ಶಿವಮೊಗ್ಗ | ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲೇ ಪರಿಸರ ಪ್ರಜ್ಞೆ ಮೂಡಿಸಬೇಕು: ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್

Date:

Advertisements

ಮುಂದಿನ ಪೀಳಿಗೆಗೆ ನಾವು ಕೊಡುಗೆ ನೀಡುವುದಾದರೆ ಪರಿಸರ ಉಳಿಸಬೇಕು. ಹಾಗಾಗಿ ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ಪರಿಸರ ಪ್ರಜ್ಞೆ ಮೂಡಿಸಬೇಕು ಎಂದು ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್ ತಿಳಿಸಿದರು.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮೇಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳುವೆ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಹಮ್ಮಿಲಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಮಾದರಿಯ ಗಿಡಗಳು ಹಾಗೂ ಹಣ್ಣಿನ ಗಿಡಗಳನ್ನು ನೀಡಿ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರೋಟರಿ ಕ್ಲಬ್

“ಉತ್ತಮ ಪರಿಸರವನ್ನು ಉಳಿಸಿಕೊಳ್ಳಲು ಮಕ್ಕಳು ಶೈಕ್ಷಣಿಕ ಹಂತದಲ್ಲಿ ಅದರ ಬಗ್ಗೆ ಕಾಳಜಿಯನ್ನು ಹೊಂದಿರಬೇಕು. ಮುಂದಿನ ಪೀಳಿಗೆಗೆ ಮತ್ತು ನಮ್ಮ ರಕ್ಷಣೆಗೆ ಪರಿಸರ ಅಗತ್ಯ” ಎಂದು ತಿಳಿಸಿದರು.

Advertisements

ವಲಯ ತರಬೇತಿದಾರ ಕೆಪಿಎಸ್ ಸ್ವಾಮಿ ಮಾತನಾಡಿ, “ಇತ್ತೀಚಿನ ದಿನಗಳಲ್ಲಿ ಪರಿಸರವು ಹೇಗೆ ಕುಲಷಿತವಾಗುತ್ತಿದೆ ಎಂದು ನಾವು ತಿಳಿಯಲ್ಪಟ್ಟಿದ್ದೇವೆ ಹಾಗೂ ನಮ್ಮ ಸುತ್ತಮುತ್ತಲಿನ ಪರಿಸರದ ಅವಘಡಗಳು ಸಂಭವಿಸದಂತೆ ಮಣ್ಣಿನ ರಕ್ಷಣೆಯನ್ನು ಗಿಡಗಳನ್ನು ನೆಡುವುದರ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕು” ಎಂದು ತಿಳಿಸಿದರು.

ರೋಟರಿ ಕ್ಲಬ್‌ 1

ಪೂರ್ವಾಧ್ಯಕ್ಷ ನಾಗರಾಜ್ ಮಾತನಾಡಿ, “ಶಾಲಾ ಮಕ್ಕಳು ಒಂದು ಗಿಡದ ಜವಾಬ್ದಾರಿಯನ್ನು ತೆಗೆದುಕೊಂಡು ಸಂರಕ್ಷಿಸಿದರೆ ಅವರಿಗೆ ಮುಂದಿನ ಆರು ತಿಂಗಳಲ್ಲಿ ಬಹುಮಾನ ನೀಡುತ್ತೇವೆ” ಎಂದು ಮಕ್ಕಳಿಗೆ ಉತ್ತೇಜನ ನೀಡಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ನನ್ನನ್ನು ಕೊಲ್ಲಲು ಮುಸ್ಲಿಂ ಯುವಕರಿಗೆ ಸುಪಾರಿ ನೀಡಲಾಗಿದೆ: ಅಂಜುಮನ್ ಮುಖಂಡ ಇಸ್ಮಾಯೀಲ್ ತಮಟಗಾರ

ನಿಕಟಪೂರ್ವ ಅಧ್ಯಕ್ಷ ಭರತ್ ಕುಮಾರ್, ಅಂಬಳಿಕೆ ಗಿರೀಶ್, ಮನೋಜ್ ಕುಮಾರ್, ಪಿ ವಿ ಭರತ್ ಕುಮಾರ್, ವಾಣಿ ಗಣೇ, ಇನ್ನರ್‌ವೀಲ್ ಕ್ಲಬ್ ತೀರ್ಥಹಳ್ಳಿ ರೊ. ನಯನ ಜಯಪ್ರಕಾಶ್ ಶೆಟ್ಟಿ, ಜ್ಯೋತಿ, ಪ್ರತಿಮಾ, ವಿಶ್ವನಾಥ ಶೆಟ್ಟಿ ಸೇರಿದಂತೆ ಶಿಕ್ಷಕರು ಊರಿನ ಗ್ರಾಮಸ್ಥರು ಇದ್ದರು.

ವರದಿ: ರಶ್ಮಿ ಶ್ರೀಕಾಂತ್ ನಾಯಕ್, ತೀರ್ಥಹಳ್ಳಿ

WhatsApp Image 2025 07 12 at 17.38.34 e1752322718567
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X