ಶಿವಮೊಗ್ಗ | ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಕಾರ್ಯಕರ್ತರ ಸಮಾವೇಶ

Date:

ಕ್ಷೇತ್ರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮತ ನೀಡಿ ಗೆಲ್ಲಿಸಿದ ಪರಿಣಾಮ ಇಲ್ಲಿ 500ಕ್ಕೂ ಹೆಚ್ಚು ಎಕರೆ ಭೂಮಿ ಖರೀದಿಸಿದ್ದಾರೆ. ಈ ಭಾರಿಯ ಚುನಾವಣೆಯಲ್ಲಿ ಪುನಃ ಗೆಲ್ಲಿಸಿದರೆ, 1000ಕ್ಕೂ ಹೆಚ್ಚು ಎಕ್ಕರೆ ಜಾಗ ಖರಿದೀಸಲು ಅವಕಾಶ ನೀಡಿದಂತಾಗುತ್ತದೆ ಎಂದು ಮಾಜಿ ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು.

- Advertisement -

ಶಿವಮೊಗ್ಗ ಜಿಲ್ಲೆಯ ಬೈಂದೂರು ಮತ್ತು ವಂಡ್ಸೆ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ (ಎಸ್ ಟಿ) ಘಟಕ ವತಿಯಿಂದ ಇಲ್ಲಿನ ಗೋಳಿಹೊಳೆಯ ಮಹಿಷಿಮರ್ಧಿನಿ ಸಭಾಭವನದಲ್ಲಿ ಶನಿವಾರ (ಏ.20) ಆಯೋಜಿಸಿದ್ದ ಮರಾಠಿ ಸಮುದಾಯದ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇಲ್ಲಿ 20 ಸಾವಿರಕ್ಕೂ ಹೆಚ್ಚು ಮರಾಠಿ ಸಮುದಾಯದವರು ವಾಸವಾಗಿದ್ದಾರೆ‌. ಮರಾಠಿ ಸಮುದಾಯದವರು ಧರ್ಮ ನಿಷ್ಠರು ಹಾಗೂ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡಿದ್ದಾರೆ‌. ಈ ಹಿಂದೆ ಇಲ್ಲಿ ಸಮಾಜಕ್ಕೆ 2 ಕೋಟಿ ರೂ. ಅನುದಾನ ಸರ್ಕಾರದಿಂದ ಬಿಡುಗಡೆಗೊಳಿಸಲಾಗಿತ್ತು. ಇದರಿಂದ, ಮರಾಠಿ ಸಮುದಾಯದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ‌ ಎಂದರು‌.

ಗೀತಾ ಶಿವರಾಜಕುಮಾರ ಅವರು ಪ್ರಮಾಣಿಕ ಹಾಗೂ ಸಾತ್ವಿಕ ಮಹಿಳೆ. ಅವರಿಗೆ ಮತ ನೀಡಿದರೆ, ಈ ಭಾಗದಲ್ಲಿ ಪ್ರಾಮಾಣಿಕವಾಗಿ ಉತ್ತಮ ಕೆಲಸ ಕಾರ್ಯಗಳು ನಡೆಯುತ್ತದೆ. ಇದಕ್ಕೆ ಜನರು ಅವಕಾಶ ಕಲ್ಪಿಸಿಕೊಡಬೇಕು ಎಂದು ಕೋರಿದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಮಾತನಾಡಿ, ಬಿಜೆಪಿಯಿಂದ ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಪರಿಶಿಷ್ಟ ಸಮುದಾಯದಿಂದ ಒಂದೇ ಒಂದು ಸ್ಥಾನ ಗೆಲ್ಲಲು ಸಾಧ್ಯವಾಗಲಿಲ್ಲ. ಅದಕ್ಕೆ ಕಾರಣ ಬಿಜೆಪಿಯ ಸುಳ್ಳು ಭರವಸೆಯ ಆಡಳಿತ. ಆದ್ದರಿಂದ, ಈ ಭಾರಿ ನನಗೆ ಅವಕಾಶ ಕಲ್ಪಿಸಿಕೊಡಿ, ನನ್ನ ತಂದೆಯ ಹಾದಿಯಲ್ಲಿ ಸಾಗಿ, ಜನ ಸಮಾನ್ಯರಿಗೆ ಪೂರಕವಾದ ಆಡಳಿತ ನಡೆಸುತ್ತೇನೆ ಎಂದರು.

