ಶಿವಮೊಗ್ಗ | ದಲಿತ ಮಹಿಳೆಗೆ ಅವಮಾನ: ಬಿಜೆಪಿ ಜಿಲ್ಲಾಧ್ಯಕ್ಷರ ರಾಜೀನಾಮೆಗೆ ಕಾಂಗ್ರೆಸ್ ಮಹಿಳಾ ಘಟಕ ಒತ್ತಾಯ

Date:

ಸಾಗರದ ನಗರಸಭೆಯಲ್ಲಿ ದಲಿತ ಮಹಿಳೆಯನ್ನು ‘ಅಪರಾಧಿ’ ಎಂದು ಅವಮಾನ ಮಾಡಿರುವ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಕೂಡಲೇ ರಾಜೀನಾಮೆ ನೀಡಬೇಕು. ‌ಇಲ್ಲವಾದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಶಿವಮೊಗ್ಗ ಕಾಂಗ್ರೆಸ್ ಮಹಿಳಾ ಘಟಕ ಎಚ್ಚರಿಕೆ ನೀಡಿದೆ.

- Advertisement -

ಅಪಮಾನ ಮಾಡಲಾಗಿರುವ ಬಗ್ಗೆ ಜಿಲ್ಲಾ ಕಾಂಗ್ರೆಸ್ ಮಹಿಳೆ ಘಟಕದ ಪದಾಧಿಕಾರಿಗಳು ಇಂದು ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಜಿಲ್ಲಾಧ್ಯಕ್ಷರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಜಿಲ್ಲಾ ಕಾಂಗ್ರೆಸ್ ಮಹಿಳೆ ಘಟಕದ ಅಧ್ಯಕ್ಷೆ ಅನಿತಾ ಕುಮಾರಿ ಮಾತನಾಡಿ, ಸಾಗರದ ನಗರ ಸಭೆ ಅಧ್ಯಕ್ಷರ ಸ್ಥಾನವನ್ನು ಸಾಮಾನ್ಯ ಮಹಿಳೆಗೆ ಮೀಸಲಾತಿ ಪ್ರಕಟಿಸಲಾಗಿತ್ತು. ಕಳೆದ ಬಾರಿಯೂ ಸಾಮಾನ್ಯ ಮಹಿಳೆಗೆ ಮೀಸಲಾತಿ ನೀಡಲಾಗಿತ್ತು. ಈ ಬಾರಿಯೂ ಮೀಸಲಾತಿ ಸಾಮಾನ್ಯರಿಗೆ ಪ್ರಕಟಿಸಿದ ಕಾರಣ ಮೀಸಲಾತಿ ಸರಿಯಿಲ್ಲವೆಂದು ಆರೋಪಿಸಿ ನ್ಯಾಯಾಲಯಕ್ಕೆ ಹೋಗಲಾಗಿತ್ತು. ಬಿಸಿಎಂ, ಬಿಸಿಎಂ ಬಿ, ಎಸ್ ಎಸ್ಟಿ ಗೆ ಮೀಸಲಾತಿ ಇದುವರೆಗೂ ಪ್ರಕಟವಾಗದ ಕಾರಣ ಎಸ್‌ಟಿ ಮಹಿಳಾ ಸದಸ್ಯೆ ನ್ಯಾಯಾಲಯಕ್ಕೆ ಹೋಗಿ ಮೀಸಲಾತಿಯನ್ನ ಪ್ರಶ್ನಿಸಿದ್ದರು. ಅ.10 ರಂದು ನಡೆದ ಸಾಗರದ ನಗರ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಭಾಗಿಯಾಗಿದ್ದರು. ಲಲಿತಮ್ಮರಿಗೆ ನಿಕೃಷ್ಟವಾಗಿ ಮೇಘರಾಜ್ ಮಾತನಾಡಿದ್ದಾರೆ. ದಲಿತ ಮಹಿಳೆಗೆ ಅವಾಚ್ಯವಾಗಿ ಮಾತನಾಡಿ ಸಭೆಯಿಂದ ಹೊರಹೋಗಿ ಎಂದಿದ್ದಾರೆ ಎಂದು ತಿಳಿಸಿದರು.

ಟಿ.ಡಿ ಮೇಘರಾಜ್ ಕಾನೂನಿನ ಜಡ್ಜಾ? ಸಮಾನತೆಯಲ್ಲಿ ಲಲಿತಮ್ಮ ನ್ಯಾಯಾಲಯಕ್ಕೆ ಹೋದರೆ ನೀವು ಅವಮಾನಿಸುತ್ತೀರಾ ಎಂದು ಸವಾಲು ಎಸೆದ ಅವರು,. ಮಹಿಳೆಯರಿಗೆ ಗೌರವ ಕೊಡುವ ಸಂಸ್ಕೃತಿ ಇಲ್ಲದ ಬಿಜೆಪಿ ನಾಯಕರು, ಯಾವ ಮಹಿಳಾ ಸಬಲೀಕರಣವನ್ನು ಎತ್ತಿ ಹಿಡಿಯುತ್ತಾರೆ ಎಂದು ದೂರಿದರು.

ಲಲಿತಮ್ಮನಿಗೆ ಮಾಡಿರುವ ಅಪಮಾನಕ್ಕೆ ಮೇಘರಾಜ್ ಕ್ಷಮೆ ಕೇಳಬೇಕು. ಮೂರು ಬಾರಿ ಸಾಗರದಲ್ಲಿ ಆಯ್ಕೆಯಾಗಿ ಒಮ್ಮೆ ಅಧ್ಯಕ್ಷರಾಗಿದ್ದಾರೆ. ಮೂರು ಬಾರಿ ಸದಸ್ಯರಾದ ಲಲಿತಮ್ಮರಿಗೆ ಅವಮಾನಿಸಿದ ಮೇಘರಾಜ್ ಜಿಲ್ಲಾ ಬಿಜೆಪಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಒಂದು ವೇಳೆ ಕ್ಷಮೆಯಾಚಿಸದೇ ಇದ್ದರೆ, ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...