ಶಿವಮೊಗ್ಗ | ಬೀದಿ ನಾಯಿಗಳ ಹಾವಳಿ ಬಗೆಹರಿಸುವಂತೆ ಪಾಲಿಕೆ ಆಯುಕ್ತರಿಗೆ ಮನವಿ

Date:

ಶಿವಮೊಗ್ಗ ನಗರದ ಹಲವು ಭಾಗಗಳಲ್ಲಿ ಬೀದಿ ನಾಯಿ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು, ಸ್ಥಳೀಯರು, ವಾಹನ ಸವಾರರು ನಿತ್ಯ ಮಹಾನಗರ ಪಾಲಿಕೆಗೆ ಹಿಡಿಶಾಪ ಹಾಕಿಕೊಂಡು ಓಡಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಗೋಪಾಲಗೌಡ ಬಡಾವಣೆ ಬಿ-ಬ್ಲಾಕ್, ಡಿ-ಬ್ಲಾಕ್‌ ನಿವಾಸಿಗಳು ʼಆಯುಕ್ತರೇ ಸ್ಥಳಕ್ಕೆ ಭೇಟಿ ನೀಡಿ ನಾಯಿ ಹಾವಳಿ ಬಗೆಹರಿಸಿʼ ಎಂದು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಮಾಡಿದ್ದಾರೆ.

- Advertisement -

ಸ್ಥಳೀಯ ನಿವಾಸಿ ಮಂಜುನಾಥ್‌ ಮನವಿ ಮಾಡಿದ್ದು, “ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ ಸ್ಥಳೀಯರು ಓಡಾಡಲು ಅಸಾಧ್ಯವಾದ ಸ್ಥಿತಿ ನಿರ್ಮಾಣವಾಗಿದೆ. ಬೈಕು, ಕಾರುಗಳ ಜತೆಗೆ ಮಕ್ಕಳು ಸೈಕಲ್ ಓಡಿಸಲೂ ಆಗದಷ್ಟು ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ ಮತ್ತು ಕೆಲವು ನಾಯಿಗಳು ಐದಾರು ಜನರಿಗೆ ಕಚ್ಚಿರುವ ಘಟನೆಯೂ ನಡೆದಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರ ? ಶಿವಮೊಗ್ಗ | ಶಾಸಕ ಚೆನ್ನಿ, ನೀವೆಷ್ಟು ಗೋಶಾಲೆಗಳಿಗೆ ಅನುದಾನ ನೀಡಿದ್ದೀರೆಂದು ಗಂಡಸ್ತನದಿಂದ ಹೇಳಿ: ಎಚ್‌ ಸಿ ಯೋಗೇಶ್

“ಈ ವಿಚಾರ ಸಂಬಂಧ ಹಲವು ಬಾರಿ ಕರೆ ಮಾಡಿದರೂ ಮಹಾನಗರ ಪಾಲಿಕೆ ಆಯುಕ್ತರು ಯಾವುದೇ ಪ್ರತಿಕ್ರಿಯೆ ನೀಡಿರುವುದಿಲ್ಲ. ಇಷ್ಟಾದರೂ ಕೂಡ ಸಮಸ್ಯೆ ಬಗಹರಿಸುತ್ತಿಲ್ಲ. ಸಮಸ್ಯೆ ಹೀಗೇ ಮುಂದುವರೆದರೆ ನಾವು ಏನು ಮಾಡಬೇಕು?. ಹಾಗಾಗಿ ಸ್ವತಃ ಮಹಾನಗರ ಪಾಲಿಕೆ ಆಯುಕ್ತರೇ ಸ್ಥಳಕ್ಕೆ ಭೇಟಿ ನೀಡಿ, ನಾಯಿಗಳ ಉಪಟಳವನ್ನು ಕಣ್ಣಾರೆ ವೀಕ್ಷಿಸಬೇಕು” ಎಂದು ಮನವಿ ಮಾಡಿದ್ದಾರೆ.

“ಜನವರಿ 20ರೊಳಗೆ ಸೂಕ್ತ ಕ್ರಮ ಜರುಗಿಸದಿದ್ದಲ್ಲಿ ಮಹಾನಗರ ಪಾಲಿಕೆ ಆಯುಕ್ತರ ಕಚೇರಿ ಎದರು ಧರಣಿ ಮಾಡದೆ ಸ್ಥಳೀಯ ನಿವಾಸಿಗಳಿಗೆ ಬೇರೆ ಮಾರ್ಗ ಉಳಿದಿರುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...