ಶಿವಮೊಗ್ಗ | ಸಾಂಸ್ಕೃತಿಕ ಅವನತಿಯು ಯುವ ಪೀಳಿಗೆಯನ್ನು ವಿಕೃತಗೊಳಿಸುತ್ತಿದೆ: ಸುಬ್ಬರಾಜು

Date:

ಸಮಾಜದಲ್ಲಿ ವಿದ್ಯಾರ್ಥಿಗಳು, ಮಹಿಳೆಯರು ಎನ್ನದೆ ಸಾಮಾನ್ಯ ಜನರ ಮೇಲೆ ನಡೆಯುತ್ತಿರುವ ಹಲ್ಲೆ, ಕಿರುಕುಳಗಳ ಮೇಲೆ ಸಮೂಹ ಮಾಧ್ಯಮ ಸಾಕಷ್ಟು ಪ್ರಭಾವ ಬೀರಿದೆ. ಇಂದಿನ ಸಾಂಸ್ಕೃತಿಕ ಅವನತಿಯು ಯುವ ಪೀಳಿಗೆಯ ಮನಸ್ಥಿತಿಯನ್ನು ವಿಕೃತಗೊಳಿಸುತ್ತಿದೆ ಎಂದು ಸೆಂಟರ್ ಫಾರ್ ಪ್ರೊಟೆಕ್ಟಿಂಗ್ ಡೆಮಾಕ್ರೆಟಿಕ್ ರೈಟ್ಸ್ ಅಂಡ್ ಸೆಕ್ಯುಲರಿಸಂ (ಸಿಪಿಡಿಆರ್‌ಎಸ್)ನ ಶಿವಮೊಗ್ಗ ಜಿಲ್ಲಾ ಸಂಚಾಲಕ ಸುಬ್ಬರಾಜು ಕಳವಳ ವ್ಯಕ್ತಪಡಿಸಿದರು.

- Advertisement -

ನವುಲೆ ಗ್ರಾಮದಲ್ಲಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (ಎಐಎಸ್‌ಇಸಿ) ವತಿಯಿಂದ ನ್ಯಾಷನಲ್ ಗರ್ಲ್ಸ್ ಹೈಸ್ಕೂಲ್ ಹಮ್ಮಿಕೊಂಡಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 128ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದ ಅವರು, “ಪ್ರಸ್ತುತ ಸಮಾಜ ಆಧುನಿಕತೆ ಹೆಸರಿನಲ್ಲಿ ಅವನತಿಯತ್ತ ಸಾಗುತ್ತಿದೆ. ಸಮೂಹ ಮಾಧ್ಯಮಗಳು ಒಳಿತನ್ನು ಮಾಡುವುದಕ್ಕಿಂತ ಹೆಚ್ಚಾಗಿ ಯುವ ಜನತೆಯ ಮೇಲೆ ಕೆಡುಕಿನ ಪ್ರಭಾವವನ್ನೇ ಬೀರುತ್ತಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮೊಬೈಲ್ ಫೋನ್ ಅಪ್ಲಿಕೇಶನ್ ಮತ್ತು ಚಾಟ್ ಮಾಡುವುದರಿಂದ ಸಾಧ್ಯವಾದಷ್ಟು ದೂರವಿರಿ” ಎಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

“ನೇತಾಜಿ ಅಂದು ಬ್ರಿಟಿಷರನ್ನ ಭಾರತದಿಂದ ಹೊರಹಕಾಲು ನಿರಂತರ ಹೋರಾಟ ಮಾಡುವ ಮೂಲಕ ಸಂಘಟನೆ ಕಟ್ಟಿದ್ದರು. ಅವರ ಹೋರಾಟದ ಸ್ಫೂರ್ತಿಯನ್ನು ಮೈಗೂಡಿಸಿಕೊಂಡು, ನಿರುದ್ಯೋಗ, ಬೆಲೆ ಏರಿಕೆ, ಬಡತನ, ದುಬಾರಿ ಶಿಕ್ಷಣ, ಸಮಯಕ್ಕೆ ಸರಿಯಾಗಿ ಸಿಗದ ಚಿಕಿತ್ಸೆಗಳ ವಿರುದ್ಧ ಒಗ್ಗಟಿನಿಂದ ಹೋರಾಟ ಮಾಡಬೇಕು” ಎಂದರು

1001189846

“ಎಐಎಸ್‌ಇಸಿಯ ರಾಜ್ಯ ಸೆಕ್ರೆಟರಿಯೇಟ್ ಮೆಂಬರ್ ನಾಗರತ್ನ ಎಸ್ ಜಿ ಮಾತನಾಡಿ, “ದೇಶಕ್ಕೆ ಸ್ವತಂತ್ರ ಬಂದು ಇಷ್ಟು ವರ್ಷಗಳು ಕಳೆದರೂ ಮಹಿಳೆಯರ, ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಶೋಷಣೆಗೆ ಮುಕ್ತಿ ಸಿಕ್ಕಿಲ್ಲ. ಇದಕ್ಕೆ ಮುಖ್ಯ ಕಾರಣ ಮಾಧ್ಯಮಗಳಲ್ಲಿ ಅಶ್ಲೀಲ, ಕೀಳು ಮಟ್ಟದ ಸಿನಿಮಾ ಮತ್ತು ಕಾರ್ಯಕ್ರಮಗಳು ವ್ಯಾಪಕವಾಗಿ ಪ್ರಸಾರವಾಗುತ್ತಿರುವುದೇ ಆಗಿದೆ. ಇದರಿಂದ ಸಮಾಜದಲ್ಲಿ ಕೀಳು ಸಂಸ್ಕೃತಿ ಹರಡಲು ಸರ್ಕಾರವೇ ಹೊಣೆಯಾಗಿದೆ. ಪರ್ಯಾಯವಾಗಿ ಒಳ್ಳೆಯ ವಿಚಾರ ಪ್ರಸ್ತುತ ಪಡಿಸುವ ಕಾರ್ಯಕ್ರಮಗಳನ್ನು ಮಾಡಿ ಅರಿವು ಮೂಡಿಸುವ ಕೆಲಸ ಮಾಡಬೇಕಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಕನ್ನಡಪರ ಹೋರಾಟಗಾರರ ವಿರುದ್ಧದ ಎಫ್‌ಐಆರ್‌ ವಾಪಸ್; ಮುಖ್ಯಮಂತ್ರಿಗೆ ಕರವೇ ಧನ್ಯವಾದ

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕಿ ಗಿರಿಜಾ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...