ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

Date:

Advertisements

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಹೇಳಿದರು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಹಾಗೂ ಹೊದಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊದಲ ವೀರಪ್ಪ ಗೌಡ ವೃತ್ತದಲ್ಲಿ ಶುಕ್ರವಾರ(ಏ.19) ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದಲ್ಲಿ ಬದಲಾವಣೆ ತರಬೇಕಿದೆ. ಇಲ್ಲಿ ಕಾಂಗ್ರೆಸ್ ಬಡವರ ಪರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅದೇ, ರೀತಿ ಆ ಯೋಜನೆಗಳನ್ನು ಎಲ್ಲಾ ಜಾತಿ- ಧರ್ಮದ ಜನರಿಗೆ ತಲುಪಿಸುವ ಹೊಣೆ ನಮ್ಮೆಲ್ಲರ ಮೇಲಿದೆ. ಅದೇ ಕಾರಣಕ್ಕೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಬೇಕಿದೆ ಎಂದರು.

Advertisements

ದೇಶದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನಾ ಅನೇಕ ಯೋಜನೆಗಳನ್ನು ಜನ ಸಾಮಾನ್ಯರಿಗೆ ಘೋಷಣೆ ಮಾಡಿದ್ದರು. ಆದರೆ, ಕಳೆದ ಹತ್ತು ವರ್ಷದ ಆಡಳಿತಾವಧಿಯಲ್ಲಿ ಬಡವರಿಗೆ ಪೂರಕವಾದ ಯಾವುದೇ ಯೋಜನೆಗಳನ್ನು ಜಾರಿಗೊಳಿಸಿಲ್ಲ ಎಂದರು.

ಬಿಜೆಪಿ ಆಡಳಿತಕ್ಕೆ ಬಂದರೆ, ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು‌. ಆದರೆ, ಅದು ಹುಸಿ ಆಗಿದೆ. ಇದೇ, ರೀತಿ ಹತ್ತು ಹಲವು ಯೋಜನೆಗಳು ಕೇವಲ ಕನಸುಗಳಾಗಿಯೇ ಉಳಿದಿವೆ. ಇದನ್ನು ಜನರು ಅರ್ಥ ಮಾಡಿಕೊಂಡು, ಈ ಚುನಾವಣೆಯಲ್ಲಿ ಮತ ಚಲಾಯಿಸಬೇಕು ಎಂದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಮಾತನಾಡಿ, ಇಲ್ಲಿನ ಸ್ಥಳೀಯರಾದ ವೀರಪ್ಪ ಗೌಡರು ಹೊದಲ ಪಂಚಾಯಿತಿ ವ್ಯಾಪ್ತಿಯ ಜನರಿಗೆ  ತಮ್ಮ ಸ್ವಂತ ಜಮೀನು ಬಿಟ್ಟುಕೊಟ್ಟು, ಬಡವರ ಬದುಕಿಗೆ ದಾರಿ ದೀಪವಾಗಿದ್ದಾರೆ ಎಂದರು.

ಅದೇ ರೀತಿ, ಹೊದಲ ಊರು ಕಲೆಗಳ ತವರೂರು. ಇಲ್ಲಿ ಅಂಬಾ ಮಿತ್ರ ಮಂಡಳಿ ನಾಟಕ ಕಂಪನಿ, ವಿಶ್ವ ಕರ್ಮ ಚಂಡೇ ಬಳಗ, ಜಾನಪದ ಕಲೆಯಾದ ಅಂಟಿಕೆ ಪಿಂಟಿಕೆ ಹಾಗೂ ಭಜನೆ ಹಾಡುಗಳಿಗೆ ಈ ಪ್ರದೇಶ ಹೆಸರು ವಾಸಿ ಎಂದರು.

ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಬೆನ್ನೆಲುಬಾಗಿ ನಿಂತಿದೆ. ಇಲ್ಲಿ ಪಕ್ಷಾತೀತವಾಗಿ ಸಮಾಜದ ಎಲ್ಲ ವರ್ಗದ ಜನರಿಗೂ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಶ್ರೇಯಸ್ಸು ಕಾಂಗ್ರೆಸ್‌ಗೆ ಸಲ್ಲುತ್ತದೆ. ಅದೇ, ರೀತಿ ಜಿಲ್ಲೆಯಲ್ಲಿ ಸರ್ಕಾರದ ಆಶಯಗಳನ್ನು ಉಳಿಸಿ ಬೆಳೆಸಿಕೊಂಡು ಹೋಗಲು ಅವಕಾಶ ಕಲ್ಪಿಸಿಕೊಡಿ ಎಂದು ಕೋರಿದರು.

ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಮಾತನಾಡಿ, ಬಿಜೆಪಿಯ ಕಪಿ ಮುಷ್ಠಿಯಿಂದ ದೇಶವನ್ನು ಉಳಿಸಬೇಕಿದೆ‌. ಇಲ್ಲಿ ಬದಲಾವಣೆಯ ಉದ್ದೇಶದಿಂದ ಈ ಚುನಾವಣೆ ನಡೆಯುತ್ತಿದೆ. ಹತ್ತು ವರ್ಷಗಳ ಕಾಲ ದೇಶವನ್ನು ಬಿಜೆಪಿ ಆಳಿದೆ. ಆದರೆ, ರೈತರಿಗೆ ನೀಡಿದ ಕೊಡುಗೆ ಹಾಗೂ ಸುಳ್ಳು ಭರವಸೆಗಳ ಬಗ್ಗೆ ಜನರು ಯೋಚಿಸಬೇಕು ಎಂದರು.

ದೇಶದಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ, ಕೇಂದ್ರದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜನ ಸಮಾನ್ಯರಿಗೆ ತಲುಪಲಿವೆ. ಅದೇ, ಕಾರಣಕ್ಕೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಬೇಕು ಎಂದರು.

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ರದ್ದು ಪಡಿಸಲಾಗುತ್ತದೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ, ಜನರು ಕಿವಿಕೊಡಕೂಡದು ಎಂದರು.

ನಟ ಶಿವರಾಜಕುಮಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮುಡುಬ ರಾಘವೇಂದ್ರ, ಕೆಸ್ತೂರು ಮಂಜುನಾಥ ಮತ್ತು ಕಡ್ತೂರು ದಿನೇಶ್, ಟಿ.ಎಲ್.ಸುಂದರೇಶ್, ಜಿನಾ ವಿಕ್ಟರ್, ಬಂಡೆ ವೆಂಕಟೇಶ, ಅಮರ್ ನಾಥ ಶೆಟ್ಟಿ, ಸುಶೀಲ ಶೆಟ್ಟಿ, ಬಿ.ಗಣಪತಿ,  ಪುಟೊಡ್ಲು ರಾಘವೇಂದ್ರ, ಕೃಷ್ಣ ಮೂರ್ತಿ, ಚಂದ್ರ ಶೇಖರ್, ಸಂದೀಪ, ಸಂಜಯ್, ಬಿ.ಟಿ.ನಾಗರಾಜ, ಡಿ.ಮಂಜುನಾಥ, ನಾಗರಾಜ ಶೆಟ್ಟಿ, ನಾಗರಾಜ ಆಚಾರ್ಯ, ಕೆ.ಎಲ್‌.ರವೀಂದ್ರ, ಸಂಜಯ್ ಶ್ರೀನಿವಾಸ ಹುಣಸೆಬೈಲು, ರಾಜೇಂದ್ರ ತಲವಡಗ, ರಮೇಶ್ ತಲವಡಗ ಇದ್ದರು‌.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X