ಕೇಂದ್ರ ಬಿಜೆಪಿ ಸರ್ಕಾರ ಸಂಸತ್ತಿನ ಉಭಯಸದನಗಳಲ್ಲಿ ಒಟ್ಟು 142 ಸಂಸದರನ್ನು ಅಮಾನತುಗೊಳಿಸಿ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ. ಸಂಸತ್ತನ್ನು ಸ್ಮಶಾನವನ್ನಾಗಿ ಮಾಡಿದೆ ಎಂದು ಶಿವಮೊಗ್ಗ ಕಾಂಗ್ರೆಸ್ ಮುಖಂಡ ಎಚ್.ಎಸ್ ಸುಂದರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. “ಸದನದಲ್ಲಿ ಆಗುಂತುಕರಿಗೆ ಪಾಸ್ ಕೊಟ್ಟ ಸಂಸದ ಪ್ರತಾಪ್ ಸಿಂಹ ವಿರುದ್ಧ ಕ್ರಮ ತೆಗೆದುಕೊಳ್ಳದ ಬಿಜೆಪಿ, 142 ಸಂಸದರನ್ನು ಅಮಾನತ್ತುಗೊಳಿಸಿ ಪ್ರಜಾಪ್ರಭುತ್ವದ ಕಗ್ಗೋಲೆ ಮಾಡಿದೆ” ಎಂದು ಆರೋಪಿಸಿದರು.
ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.