ಶಿವಮೊಗ್ಗ | ಟೋಲ್‌ಗೇಟ್ ನಿರ್ಮಾಣ: ಚೆನ್ನಕೊಪ್ಪ ಗ್ರಾಮಸ್ಥರಿಂದ ವಿರೋಧ

Date:

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್‌ಗೇಟ್ ನಿರ್ಮಿಸಲು ತಯಾರಿ ನಡೆಯುತ್ತಿದ್ದು, ಇದನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲೆ ಆನಂದಪುರ ಹೋಬಳಿಯ ಗಿಳಾಲಗುಂಡಿ ವ್ಯಾಪ್ತಿಯ ಚೆನ್ನಕೊಪ್ಪ ಗ್ರಾಮದ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -

ಚೆನ್ನಕೊಪ್ಪ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ರೈತರು ಹಾಗೂ ಜನಸಾಮಾನ್ಯರು ಭೂಮಿ ಮತ್ತು ಮನೆಗಳ ನಿರ್ಮಿಸಿ, ಬದುಕನ್ನು ರೂಪಿಸಿಕೊಂಡಿದ್ದಾರೆ. ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿದ್ದೇವೆ. ಕೃಷಿ ಭೂಮಿ ಬಿಟ್ಟರೆ ಬೇರೆ ಯಾವ ಭೂಮಿ ಇರುವುದಿಲ್ಲ ಎಂದು ಗ್ರಾಮಸ್ಥರು ತಮ್ಮ ನೋವು ತೋಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಈ ಟೋಲ್‌ಗೇಟ್ ನಿರ್ಮಾಣದಿಂದಾಗಿ ನಮ್ಮ ಬದುಕು ಅತಂತ್ರವಾಗುತ್ತದೆ. ಆದಷ್ಟು ಬೇಗ ಈ ಯೋಜನೆಯನ್ನು ರದ್ದುಗೊಳಿಸಿ ಟೋಲ್‌ಗೇಟ್ ಸ್ಥಳಾಂತರಿಸಿ ಬೇರೆಡೆ ನಿರ್ಮಿಸಿಕೊಳ್ಳಬೇಕು ಎಂದು ಚೆನ್ನಕೊಪ್ಪ ಗ್ರಾಮದ ಜನ ಆಚಾಪುರ ಗ್ರಾಮ ಪಂಚಾಯತಿ ಮೂಲಕ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದರು.

ಇದನ್ನೂ ಓದಿದ್ದೀರಾ?: ಕಡೂರು | ನಾಪತ್ತೆಯಾಗಿದ್ದ ಎರಡು ವರ್ಷದ ಮಗು ತರೀಕೆರೆಯಲ್ಲಿ ಪತ್ತೆ

ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಖಲೀಮುಲ್ಲಾ , ಸದಸ್ಯರಾದ ಪುಷ್ಪ, ಮತ್ತು ಪ್ರಕಾಶ್ ಮನವಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಚೆನ್ನಕೊಪ್ಪದ ಗ್ರಾಮಸ್ಥರಾದ ಶಿವಕುಮಾರ್, ನೇತ್ರಾವತಿ ರಮೇಶ್, ರವಿ, ಲೋಹಿತ, ಲಚಿಕೇತ , ಶೇಖರಪ್ಪ, ಸನಾವುಲ್ಲ ಹಾಗೂ ಸಾಗರ ತಾಲೂಕು ಮಾಜಿ ಪಂಚಾಯತ್ ಸದಸ್ಯರಾದ ಹನುಮಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ: ಅಮಿತ್ ಆರ್, ಆನಂದಪುರ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ತಂದೆ-ತಾಯಿ ಬದುಕಿರುವಾಗಲೇ ಗೌರವಿಸಿ, ಪ್ರೀತಿಸಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ತಂದೆ-ತಾಯಿಗಳು ಬದುಕಿರುವಾಗಲೇ ಮಕ್ಕಳಾದ ನಾವು ಅವರನ್ನು ಸದಾ ಗೌರವದಿಂದ ಕಾಣಬೇಕು....

ಭದ್ರಾವತಿ | ಜುಗಾರಿ ಅಡ್ಡೆ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ!

ಭದ್ರಾವತಿ ಅಕ್ರಮ ಇಸ್ಪೀಟು, ತೂರಾ ಬಿಲ್ಲೆ ಜುಗಾರಿ ಅಡ್ಡೆ ಮಾಹಿತಿ ನೀಡಿದಕ್ಕೆ...

ಶಿಕಾರಿಪುರದಿಂದಲೇ ರಾಜಕೀಯ ‘ಶಿಕಾರಿ’ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರದಿಂದ ರಾಜಕೀಯ ‘ಶಿಕಾರಿ’ ಇಂದಿನಿಂದಲೇ ಆರಂಭವಾಗಿದೆ. ಶಿಕಾರಿಯಾಡುವ ಜವಾಬ್ದಾರಿಯನ್ನು ಇಲ್ಲಿನ ಜನತೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...