ಶಿವಮೊಗ್ಗ | ಮದುವೆಯಾಗುವುದಾಗಿ ನಂಬಿಸಿ ವಂಚನೆ; ಮಹಿಳೆಯಿಂದ ₹7 ಲಕ್ಷ ಪೀಕಿಸಿದ ಖದೀಮ

Date:

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮಹಿಳೆಯೊಬ್ಬರು ವೈವಾಹಿಕ ವೆಬ್‌ಸೈಟ್‌ ಮೂಲಕ ವಂಚನೆಗೆ ಒಳಗಾಗಿದ್ದು, ₹7 ಲಕ್ಷ ಕಳೆದುಕೊಂಡಿರುವ ಘಟನೆ ನಡೆದಿದೆ.

- Advertisement -

ವಿಜಯಪುರದ ಹಿಟ್ಟಿನಹಳ್ಳಿ ಗ್ರಾಮದ ಭೀಮರಾಜ್(40) ವೈವಾಹಿಕ ವೆಬ್ಸೈಟ್ ಮೂಲಕ ಮಹಿಳೆಯೊಂದಿಗೆ ಸಂಪರ್ಕ ಹೊಂದಿದ್ದು, ದಾವಣಗೆರೆ ಜಿಲ್ಲೆಯ ಮೂಲ ಹೊಂದಿರುವ ರಾಜ್ಯ ಸರ್ಕಾರಿ ಉದ್ಯೋಗಿಯೆಂದು ಸುಳ್ಳು ಹೇಳಿಕೊಂಡು ಮಹಿಳೆಯಿಂದ ಹಣ ಪಡೆದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಆರೋಪಿ ಭೀಮರಾಜ್ ಮದುವೆಯಾವುದಾಗಿ ನಂಬಿಸಿ ಮಹಿಳೆಯಿಂದ ₹7 ಲಕ್ಷ ಹಣ ಪಡೆದುಕೊಂಡಿದ್ದಾನೆ. ಆರು ತಿಂಗಳ ಕಾಲ ಇಬ್ಬರೂ ಮಾತನಾಡುವುದು, ಭೇಟಿಯಾಗುವ ಮೂಲಕ ವಿಶ್ವಾಸವನ್ನು ಬೆಳೆಸಿಕೊಂಡಿದ್ದು, ʼತಮ್ಮ ತಾಯಿಯ ವೈದ್ಯಕೀಯ ಚಿಕಿತ್ಸೆಗೆ ಹಣ ಬೇಕಾಗಿದೆʼಯೆಂದು ಮಹಿಳೆಯನ್ನು ಪುಸಲಾಯಿಸಿ ಮಹಿಳೆಯಿಂದ ಹಣ ಪಡೆದುಕೊಂಡಿದ್ದಾನೆ” ಎಂದು ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರಿನಲ್ಲಿ ಕೋಮುಗಲಭೆ ಸೃಷ್ಟಿಸಲು ಆರ್‌ಎಸ್‌ಎಸ್‌-ಬಿಜೆಪಿ ಹುನ್ನಾರ?

“ವಂಚನೆ ಕಂಡು ಬಂದ ಬಳಿಕ ಸಂತ್ರಸ್ತೆ ಭದ್ರಾವತಿ ಹಳೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಭೀಮರಾಜ್ ವಿರುದ್ಧ ರಾಜ್ಯದ ವಿವಿಧ ಭಾಗಗಳ 10 ಪೊಲೀಸ್ ಠಾಣೆಗಳಲ್ಲಿ 12 ಪ್ರಕರಣಗಳು ದಾಖಲಾಗಿವೆಯೆಂದು ತನಿಖೆಯಿಂದ ತಿಳಿದುಬಂದಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

“ಇದೀಗ ಭೀಮರಾಜ್ ಪ್ರಸ್ತುತ ಕೊಪ್ಪಳ ಜಿಲ್ಲಾ ಕಾರಾಗೃಹದ ಬಂಧನದಲ್ಲಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...