ಶಿವಮೊಗ್ಗ | ಪೊಲೀಸ್ ಇಲಾಖೆ, ಸಾರ್ವಜನಿಕರ ಬೇಡಿಕೆ ಈಡೇರಿಸುವಂತೆ ಗೃಹ ಸಚಿವರಿಗೆ ಮನವಿ

Date:

Advertisements

ಶಿವಮೊಗ್ಗ ನಗರದ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್‌ ಹೆಚ್ ಸಿ ಯೋಗೇಶ್‌ರವರು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದರು.

ಶಿವಮೊಗ್ಗ ನಗರದಲ್ಲಿ ನಿರ್ಮಾಣವಾಗಿದ್ದ ನೂತನ ಪೊಲೀಸ್‌ ಭವನ ಉದ್ಘಾಟನೆಗೆ ಗೃಹ ಸಚಿವರು ಆಗಮಿಸಿದ್ದ ವೇಳೆ ಮನವಿ ಸಲ್ಲಸಿ ಮಾತನಾಡಿ, “ಶಿವಮೊಗ್ಗ ನಗರವು ಬೃಹದಾಕಾರವಾಗಿ ಬೆಳೆದಿದೆ. ಜನಸಂಖ್ಯೆ ಕೂಡಾ ಅಧಿಕವಾಗಿದ್ದು, ಸುಮಾರು ನಾಲ್ಕು ಲಕ್ಷ ಜನಸಂಖ್ಯೆಯನ್ನು ಹೊಂದಿದೆ. ಪೊಲೀಸ್ ಇಲಾಖೆಯವರು ಹಾಗೂ ಅಧಿಕಾರಿಗಳು ಶಿವಮೊಗ್ಗ ನಗರದ ಸಾರ್ವಜನಿಕರೊಂದಿಗೆ ಸಹಕರಿಸುತ್ತ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತಹ ಕೆಲವು ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಮನವಿ ಮಾಡಿದರು.

“ಶಿವಮೊಗ್ಗದಲ್ಲಿ ಕಮಿಷನರ್ ಕಚೇರಿ ನಿರ್ಮಾಣ ಮಾಡಿಕೊಡಬೇಕು. ನಗರದ ಗೋಪಾಲ ಭಾಗದಲ್ಲಿ ಪೊಲೀಸ್ ಸ್ಟೇಷನ್ ನಿರ್ಮಾಣ ಮಾಡಿಕೊಡಬೇಕು. ಏರ್‌ಪೋರ್ಟ್‌ಗೆ ನಿರ್ದಿಷ್ಟ ಪೊಲೀಸ್ ಸ್ಟೇಷನ್ ನಿರ್ಮಾಣ ಮಾಡಬೇಕು. ಹೆಚ್ಚಿನ ವಾಹನ ದಟ್ಟಣೆಯಿರುವುದರಿಂದ ಗ್ರಾಮಾಂತರ ಭಾಗಕ್ಕೆ ಹಾಗೂ ನಗರ ಭಾಗದಲ್ಲಿ ಪ್ರತ್ಯೇಕವಾಗಿ ಮತ್ತೊಂದು ಟ್ರಾಫಿಕ್ ಪೊಲೀಸ್ ಠಾಣೆ ನಿರ್ಮಾಣ ಮಾಡಿಕೊಡಬೇಕು. ಪೊಲೀಸ್ ಇಲಾಖೆಯವರ ಆರೋಗ್ಯ ದೃಷ್ಟಿಯಿಂದ ಪೊಲೀಸ್ ವ್ಯಾಯಾಮ ಶಾಲೆ ಹಾಗೂ ಕ್ರೀಡಾಂಗಣ ನಿರ್ಮಾಣ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ವಕ್ಫ್ ಆಸ್ತಿಯ ಬಗ್ಗೆ ರೈತರಲ್ಲಿ ತಪ್ಪು ವದಂತಿ; ಆತಂಕಪಡುವ ಅವಶ್ಯಕತೆ ಇಲ್ಲ; ಜಿಲ್ಲಾಧಿಕಾರಿ ಸ್ಪಷ್ಟನೆ

ರಾಜ್ಯ ಭೋವಿ ನಿಗಮ ಮಂಡಳಿ ಅಧ್ಯಕ್ಷ ರವಿಕುಮಾರ್, ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಎಸ್ ಶಿವಕುಮಾರ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಮ್ ಪಾಷಾ, ಮಹಾನಗರ ಪಾಲಿಕೆ ಮಾಜಿ ಸದಸ್ಯ ವಿಶ್ವನಾಥ್ ಕಾಶಿ, ಕಾಂಗ್ರೆಸ್ ಪಕ್ಷದ ಮುಖಂಡರಾದ ರಂಗೇಗೌಡ, ಚಿನ್ನಪ್ಪ ಸೇರಿದಂತೆ ಕಾರ್ಯಕರ್ತರು ಇದ್ದರು.

    eedina
    ಈ ದಿನ ಡೆಸ್ಕ್‌
    Website |  + posts

    ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

    ಪೋಸ್ಟ್ ಹಂಚಿಕೊಳ್ಳಿ:

    LEAVE A REPLY

    Please enter your comment!
    Please enter your name here

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

    ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

    ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

    ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

    ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

    ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

    ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

    ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

    Download Eedina App Android / iOS

    X