ಇತ್ತೀಚೆಗೆ ಶಿವಮೊಗ್ಗದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಮತ್ತು ಘರ್ಷಣೆ ಘಟನೆಯು ರಾಜಕೀಯ ಆಯಾಮದಲ್ಲಿ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಕಿಡಿಕಾರುತ್ತಿದ್ದರೆ, ಘಟನೆ ಸಂಬಂಧ ಬಿಜೆಪಿ ಕೋಮು ದ್ವೇಷ ಹರಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ನಡುವೆ ಬಿಜೆಪಿ ನಾಯಕರು ಸತ್ಯಶೋಧನೆಗಾಗಿ ಶಿವಮೊಗ್ಗಗೆ ಗುರುವಾರ ಭೇಟಿ ನೀಡಿದ್ದಾರೆ. ಬಿಜೆಪಿ ನಾಯಕರ ಹೋಗಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್, “ಬಿಜೆಪಿ ನಾಯಕರು ಹೋಗಿರುವುದು ಸತ್ಯಶೋಧನೆಗಲ್ಲ, ಮತ್ತೊಂದು ಕಡ್ಡಿ ಗೀರಲು” ಎಂದು ಹೇಳಿದೆ.
ಬಿಜೆಪಿಗರ ಸತ್ಯಶೋಧನೆ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, “ಶಾಂತ ಸ್ಥಿತಿಗೆ ಬಂದಿರುವ ಶಿವಮೊಗ್ಗಕ್ಕೆ ಬಿಜೆಪಿ ನಾಯಕರು ಹೋಗಿರುವುದು ಸತ್ಯ ಶೋಧನೆಗಲ್ಲ ಮತ್ತೊಮ್ಮೆ ಬೆಂಕಿ ಕಡ್ಡಿ ಗೀರಲುʼʼ ಎಂದು ಆರೋಪಿಸಿದೆ.
ʼʼಸತ್ಯ ಶೋಧನೆ ಮಾಡುವುದಕ್ಕೆ ಪೊಲೀಸರಿದ್ದಾರೆ. ಕಾನೂನಿದೆ. ಬಿಜೆಪಿಯವರ ಅಗತ್ಯವಿಲ್ಲ. ಬಿಜೆಪಿ ಯಾವ ತನಿಖಾ ಏಜೆನ್ಸಿಯೂ ಅಲ್ಲʼʼ ಎಂದು ಹೇಳಿದೆ.
ʼʼಪರಿಸ್ಥಿತಿಯನ್ನು ಹದಗೆಡಿಸಲು ಹೊಂಚು ಹಾಕಿರುವ ಬಿಜೆಪಿಗರ ಸಂಚನ್ನು ಯಶಸ್ವಿಯಾಗಲು ನಮ್ಮ ಸರ್ಕಾರ ಬಿಡುವುದಿಲ್ಲʼʼ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
ಶಾಂತ ಸ್ಥಿತಿಗೆ ಬಂದಿರುವ ಶಿವಮೊಗ್ಗಕ್ಕೆ ಬಿಜೆಪಿ ನಾಯಕರು ಹೋಗಿರುವುದು ಸತ್ಯ ಶೋಧನೆಗಲ್ಲ ಮತ್ತೊಮ್ಮೆ ಬೆಂಕಿ ಕಡ್ಡಿ ಗೀರಲು.
ಸತ್ಯ ಶೋಧನೆ ಮಾಡುವುದಕ್ಕೆ ಪೊಲೀಸರಿದ್ದಾರೆ, ಕಾನೂನಿದೆ, ಬಿಜೆಪಿಯವರ ಅಗತ್ಯವಿಲ್ಲ, ಬಿಜೆಪಿ ಯಾವುದೇ ಯಾವ ತನಿಖಾ ಏಜೆನ್ಸಿಯೂ ಅಲ್ಲ.
ಪರಿಸ್ಥಿತಿಯನ್ನು ಹದಗೆಡಿಸಲು ಹೊಂಚು ಹಾಕಿರುವ ಬಿಜೆಪಿಗರ ಸಂಚನ್ನು…
— Karnataka Congress (@INCKarnataka) October 5, 2023
ನಳಿನ್ ಕುಮಾರ್ ಅವರ ನೇತೃತ್ವದಲ್ಲಿ ಸತ್ಯಶೋಧನಾ ತಂಡ ಶಿವಮೊಗ್ಗಗೆ ತೆರಳಿದೆ. ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳನ್ನು ಭೇಟಿ ಮಾಡಿ, ಮಾತನಾಡಿಸಿದೆ. ತಂಡದಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಜಿ ಸಚಿವ ಅಶ್ವತ್ ನಾರಾಯಣ್, ರವಿಕುಮಾರ್, ಕೆ.ಎಸ್ ಈಶ್ವರಪ್ಪ, ಸಂಸದ ರಾಘವೇಂದ್ರ ಸೇರಿದಂತೆ ಹಲವರು ಇದ್ದಾರೆ.