ದ್ವಿಚಕ್ರ ವಾಹನ ಶೋರೂಂಗೆ ಬೆಂಕಿಯಿಟ್ಟ ಆರೋಪದಲ್ಲಿ ಮಾಜಿ ಉದ್ಯೋಗಿಯೊಬ್ಬನನ್ನು ಶಿವಮೊಗ್ಗ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ನಗರದ ಎನ್ ಟಿ ರಸ್ತೆ ಜಂಕ್ಷನ್‌ನಲ್ಲಿರುವ ಕಾರ್ತಿಕ್ ಮೋಟರ್ಸ್ ಶೋ ರೂಂನಲ್ಲಿ ಅಗ್ನಿ ದುರಂತ ನಡೆದಿದಿದ್ದು, ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದೆ. ಅಲ್ಲದೆ ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಬೆಂಕಿ ಆವರಿಸುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದರು.
ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಹೊತ್ತಿಕೊಂಡ ವಿಷಯ ತಿಳಿಯುತ್ತಿದ್ದಂತೆ ಶೋ ರೂಂ ಮುಂಭಾಗ ದೊಡ್ಡ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಹಾಗಾಗಿ ಎನ್ ಟಿ ರಸ್ತೆ ಮತ್ತು ಬೈಪಾಸ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಯಿತು. ಸಂಚಾರ ಠಾಣೆ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಹರಸಾಹಸ ಪಡಬೇಕಾಯಿತು.
ಈ ಸುದ್ದಿ ಓದಿದ್ದೀರಾ? ಮೈಸೂರು | ತಪ್ಪು ಗ್ರಹಿಕೆಯಿಂದ ಹೊರಬಂದು ಅರಿವಿನಿಂದ ನಡೆದರೆ, ಆದೇ ಸನ್ಮಾರ್ಗ: ಸಾಹಿತಿ ಬಂಜಗೆರೆ ಜಯಪ್ರಕಾಶ್
ಈ ಘಟನೆ ಸಂಬಂಧ ಮಾಜಿ ಉದ್ಯೋಗಿಯೇ ಶೋ ರೂಂಗೆ ಬೆಂಕಿ ಹಚ್ಚಿದ್ದಾನೆಂದು ಆರೋಪಿಸಲಾಗಿದ್ದು, ಓರ್ವ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಆತನ ವಿಚಾರಣೆ ನಡೆಯುತ್ತಿದೆ.