ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಜಿ ರಮೇಶ್ ಗುತ್ತಿಗೆದಾರರೊಬ್ಬರಿಂದ ₹20,000 ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಅಕ್ರಮ–ಸಕ್ರಮ ಯೋಜನೆಯಡಿ ಕೃಷಿ ಪಂಪ್‌ಸೆಟ್‌ಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಸೊರಬ ತಾಲೂಕಿನ ಬೆಟ್ಟದಕೊರ್ಲಿ ಗ್ರಾಮದ ಪ್ರಥಮ ದರ್ಜೆ ಗುತ್ತಿಗೆದಾರ ಜಿ ಪ್ರದೀಪ್ ಅವರಿಗೆ ಟ್ರಾನ್ಸ್‌ಫಾರ್ಮರ್ ನೀಡಲು ಇವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.
ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಎನ್‌ಎಚ್66ರ ರಸ್ತೆ ಕಾಮಗಾರಿ ಮಾರ್ಚ್ ವೇಳೆಗೆ ಪೂರ್ಣ: ಮೇಯರ್ ಸುಧೀರ್ ಶೆಟ್ಟಿ
ಲಂಚಕ್ಕೆ ಬೇಡಿಕೆ ಇಟ್ಟಿದ್ದರ ಕುರಿತು ಗುತ್ತಿಗೆದಾರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಆನವಟ್ಟಿಯಲ್ಲಿರುವ ಮೆಸ್ಕಾಂ ಕಚೇರಿಯಲ್ಲಿ ರಮೇಶ್ ಲಂಚದ ಹಣ ಪಡೆಯುವಾಗ ದಾಳಿ ನಡೆಸಿದ ಲೋಕಾಯುಕ್ತ ಡಿವೈಎಸ್‌ಪಿ ಉಮೇಶ ನಾಯ್ಕ ಹಾಗೂ ಇನ್ಸ್‌ಪೆಕ್ಟರ್ ಎಚ್ ಎಸ್ ಸುರೇಶ್ ನೇತೃತ್ವದ ತಂಡ ಸಾಕ್ಷಿ ಸಹಿತ ಆರೋಪಿಯನ್ನು ಬಂಧಿಸಿದೆ.