ಶಿವಮೊಗ್ಗ | ʼಬಸ್‌ ಬಂದರೆ ಸಾಕಪ್ಪʼ: ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ಸಾರ್ವಜನಿಕರ ಗೋಳು!

Date:

ಶಿವಮೊಗ್ಗದಲ್ಲಿ ಸರ್ಕಾರಿ ಬಸ್‌ಗಾಗಿ ಜನರು ಪರದಾಡುತ್ತಿದ್ದು, ಉಚಿತ ಬಸ್‌ ಇರಲಿ, ಸದ್ಯ ಬಸ್‌ ಬಂದರೆ ಸಾಕಪ್ಪ ಎನ್ನುತ್ತಿದ್ದಾರೆ. ದಿನ ನಿತ್ಯ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲವೆಂದು ಸಾರ್ವಜನಿಕರು ದೂರುತ್ತಿದ್ದಾರೆ.

- Advertisement -

ಗಂಟೆಗಟ್ಟಲೇ ಕಾದರೂ ಬಸ್ ಬರುವುದೇ ಇಲ್ಲ. ಇದರಿಂದ ತಡವಾಗಿ ಬರುವ ಬಸ್‌ಗಳಲ್ಲಿ ನೂಕು ನುಗ್ಗುಲು ಜಾಸ್ತಿಯಾಗುತ್ತಿದೆ. ಕೆಲವು ದಿನಗಳ ಹಿಂದೆ ಶಿವಮೊಗ್ಗ-ಭದ್ರಾವತಿ ಮಧ್ಯ ಬರುವ ಮಾಚೇನಹಳ್ಳಿ ಹಾಲಿನ ಡೈರಿ ಬಳಿ ಬಸ್ ವಿಪರೀತ ರಶ್ ಇದ್ದ ಕಾರಣ ಒಬ್ಬ ಮಹಿಳೆ ಬಸ್ ಬಾಗಿಲಲ್ಲಿ ನಿಂತು, ಕಾಲು ಜಾರಿ ಬಿದ್ದು ಸಾವಿಗೀಡಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಶಿವಮೊಗ್ಗ ನಗರದ ಯಾವುದೇ ಬಸ್ ನಿಲ್ದಾಣ ನೋಡಿದರೂ ಬಸ್‌ಗಾಗಿ ಕಾಯುತ್ತಿರುವ ಪ್ರಯಾಣಿಕರು ಕಾಣ ಸಿಗುತ್ತಾರೆ. ಇದರಿಂದ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ, ಹಿರಿಯ ನಾಗರಿಕರಿಗೆ, ಆಶಕ್ತರಿಗೆ, ಆಸ್ಪತ್ರೆಗೆ ಹೋಗುವ ರೋಗಿಗಳಿಗೆ, ಕಾರ್ಮಿಕರುಗಳು ಹಾಗೂ ಆಸ್ಪತ್ರೆ ಸಿಬ್ಬಂದಿ, ಗಾರ್ಮೆಂಟ್ಸ್ ಉದ್ಯೋಗಿಗಳು, ನಗರದಿಂದ ಹಳ್ಳಿಗೆ, ಹಳ್ಳಿಯಿಂದ ನಗರಕ್ಕೆ ಪ್ರಯಾಣಿಸುವ ಶಿಕ್ಷಕ ವೃಂದ, ಬಸ್‌ ನಂಬಿಕೊಂಡಿರುವ ರೈತಾಪಿ ಜನಗಳಗೆ ತುಂಬಾ ಅನಾನುಕೂಲವಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿದೆ.

‘ಸರ್ಕಾರದ ಶಕ್ತಿ ಯೋಜನೆಯೇ ಇದಕ್ಕೆ ಕಾರಣ’ ಎಂದು ಹಲವರು ದೂರುತ್ತಿದ್ದರೆ, ಸಾರ್ವಜನಿಕರು ಸಾರಿಗೆ ಅಧಿಕಾರಗಳ ಬಳಿ ತಮ್ಮ ಅಹವಾಲು ಹೇಳಿಕೊಂಡರೂ ಕೂಡ ಸರಿಪಡಿಸಿಕೊಡುತ್ತಿಲ್ಲ ಎಂದು ಆರೋಪಿಸುತ್ತಿದ್ದಾರೆ.

ಸಾರಿಗೆ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ, ಇನ್ನೂ ಕೂಡ ಸರಿಯಾದ ಕ್ರಮವಹಿಸಿಲ್ಲ. ಆದಷ್ಟು ಬೇಗ ಇದಕ್ಕೆ ಸರಿಯಾದ ಕ್ರಮ ವಹಿಸಿ ಸಕಾಲದಲ್ಲಿ ಬಸ್ ಒದಗಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಸಾರ್ವಜನಿಕರು ಅಗ್ರಹಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...