೊಗ್ಗ | ಹೋರಿಹಬ್ಬ ವೀಕ್ಷಿಸುತ್ತಿದ್ದ ಯುವಕನಿಗೆ ಹೋರಿ ತಿವಿತ; ಯುವಕ ಸಾವು

Date:

ಹೋರಿಹಬ್ಬದಲ್ಲಿ ಹೋರಿ ತಿವಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದಿದೆ.

- Advertisement -

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿ ಪುನೀತ್ ಆಚಾರ್(19) ಮೃತಪಟ್ಟ ಯುವಕ. ಇವರು ಶಿಕಾರಿಪುರ ಪಟ್ಟಣದ ವಿದ್ಯಾರ್ಥಿ ನಿಲಯದಲ್ಲಿದ್ದುಕೊಂಡು ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕಲ್ಮನೆ ಗ್ರಾಮದಲ್ಲಿ ನಡೆದ ಹೋರಿಹಬ್ಬವನ್ನು ವೀಕ್ಷಿಸಲು ತೆರಳಿದ್ದ ಸಂದರ್ಭದಲ್ಲಿ ಹೋರಿ ತಿವಿದ ಪರಿಣಾಮ ತೀವ್ರ ಗಾಯಗೊಂಡಿದ್ದರು. ಬಳಿಕ ಇವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ತೆಲಂಗಾಣ ಮಾದರಿಯಲ್ಲಿ ಸಾಲಮನ್ನಾಗೆ ರೈತರ ಒತ್ತಾಯ

ಈ ಬಗ್ಗೆ ಪುನೀತ್ ತಂದೆ ಗಜೇಂದ್ರ ಆಚಾರ್ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಹೋರಿಹಬ್ಬ ಆಯೋಜಕರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...