ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಕೂಡ್ಲಿಗೆರೆ ಗ್ರಾಮ ಪಂಚಾಯಿತ್ ಸಂವಿಧಾನ ಜಾಗೃತಿ ಜಾಥವನ್ನು ಸ್ವಾಗತಿಸಿ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಸಂವಿಧಾನದ 75ನೇ ವರ್ಷದ ಅಂಗವಾಗಿ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾತ ಕೂಡ್ಲಿಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿತಲುಪಿದ್ದು, ಸುತ್ತ ಮುತ್ತಲಿನ ಗ್ರಾಮದ ಮುಖಂಡರು ಯುವಕರು ಹಾಗೂ ಸ್ಥಳೀಯ ಶಾಲೆಯ ಮಕ್ಕಳು, ಶಿಕ್ಷಕ ವರ್ಗದವರು ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು ಅಧಿಕಾರಿಗಳು, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮುಖಂಡರು, ಬಂಜಾರ್ ಸಮಾಜದ ಯುವ ಮುಖಂಡರು, ಎಲ್ಲಾ ಧರ್ಮದ ಜನರು ಒಗ್ಗಟ್ಟಾಗಿ ಕೂಡ್ಲಿಗೆರೆ ಗ್ರಾಮದ ಮುಖ್ಯ ಬೀದಿಗಳಲ್ಲಿ ಸಂವಿಧಾನ ಜಾಗೃತಿ ಜಾತದಲ್ಲಿ ಭಾಗಿಯಾಗಿದ್ದರು.
ಕಾರ್ಯಕ್ರಮದಲ್ಲಿ ಡೊಳ್ಳು ಕುಣಿತ, ಕೋಲಾಟ ಹಾಗೂ ವಿವಿಧ ಶಾಲೆಯ ಮಕ್ಕಳು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ವೇಷಭೂಷಣಗಳನ್ನು ಹಾಕಿಕೊಂಡು ವಿವಿಧ ರೀತಿಯಲ್ಲಿ ನೃತ್ಯ ಮಾಡಿ ಸಂವಿಧಾನ ಜಾಗೃತಿ ಜಾತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
