ಶಿವಮೊಗ್ಗ | ಡೆಂಘೀ ಜ್ವರ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿ: ಸಚಿವ ಮಧು ಬಂಗಾರಪ್ಪ

Date:

ಡೆಂಘೀ ಜ್ವರ ವ್ಯಾಪಾಕವಾಗಿ ಹರಡುತ್ತಿರುವ ಕಾರಣ, ಡೆಂಘೀ ಜ್ವರ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿ ಹಾಗೂ ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶ ಮಾಡುವ ದಿನವೆಂದು ನಿರ್ಮೂಲನೆ ಪೋಸ್ಟರ್ ಬಿಡುಗಡೆ ಮಾಡಿ, ನಂತರ ಗಪ್ಪಿಮೀನು ಸಾಕುವ ಮೂಲಕ ನಮ್ಮ ನಿಮ್ಮೆಲ್ಲರ ಮನೆಯ ತೊಟ್ಟಿಯಲ್ಲಿ ಗಪ್ಪಿಮೀನು ಬಿಟ್ಟರೆ ಡೆಂಘೀ ಸೊಳ್ಳೆ ಉತ್ಪತ್ತಿಯಾಗುವುದು ನಿಲ್ಲುತ್ತದೆ. ಇದರಿಂದ ಡೆಂಘೀ ಹರಡುವಿಕೆ ಕಡಿಮೆಯಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಗಪ್ಪಿಮೀನು ನೀಡುವ ಮೂಲಕ ತಿಳಿಸಿದರು.

- Advertisement -

ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆ ಸಮಸ್ಯೆಗಳ ಅಹವಾಲು ಸ್ವೀಕರಿಸಲು ಜರುಗಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಕಬ್ಬಿಗೆ ರೂ.5,500 ಬೆಂಬಲ ಬೆಲೆ ಆಗ್ರಹ: ಬಿರುಬಿಸಿಲಿಗೆ ಜಗ್ಗದೇ...

ಸೆಪ್ಟೆಂಬರ್ 29 ರಂದು ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸಿದ್ದರು. ನಂತರ ಬಿಜೆಪಿ ಪಕ್ಷದ ಶಾಸಕರು ಮನವೊಲಿಸಿ ದೆಹಲಿಯಲ್ಲಿ ಸಭೆ ಮಾಡುವುದಾಗಿ ತಿಳಿಸಿದ್ದರು. ಆದರೆ ದೆಹಲಿಯಲ್ಲಿ ರೈತ ಮುಖಂಡರು ಮತ್ತು ಕೇಂದ್ರ ಸಚಿವರ...

ʼಜೆನ್‌ ಝಿʼ ಎಂಬ ಸಮತಾ ನಿಲುವು

ಸುಪ್ರಿಂಕೋರ್ಟಿನ ಮುಖ್ಯಸ್ಥರು ಇದೀಗ ಮತ್ತೊಂದು ಹೇಳಿಕೆಯ ಮೂಲಕ ಜಗತ್ತಿನಾದ್ಯಂತ ಸುದ್ದಿಯಲ್ಲಿದ್ದಾರೆ. ವಿದ್ಯಾರ್ಥಿ ಯುವಜನರ ಕುರಿತು ‘ಸೊಳ್ಳೆಗಳನ್ನು ಹೊಡೆಯಲು ಸುತ್ತಿಗೆಗಳು ಬೇಕಿಲ್ಲ’ ಎಂಬ ಹೇಳಿಕೆಯನ್ನು ನೀಡಿದ್ದಾರೆ. ಪ್ರಜಾಪ್ರಭುತ್ವ ದೇಶದ ಕಾನೂನು ಕಾಯುವ ಅತ್ಯುನ್ನತ ಹೊಣೆ...