ಬೈಂದೂರು ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರು ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದರು. ಪ್ರಸ್ತುತ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಬಡವರು ಹಾಗೂ ಅಶಕ್ತರ ಕೈ ಹಿಡಿದು ನಡೆಸುತ್ತಿದೆ. ಅದೇ ರೀತಿ, ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಮರಾಠಿ ಸಮುದಾಯಕ್ಕೆ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲು ಒತ್ತು ನೀಡಲಾಗುವುದು ಎಂದರು.

ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಎಸ್ ಟಿ ಸಮುದಾಯದವರು ಅಪಾರ ಕೊಡುಗೆ ನೀಡಿದ್ದಾರೆ. ಈ ಲೋಕಸಭಾ ಚುನಾವಣೆ ಸಹೋದರಿ ಗೀತಾ ಅವರನ್ನು ಗೆಲ್ಲಿಸಬೇಕಿದೆ. ಕಾರಣ, ಬಹುಕಾಲ ಆಡಳಿತದ ಚುಕ್ಕಾಣಿ ಹಿಡಿದ ಸಂಸದ ಬಿ.ವೈ.ರಾಘವೇಂದ್ರ ಅವರು ಈ ಭಾಗದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಸಿಲ್ಲ. ಆದ್ದರಿಂದ, ಇಲ್ಲಿ ಗೀತಾ ಶಿವರಾಜಕುಮಾರ ಪರ ಮತಯಾಚಿಸಲು ನೈತಿಕ ಹಕ್ಕಿದೆ ಎಂದರು.

ಮಾಜಿ ಮುಖ್ಯಮಂತ್ರಿ ದಿ. ಬಂಗಾರಪ್ಪ ಅವರ ಸಾಮಾಜಿಕ ಕಾರ್ಯಗಳು ಇಂದಿಗೂ ಜೀವಂತವಾಗಿವೆ. ಆ ಕಾರ್ಯಗಳಿಗೆ ಜೀವ ತುಂಬಲು ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಹರಸಬೇಕಿದೆ ಎಂದರು.

ಬೈಂದೂರು ಬ್ಲಾಕ್ ಕಾಂಗ್ರೆಸ್ ಎಸ್‌ಟಿ ಘಟಕ ಅಧ್ಯಕ್ಷ ಮಹಾಲಿಂಗ ನಾಯ್ಕ್ ಮಾತನಾಡಿ, ಈ ಭಾಗದಲ್ಲಿ ಅನೇಕ ವರ್ಷದಿಂದ ತಾಲ್ಲೂಕು ಪಂಚಾಯಿತಿಯ ಅಧಿಕಾರ ಹಿಡಿಯಲು ಕೂಡ ಮರಾಠಿ ಸಮುದಾಯಕ್ಕೆ ಆಗಿಲ್ಲ. ಹಿಂದಿನಿಂದಲೂ ಸಮುದಾಯದ ಕುರಿತ ತಾರತಮ್ಯ ನಡೆಯುತ್ತಲೇ ಇದೆ. ಇದಕ್ಕೆ ಉತ್ತರವಾಗಿ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಆರಿಸಬೇಕಿದೆ‌. ಸಮುದಾಯದ ಸಮಸ್ಯೆಗಳ ಆಹ್ವಾಲುಗಳನ್ನು ಸರ್ಕಾರದ ಮುಂದೆ ಇಡಲು ಗೀತಾ  ಶಿವರಾಜಕುಮಾರ್ ಅವರು ವೇದಿಕೆ ಆಗಲಿದ್ದಾರೆ ಎಂದರು.

ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ನಟ ಶಿವರಾಜಕುಮಾರ, ಉಡುಪಿ ಎಸ್‌ಟಿ ಘಟಕದ ಅಧ್ಯಕ್ಷ ಜೈರಾಮ ನಾಯ್ಕ್, ಶೇಷು ನಾಯ್ಕ್, ರಾಜು ಪೂಜಾರಿ, ಅನಿತಾ ಪುಟ್ಟನಾಯ್ಕ್, ಗೌರಿ ದೇವಾಡಿಗ, ಬೋಜ ನಾಯ್ಕ್, ಸಂತೋಷ ನಾಯ್ಕ್ ದುಡ್ಡಿನಗೋಳಿ, ಚಂದ್ರ ನಾಯ್ಕ್ ಮುತ್ತಣಗಿ, ನಾರಾಯಣ ನಾಯ್ಕ ಬಾಚುಕೂಳಿ ಸೇರಿ ಗಣ್ಯರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...