ಶಿವಮೊಗ್ಗ | ಎಸ್‌ಪಿ ನೇತೃತ್ವದಲ್ಲಿ ಅಪರಾಧ ವಿಮರ್ಶನಾ ಸಭೆ

Date:

Advertisements

ಶಿವಮೊಗ್ಗ ಜಿಲ್ಲೆಯ ಎಲ್ಲ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳಿಗೆ ಅಪರಾಧ ವಿಮರ್ಶನಾ ಸಭೆ ನಡೆಸಿ, ಸಭೆಯಲ್ಲಿ ಹಾಜರಿದ್ದ ಪೊಲೀಸ್ ಅಧಿಕಾರಿಗಳಿಗೆ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ ಕೆ ಕೆಲವು ಸೂಚನೆಗಳನ್ನು ನೀಡಿದರು.

“ತನಿಖೆಯಲ್ಲಿರುವ ಪ್ರಕರಣಗಳ ವಿಮರ್ಶೆ ನಡೆಸಿ ಸೂಕ್ತ ಕಾಲಮಿತಿಯೊಳಗೆ ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಬೇಕು. ಠಾಣಾ ವ್ಯಾಪ್ತಿಯಲ್ಲಿ ವರದಿಯಾಗುವ ಅಪಘಾತ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ, ಮುಂಜಾಗೃತ ಕ್ರಮವಾಗಿ ಸಂಚಾರ ನಿಯಮ ಉಲ್ಲಂಘನಾ ಪ್ರಕರಣ ದಾಖಲಿಸುವಂತೆ ಹಾಗೂ ಸಂಚಾರ ಸೂಚನಾ ಫಲಕಗಳು, ರಂಬಲ್ ಸ್ಟ್ರಿಪ್ಸ್, ಕ್ಯಾಟ್ ಐಸ್, ರೋಡ್ ಹಂಪ್ಸ್‌ಗಳನ್ನು ಅಳವಡಿಸುವ ಮೂಲಕ ಅಪಘಾತ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.

“ಠಾಣಾ ವ್ಯಾಪ್ತಿಯಲ್ಲಿ ಗುಪ್ತಮಾಹಿತಿ ವ್ಯವಸ್ಥೆಯನ್ನು ಬಲಪಡಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, ಮುಂಗಡವಾಗಿ ಮಾಹಿತಿ ಸಂಗ್ರಹಿಸಿ, ಮೇಲಧಿಕಾರಿಗಳಿಗೆ ನೀಡಬೇಕು. ಸಂಬಂಧಪಟ್ಟ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪನಿರೀಕ್ಷಕರು ಮೇಲ್ವಿಚಾರಣೆ ವಹಿಸಬೇಕು” ಎಂದು ನಿರ್ದೇಶನ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ತೀರ್ಥಹಳ್ಳಿ | ನದಿಯಲ್ಲಿ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

“ಸಂಘಟಿತ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಠಾಣಾ ವ್ಯಾಪ್ತಿಯಲ್ಲಿ ತಳಮಟ್ಟದ ಮಾಹಿತಿ ಕಲೆಹಾಕಿ ದಾಳಿ ನಡೆಸಿ ಹೆಚ್ಚಿನ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಬೇಕು. ಪೊಲೀಸ್ ಉಪವಿಭಾಗಾಧಿಕಾರಿಗಳು ತಮ್ಮ ಅಧೀನ ಪೊಲೀಸ್ ಠಾಣೆಗಳ ಆವರಣದಲ್ಲಿರುವ ವಾರಸುದಾರರು ಸುಪರ್ದಿಗೆ ಪಡೆಯದೇ ಇರುವ, ತನಿಖೆಯಲ್ಲಿರುವ ಪ್ರಕರಣಗಳಲ್ಲಿ ಭಾಗಿಯಾಗಿರುವ ಮತ್ತು ಘನನ್ಯಾಯಾಲಯದ ವಿಚಾರಣೆಯಲ್ಲಿರುವ ಪ್ರಕರಣಗಳಲ್ಲಿನ ವಾಹನಗಳನ್ನು ವಿಂಗಡಿಸಿ, ವಿಲೇವಾರಿ ಮಾಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.

ಈ ಸಭೆಯಲ್ಲಿ ಅಡಿಷನಲ್ ಎಸ್‌ಪಿ ಅನಿಲ್ ಕುಮಾರ್ ಭೂಮರಡ್ಡಿ ಮತ್ತು ಪೊಲೀಸ್ ಉಪಾಧೀಕ್ಷಕ ಎ ಜಿ ಕಾರ್ಯಪ್ಪ, ಡಿಎಆರ್ ಕೃಷ್ಣಮೂರ್ತಿ ಟಿ ಪಿ ಸೇರಿದಂತೆ ಎಲ್ಲ ಪೊಲೀಸ್‌ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X