ಶಿವಮೊಗ್ಗ | ಪ್ರಾಧ್ಯಾಪಕರ ಮೇಲೆ ಹಲ್ಲೆ; ವಿದ್ಯಾರ್ಥಿಗಳ ಪ್ರತಿಭಟನೆ

Date:

ಶಿವಮೊಗ್ಗ ಜಿಲ್ಲೆಯ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಕಾಲೇಜಿನ ಎದುರು ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿಗಳಿಗೆ ಮನವಿ ನೀಡಿದರು.

- Advertisement -

“ಪ್ರೊ. ರಾಜು ಕೆ ಆರ್ ಅವರು ಉತ್ತಮ ಪ್ರಾಧ್ಯಾಪಕ, ಉಪನ್ಯಾಸಕರಾಗಿದ್ದು, ಕಾಲೇಜಿನಲ್ಲಿ ಅತ್ಯಂತ ನಿಷ್ಠೆಯಿಂದ ಪಾಠ ಮಾಡುತ್ತಿದ್ದಾರೆ. ಯಾರದೇ , ತಂಟೆಗೆ ಹೋಗದೆ ತಮ್ಮಷ್ಟಕ್ಕೆ ತಾವು ಮಕ್ಕಳ ಶೈಕ್ಷಣಿಕ ಶ್ರೇಯೋಭಿವೃದ್ಧಿ ದುಡಿಯುತ್ತಿದ್ದಾರೆ. ಅಂತಹ ಉಪನ್ಯಾಸಕರ ಮೇಲೆ ಹಲ್ಲೆ ಮಾಡಿರುವುದು ಅತ್ಯಂತ ಖಂಡನೀಯ. ಹಾಗಾಗಿ ಹಲ್ಲೆ ಮಾಡಿರುವ ತಂದೆ ಮತ್ತು ಮಗನ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕಾಲೇಜಿನ ಎದುರು ಉಪವಿಭಾಗಾಧಿಕಾರಿ ಯತೀಶ್ ಆರ್ ಮನವಿ ಸ್ವೀಕರಿಸಿ ಮಾತನಾಡಿ, “ಪ್ರಾಧ್ಯಾಪಕ ರಾಜು ಅವರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ. ಹಲ್ಲೆಗೆ ಸಂಬಂಧಪಟ್ಟಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುತ್ತದೆ” ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದರು.

ಈ ಸುದ್ದಿ ಓದಿದ್ದೀರಾ?

ಪ್ರತಿಭಟನೆಯಲ್ಲಿ ಮಧುಚಂದ್ರ, ರಕ್ಷಿತ್, ಶ್ರೇಯಸ್, ಯೋಗೇಶ್, ಶೈಲಜ, ವೈಷ್ಣವಿ, ಧನ್ಯ ಡಿ, ಪವನಕುಮಾರ್, ಗಜೇಂದ್ರ, ನಿಖಿಲ್, ಮಧು ಎಂ ಬಿ, ಭೂಮಿಕಾ ಸೇರಿದಂತೆ ಇತರರು ಇದ್ದರು.

ವರದಿ : ಅಮಿತ್ ಆರ್, ಆನಂದಪುರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...