ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: ಮಾಜಿ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ 14 ದಿನ ಇ.ಡಿ ವಶಕ್ಕೆ

Date:

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಬೆಂಗಳೂರಿನ 1ನೇ ಸಿಸಿಹೆಚ್ ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ ಮಾಜಿ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಅವರನ್ನು 14 ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿ ಆದೇಶಿಸಿದೆ.

- Advertisement -

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ಮಧ್ಯಾಹ್ನ ಮಾಜಿ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಅವರನ್ನು ವಶಕ್ಕೆ ಪಡೆದು ಸತತ 11 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು. ಅಲ್ಲದೇ ಅವರ ನಿವಾಸ ಸೇರಿದಂತೆ 8 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಗೆಸ್ಟ್ ಹೌಸ್ ಮೇಲೂ ದಾಳಿ ನಡೆಸಿದ್ದರು. ಇದೇ ವೇಳೆ ಅಲ್ಲೇ ಇದ್ದ ಮಾಜಿ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಅವರನ್ನು ವಶಕ್ಕೆ ಪಡೆದಿದ್ದರು. ಸತತ ವಿಚಾರಣೆಯ ನಂತರ ಮಂಜುನಾಥ್ ಗೌಡ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದು, ಅವರನ್ನು 1ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು l ಅಕ್ರಮ ಗಾಂಜಾ ಸಾಗಾಟ: ಇಬ್ಬರ ಬಂಧನ

ಪ್ರಕರಣದ ಹಿನ್ನೆಲೆ

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂಪಾಯಿ ಹಣ ದುರ್ಬಳಕೆ ಮಾಡಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ 2018ರಲ್ಲಿ ಪ್ರಕರಣ ದಾಖಲಾಗಿತ್ತು. ಆ ವೇಳೆ ಮಂಜುನಾಥ್ ಗೌಡ ಅವರನ್ನು ಎಸಿಬಿ ಬಂಧಿಸಿತ್ತು. ಆದರೆ ಚಾರ್ಜ್ ಶೀಟ್‌ನಲ್ಲಿ ಮಂಜುನಾಥ್ ಗೌಡ ಅವರ ಹೆಸರನ್ನೇ ಕೈಬಿಡಲಾಗಿತ್ತು. ಬಳಿಕ ಇಡಿ ಮಧ್ಯ ಪ್ರವೇಶಿಸಿದ್ದು, ಇಸಿಐಆರ್ ದಾಖಲು ಮಾಡಿ, ತನಿಖೆಗೆ ಮುಂದಾಗಿತ್ತು. ಈ ತನಿಖೆಗೆ ಹೈಕೋರ್ಟ್ ಮೂಲಕ ಮಂಜುನಾಥ್ ಗೌಡ ತಡೆಯಾಜ್ಞೆ ತಂದಿದ್ದರು. ನಿರಂತರ ಕಾನೂನು ಹೋರಾಟದ ಬಳಿಕ ಹೈಕೋರ್ಟ್ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಇಡಿ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಸಮಸ್ತ’ ಆ್ಯಪ್ ಸಮಸ್ಯೆ ಪರಿಹರಿಸಿ, ಗೃಹಲಕ್ಷ್ಮಿ ಹೆಚ್ಚುವರಿ ಕೆಲಸ ಕೈಬಿಡಿ: ಆಶಾ ಕಾರ್ಯಕರ್ತೆಯರ ಆಗ್ರಹ

‘ಸಮಸ್ತ’ ಆ್ಯಪ್‌ನಲ್ಲಿ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು, ಗೃಹಲಕ್ಷ್ಮಿ ಯೋಜನೆಯ...

ಇಳಕಲ್ | SIR ರದ್ದು, ಜ್ಞಾನೇಶ್ ಕುಮಾರ್ ವಜಾಕ್ಕೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು...

ಪತ್ರಕರ್ತರ ಸಂಘದ ನೂತನ ಭವನಕ್ಕೆ ₹50 ಲಕ್ಷ ಅನುದಾನ: ಸಂಸದ ಯದುವೀರ ಘೋಷಣೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣಕ್ಕೆ ಸಂಸದರ ಪ್ರದೇಶಾಭಿವೃದ್ಧಿ...

ಗದಗ | ಮತದಾನದ ಹಕ್ಕನ್ನು‌ ಕಳೆದುಕೊಳ್ಳುವ ಆತಂಕದಲ್ಲಿ ಅನಿವಾಸಿ ಭಾರತೀಯರು: ಮುಖಂಡರು ಕಿಡಿ

"ರೋಣ ಮತಕ್ಷೇತ್ರದಲ್ಲಿ ಅನಿವಾಸಿ ಭಾರತೀಯರು 999 ಜನರಿದ್ದಾರೆಂದು ಮತದಾರರ ಯಾದಿ ಪಟ್ಟಿಯಲ್ಲಿ...