ಶಿವಮೊಗ್ಗ | ರಾಜ್ಯದಲ್ಲಿ ಜಾತಿ ಜನಗಣತಿ ಸಮೀಕ್ಷೆ ವರದಿ ಜಾರಿಗೊಳ್ಳಲಿದೆ: ಎಚ್‌ ಕಾಂತರಾಜ್

Date:

Advertisements

ಸಾಮಾಜಿಕ ನ್ಯಾಯಕ್ಕೆ ಬದ್ಧವಿರುವ ಮುಖ್ಯಮಂತ್ರಿ ಹಾಗೂ ಸರ್ಕಾರ ಅಧಿಕಾರದಲ್ಲಿರುವುದರಿಂದ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ(ಜಾತಿ ಜನಗಣತಿ) ಸಮೀಕ್ಷೆ ವರದಿ ಜಾರಿಗೊಳ್ಳಲಿದೆ. ಆ ಪ್ರಕ್ರಿಯೆಗೆ ಶುಕ್ರವಾರ ಚಾಲನೆ ದೊರೆತಿದೆ ಎಂದು ವರದಿ ರೂಪಿಸಿದ್ದ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಎಚ್‌ ಕಾಂತರಾಜ್ ಹೇಳಿದರು.

ಶಿವಮೊಗ್ಗ ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಮೀಕ್ಷೆ ನಿಖರವಾಗಿ ನಡೆದಿಲ್ಲ. ವೈಜ್ಞಾನಿಕವೂ ಅಲ್ಲವೆಂದು ಕೆಲವರು ಆರೋಪಿಸುತ್ತಾರೆ. ನಿಖರ ಪದಕ್ಕೆ ಶೇ.100ರಷ್ಟು ಎಂಬ ಅರ್ಥವಿದೆ. ಅಷ್ಟು ಹೇಳಲಿಕ್ಕೆ ಕಷ್ಟವಾಗಬಹುದು. ಆದರೆ ಸಮೀಕ್ಷೆಯ ವಿಧಾನವನ್ನು ಸುಪ್ರೀಂಕೋರ್ಟ್‌ನ ಮಾರ್ಗಸೂಚಿ ಹಾಗೂ ತಜ್ಞರ ಸಲಹೆಯಂತೆ ರೂಪಿಸಲಾಗಿತ್ತು. ಹೀಗಾಗಿ ಅದು ವೈಜ್ಞಾನಿಕ ಸಮೀಕ್ಷೆ” ಎಂದು ಹೇಳಿದರು.

“ವರದಿ ಸಿದ್ಧಪಡಿಸುವಾಗ ಆಂತರಿಕವಾಗಿ, ಬಹಿರಂಗವಾಗಿ ಸರ್ಕಾರ ಮಾತ್ರವಲ್ಲ, ಯಾರ ಕಡೆಯಿಂದಲೂ ಯಾವುದೇ ಹಸ್ತಕ್ಷೇಪವಾಗಿಲ್ಲವೆಂದು ಸ್ಪಷ್ಟಪಡಿಸಿದ ಕಾಂತರಾಜ್, ಸರ್ಕಾರಗಳು ಬದಲಾಗಿದ್ದು, ವರದಿ ಜಾರಿಗೊಳ್ಳಲು ವಿಳಂಬ ಆಗಿರಬಹುದು” ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

Advertisements

“ಕೆಲವು ಸಮುದಾಯಗಳು ನಿರ್ದಿಷ್ಟ ಸಂಖ್ಯೆಯನ್ನು ಕ್ಲೇಮ್‌ ಮಾಡುತ್ತಿರುವುದು ನಮಗೆ(ಆಯೋಗಕ್ಕೆ) ಗೊತ್ತಿಲ್ಲ. ಇವತ್ತು ಬಂದಿರುವ ಅಂಕಿ–ಅಂಶವನ್ನು ಅವರು ಒಪ್ಪಿಕೊಳ್ಳಬೇಕಾಗುತ್ತದೆ. ಅವರ ನಿರೀಕ್ಷೆಗೆ ಅನುಗುಣವಾಗಿ ಬಂದಿಲ್ಲವೆಂದರೆ ಆ ನಿರೀಕ್ಷೆ ಯಾವ ಮಾನದಂಡದ ಮೇಲೆ ರೂಪುಗೊಂಡಿತ್ತು ಎಂಬುದೂ ಇಲ್ಲಿ ಪ್ರಶ್ನೆಯಾಗುತ್ತದೆ” ಎಂದು ಹೇಳಿದರು.‌

ಈ ಸುದ್ದಿ ಓದಿದ್ದೀರಾ? ಉಡುಪಿ | ಇಂದಿನ ಸರಕಾರಗಳು ವಾಟ್ಸಾಪ್ ಮೂಲಕ ಆಡಳಿತ ನಡೆಸುತ್ತಿದೆ – ಪಂಜು ಗಂಗೊಳ್ಳಿ

“ಸಮಾಜದಿಂದ ಜಾತಿ ಆಧಾರಿತ ತಾರತಮ್ಯ ಹೊಡೆದೋಡಿಸಿ ಸಮಾನತೆ ತರಬೇಕೆಂಬುದು ಸಂವಿಧಾನದ ಆಶಯ. ಆದರೆ ಜಾತಿಯೇ ಅದಕ್ಕೆ ದೊಡ್ಡ ಶತ್ರು. ಆ ಶತ್ರುವಿನ ಬಲಾಬಲ ಅರಿಯಲು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನೊಳಗೊಂಡ ಜಾತಿಯ ಗಣತಿ ಅಗತ್ಯ” ಎಂದು ಪ್ರತಿಪಾದಿಸಿದರು.

“ಸಮಾಜಕ್ಕೆ ಆರೋಗ್ಯ ಸರಿ ಇದೆಯೇ ಇಲ್ಲವೇ ಎಂದು ತಿಳಿದುಕೊಳ್ಳಲು ಆಗಾಗ ಇಂತಹ ಗಣತಿ, ಸಮೀಕ್ಷೆಗಳ ಮಾಡಬೇಕು. ಕಾಯಿಲೆ ಗುರುತಿಸಿ ತಕ್ಕ ಔಷಧಿ ಕೊಡಲು ಅದರಿಂದ ನೆರವಾಗಲಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X