ಆಶ್ರಯ ಯೋಜನೆಯಡಿ ಶಿವಮೊಗ್ಗದ ಗೋವಿಂದಾಪುರದಲ್ಲಿ 3000 ಮನೆಗಳ ಕಾಮಗಾರಿ ನಡೆಯುತ್ತಿದೆ. ವಸತಿ ಸಮುಚ್ಛಯಗಳಿಗೆ ವಿದ್ಯುತ್, ನೀರಿನ ಸಂಪರ್ಕ, ರಸ್ತೆ,ಬೀದಿ ದೀಪ, ಚರಂಡಿ ಸೇರಿದಂತೆ ಶೀಘ್ರದಲ್ಲೇ ಮೂಲ ಸೌಕರ್ಯಗಳನ್ನು ಪೂರ್ಣಗೊಳಿಸಿ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲು ದಿನಾಂಕ ನಿಗದಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ತಿಳಿಸಿದರು.
ಆಶ್ರಯ ವಸತಿ ಸಮುಚ್ಛಯಗಳಿಗೆ ಮಹಾನಗರಪಾಲಿಕೆ ಆಯುಕ್ತರು ಮತ್ತು ಸಂಬಧಿಸಿದ ಇಲಾಖೆಯ ಇಂಜಿನಿಯರ್‌ಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ಕಾಮಗಾರಿಯನ್ನು ಶೀಘ್ರ ಸಂಪೂರ್ಣ ಮಾಡಲು ಸಲಹೆ, ಸೂಚನೆ ನೀಡಿದರು.
ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಆಟೋ ಚಾಲಕರ ಮಗಳಿಗೆ ಒಲಿದ 2 ಚಿನ್ನದ ಪದಕ
ಮಹಾನಗರಪಾಲಿಕೆಯ ಹೌಸಿಂಗ್ ಫಾರ್ ಆಲ್ ಯೋಜನೆಯಡಿ ಗೋವಿಂದಾಪುರದಲ್ಲಿ ಒಟ್ಟು ₹260 ಕೋಟಿ ಅನುದಾನದಲ್ಲಿ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಈಗಾಗಲೇ 624 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಇದೀಗ 652 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, ಮೂಲ ಸೌಕರ್ಯಗಳ ಕೆಲಸ ನಡೆಯುತ್ತಿದೆ. ಇದು ಪೂರ್ಣಗೊಂಡ ತಕ್ಷಣ ಫಲಾನುಭವಿಗಳಿಗೆ ಹಂಚಿಕೆ ಮಾಡಲು ದಿನಾಂಕ ನಿಗದಿಗೊಳಿಸಲಾಗುವುದು ಎಂದರು.