“ಮೌಲಾನ ಅಬ್ದುಲ್ ಕಲಾಂ ಅಲ್ಪಸಂಖ್ಯಾತ ಶಾಲೆಯಲ್ಲಿ ಒಂದು ವರ್ಷದಿಂದ ಬಿಸಿಯೂಟ, ಹಾಲು, ಮೊಟ್ಟೆ ಇತ್ಯಾದಿ ಯಾವುದನ್ನೂ ನೀಡುತ್ತಿಲ್ಲ” ಎಂದು ಮಕ್ಕಳು ಸಚಿವರಿಗೆ ಮನವಿ ನೀಡಿದ್ದು ವಿಶೇಷವಾಗಿತ್ತು. ಇದಕ್ಕೆ ಸ್ಪಂದಿಸಿದ ಮಧು ಬಂಗಾರಪ್ಪ ಅವರು ಬರುವ ಸೋಮವಾರದಿಂದ ಊಟ ಇತ್ಯಾದಿ ವ್ಯವಸ್ಥೆ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ)ಯಿಂದ ಮಾತನಾಡಿ, “ದಲಿತರ ಭೂಮಿಯನ್ನು ಭದ್ರಾವತಿ ಎಂಪಿಎಂನವರು ಅಕ್ರಮಿಸಿಕೊಂಡಿದ್ದು, ಜಂಟಿ ಸರ್ವೇ ಮಾಡಿಸಿ ಹದ್ದುಬಸ್ತು ಸರ್ವೇ ಮಾಡಿಸುವಂತೆ ಒತ್ತಾಯಿಸಿ ಅನಿರ್ದಿಷ್ಟವಧಿ ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೂ ಪ್ರಯೋಜನವಾಗಿಲ್ಲ. ಹಾಗಾಗಿ ತಾವು ಈ ಭೂಮಿಯನ್ನು ನಮಗೆ ದೊರಕಿಸಿಕೊಡಬೇಕು” ಎಂದು ಮನವಿ ಮಾಡಿದರು

ಕೆಪಿಎಸ್ ಶಾಲೆಯ ಸಮಸ್ಯೆ, ಶಿವಮೊಗ್ಗ ನಗರದ ಬಸ್ ನಿಲ್ದಾಣದಲ್ಲಿ ನಂದಿನಿ ಮಿಲ್ಕ್ ಪಾರ್ಲರ್ ಯೂನಿಟ್ ತೆರೆಯಲು ಅವಕಾಶ ನೀಡುವಂತೆ ಕೋರಿ ಅರ್ಜಿ, ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಫಾರ್ಮಸಿಸ್ಟ್ ಕೆಲಸಕ್ಕೆ ಮನವಿ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಹೇಳಿಕೊಂಡು ಸರಿಸುಮಾರು 375ಕ್ಕೂ ಅಧಿಕ ಕುಂದುಕೊರತೆಗಳ ಅಹವಾಲು ಸ್ವೀಕರಿಸಿದ ಸಚಿವರು ಸಮಸ್ಯಗೆ ಪರಿಹಾರ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಿಂದ ಬಂದಂತ ಸಾರ್ವಜನಿಕರಲ್ಲಿ ಕೆಲವರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಸಚಿವರು ನಮ್ಮ ಸಮಸ್ಯೆಯನ್ನು ಬಗೆಹರಿಸಿಕೊಡುವ ಭರವಸೆಯನ್ನು ನೀಡಿದ್ದಾರೆ. ಅಂತೆಯೇ ನಮ್ಮ ಸಮಸ್ಯೆಗಳನ್ನು ಮುಂದಿನ ದಿನಗಳಲ್ಲಿ ತ್ವರಿತಗತಿಯಲ್ಲಿ ಬಗೆಹರಿಸಬೇಕು” ಎಂದು ಒತ್ತಾಯಿಸಿದರು. ಜತೆಗೆ ಸಚಿವರ ಸರಳ ಸಜ್ಜನಿಕೆಯನ್ನು ವ್ಯಾಪಕವಾಗಿ ಶ್ಲಾಘಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಲಂ 371(ಜೆ) ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾಗಲಿ: ಡಾ.ರಝಾಕ್ ಉಸ್ತಾದ್

ಈ ವೇಳೆ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ...

ಗದಗ | ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

"ಜಿಲ್ಲಾ ಮಟ್ಟದ ಮಾದರಿ ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ...

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಕಾರವಾರ | ನೌಕಾಪಡೆಗೆ ಸ್ವದೇಶಿ ‘ಐಎನ್‌ಎಸ್ ಸಮರ್ಥಕ್’ ಸೇರ್ಪಡೆ

ಕಾರವಾರ: ಭಾರತೀಯ ನೌಕಾಪಡೆಯ ಸ್ವದೇಶಿ ನಿರ್ಮಿತ ಬಹು ಉದ್ದೇಶದ ನೌಕೆ ಐಎನ್‌ಎಸ್...