ಶಿವಮೊಗ್ಗ | ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳ ದರ್ಪ; ಸಾರ್ವಜನಿಕರ ಆಕ್ರೋಶ

Date:

ನಿಗದಿತ ನಿಲ್ದಾಣಗಳಲ್ಲಿ ಬಸ್‌ ನಿಲ್ಲಿಸದೆ, ಕೇಳಿದ ಸ್ಥಳಕ್ಕೆ ಟಿಕೆಟ್‌ ನೀಡದೆ ಸಾರ್ವಜನಿಕರ ಮೇಲೆ ಕೆಎಸ್‌ಆರ್‌ಟಿಸಿ ಬಸ್‌‌ (ಸಂಖ್ಯೆ: ಕೆಎ-42 ಎಫ್-2005) ಚಾಲಕ ಹಾಗೂ ನಿರ್ವಾಹಕರು ದರ್ಪ ತೋರಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.

- Advertisement -

ಪ್ರಯಾಣಿಕರೊಬ್ಬರಿಗೆ ಭದ್ರಾವತಿ ಬದಲು ಹಾಲಿನ ಡೈರಿ ಸ್ಟಾಪ್‌ಗೆ ಟಿಕೆಟ್ ನೀಡಿದ್ದಾರೆ. ʼಎಲ್ಲಿಗೋ ಟಿಕೆಟ್ ಕೇಳಿದರೆ ಇನ್ನೆಲ್ಲಿಗೋ ಟಿಕೆಟ್ ನೀಡುತ್ತೀರಿ, ಚೆಕಿಂಗ್ ಬಂದರೆ ನಾನು ದಂಡ ಕಟ್ಟಬೇಕು ಪ್ರಯಾಣಿಕ ಸಿಟ್ಟಾದಾಗ, ನೀನು ಡೈರಿ ಬಂದಾಗ ಪುನಃ ಭದ್ರಾವತಿಗೆ ಟಿಕೆಟ್ ತಗೊ ಎಂದು ಕಂಡಕ್ಟರ್ ಉಡಾಫೆಯಾಗಿ ಮಾತನಾಡಿದ್ದಾರೆ. ಇದರಿಂದ ಪ್ರಯಾಣಿಕ ಹಾಗೂ ಕಂಡಕ್ಟರ್ ನಡುವೆ ವಾಗ್ವಾದ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅದೇ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಈದಿನ ಮಾಧ್ಯಮ ಪ್ರತಿನಿಧಿ ‘ಅವಾಗಿನಿಂದಲೂ ಯಾಕೆ ಹೀಗೆ ಪ್ರಯಾಣಿಕರಿಗೆ ತೊಂದರೆ ಮಾಡ್ತಿದ್ದೀರಿʼ ಎಂದು ಪ್ರಶ್ನೆ ಮಾಡಿದ್ದಕ್ಕೆ ಕುಪಿತಗೊಂಡ ಬಸ್ ನಿರ್ವಾಹಕ‌, ನೀನು ಯಾವ ಸ್ಟಾಪ್, ಎಲ್ಲಿ ಇಳಿಬೇಕು ಅಲ್ಲಿ ಇಳಿ, ಬೇರೆ ಅವರ ಉಸಾಬರಿ ನಿನಗೆ ಏನಕ್ಕೆ? ನೀನು ಯಾವನು ಕೇಳುವುದಕ್ಕೆ, ಅವರ ಅವರ ಹಣೆಬರಹ ನಡೆದುಕೊಂಡು ಹೋಗುತ್ತಾರೆ ಅವರಿಗೆ ನಡೆಯೋ ಶಕ್ತಿ ಇದೆ. ನನ್ನ ಕೆಲಸ ಮಾಡೋದ್ ನನಗೆ ಗೊತ್ತಿದೆ. ಅನವಶ್ಯಕ ಮಾತಾಡಬೇಡ ಎಂದೆಲ್ಲಾ ನಿಂದಿಸಿದ್ದಾರೆ.

ರಾತ್ರಿ ಸಮಯದಲ್ಲಿ ಮಹಿಳೆಯರು, ಮಕ್ಕಳು, ವಿದ್ಯಾರ್ಥಿನಿಯರು, ವಯಸ್ಸಾದವರು ಬಸ್‌ಗಳಿಗಾಗಿ ನಿಗದಿತ ಸ್ಟಾಪ್‌ಗಳಲ್ಲಿ ಕಾಯುತ್ತಿರುತ್ತಾರೆ. ಆದರೆ ಈ ಕೆಎಸ್‌ಆರ್‌ಟಿಸಿ ಬಸ್‌ಗಳು ನಿಲ್ಲಿಸುವುದೇ ಇಲ್ಲ. ಬೆಳಗ್ಗೆ ಸಮಯದಲ್ಲೂ ಹೀಗೇ ಮಾಡುತ್ತಾರೆ. ಒಂದು ಸ್ಥಳಕ್ಕೆ ಟಿಕೆಟ್‌ ಕೇಳಿದರೆ ಇನ್ಯಾವುದೋ ಸ್ಟಾಪಿಗೆ ಟಿಕೆಟ್‌ ಕೊಡುತ್ತಾರೆ. ಪ್ರಶ್ನಿಸಿದರೆ ಬಾಯಿಗೆ ಬಂದದ್ದು ಮಾತನಾಡುತ್ತಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಮದುವೆಯಾಗುವುದಾಗಿ ನಂಬಿಸಿ ವಂಚನೆ; ಮಹಿಳೆಯಿಂದ ₹7 ಲಕ್ಷ ಪೀಕಿಸಿದ ಖದೀಮ

ಶಿವಮೊಗ್ಗ ಕೆಎಸ್‌ಆರ್‌ಟಿಸಿಯ ಆಡಳಿತ ಅಧಿಕಾರಿ (ಎಂಡಿ) ಇಂತಹ ಚಾಲಕ, ನಿರ್ವಹಕರ ಮೇಲೆ ಏನು ಕ್ರಮ ತೆಗೆದುಕೊಳ್ಳುತ್ತಾರೆ, ಹಾಗೂ ಸಾಕಷ್ಟು ಬಸ್‌ ನಿಯೋಜಿಸಿ ಪ್ರಯಾಣಿಕರ ಅನುಕೂಲ ಮಾಡುವಲ್ಲಿ ಮುಂದಿನ ದಿನಗಳಲ್ಲಿ ಏನು ಪರ್ಯಾಯ ವ್ಯವಸ್ಥೆ ಮಾಡುತ್ತಾರೆ ಎಂದು ಕಾದು ನೋಡಬೇಕಿದೆ.

WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...