ಶಿವಮೊಗ್ಗ, ನಿನ್ನೆ ಸಂಜೆ ನಗರದಲ್ಲಿ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜಾದ್ ಸೇರಿದಂತೆ ಇಬ್ಬರ ಮೇಲೆ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ದೊಡ್ಡಪೇಟೆ ಪೊಲೀಸರು ಇಂದು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮಿಥುನ್ ಕುಮಾರ್ ಜಿ.ಕೆ. ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ನಿನ್ನೆ ಸಂಜೆ ಸುಮಾರು 7:30ರ ಸುಮಾರಿಗೆ ಅಮ್ಜದ್ ಎಂಬುವವರ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಚಾಕು ಇರಿದಿದ್ದಾರೆ.
ಅಮ್ಜದ್ ಮತ್ತು ಅವರ ಸ್ನೇಹಿತ ಬೈಕ್‌ನಲ್ಲಿ ಹೋಗುತ್ತಿದ್ದಾಗ, ಹಿಂದಿನಿಂದ ಬಂದ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದಾರೆ.
ಚಾಕು ಇರಿದವರು ಅಪ್ರಾಪ್ತರು ಇರಬಹುದು ಎಂದು ಘಟನೆಯನ್ನು ನೋಡಿದವರು ಹೇಳಿದ್ದಾರೆ,” ಎಂದು ಎಸ್ಪಿ ಅವರು ತಿಳಿಸಿದರು.
ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿ, ಐದು ಜನ ಆರೋಪಿಗಳನ್ನು ಬಂಧಿಸಲಾಗಿದೆ.
ಈ ಐವರಲ್ಲಿ ಮುಖ್ಯವಾಗಿ ಹಲ್ಲೆ ಮಾಡಿದ ಓರ್ವ ಆರೋಪಿಯನ್ನು ಸಹ ಬಂಧಿಸಲಾಗಿದೆ,” ಎಂದು ಅವರು ಮಾಹಿತಿ ನೀಡಿದರು.