ಶಿವಮೊಗ್ಗ | ಸಂವಿಧಾನದ ರಕ್ಷಣೆ ಪ್ರತಿಯೊಬ್ಬ ಭಾರತೀಯರ ಹೊಣೆ: ನಿವೃತ್ತ ಪ್ರಾಂಶುಪಾಲ ಪ್ರೊ ಎಚ್. ರಾಚಪ್ಪ

Date:

ಸಂವಿಧಾನವನ್ನು ರಕ್ಷಣೆ ಮಾಡುವುದು ಪ್ರತಿಯೊಬ್ಬ ಭಾರತೀಯನ ಹೊಣೆ ಎಂದು ನಿವೃತ್ತ ಪ್ರಾಂಶುಪಾಲ ಪ್ರೊ ಎಚ್. ರಾಚಪ್ಪ ಅಭಿಪ್ರಾಯಪಟ್ಟರು.

- Advertisement -

ದಿ. 01-01-2025 ರಂದು ಶಿವಮೊಗ್ಗದ ಕರ್ನಾಟಕ ದಲಿತ ಸಂಘರ್ಷ ಜಿಲ್ಲಾ ಸಮಿತಿಯ ವತಿಯಿಂದ ಆಯೋಜಿಸಿದ್ದ ʼಭೀಮ ಕೋರೆಗಾಂವ್ ವಿಜಯದ ದಿನʼ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದ ಅವರು, ʼಭಾರತೀಯರ ಸ್ವಾಭಿಮಾನವೇ ಸಂವಿಧಾನವಾಗಿ ರೂಪುಗೊಂಡಿದೆ. ನಮ್ಮ ಎಲ್ಲಾ ಹೋರಾಟದ ಹಿರಿಯ ಸಮಾಜ ಸುಧಾರಕರ ಹೋರಾಟದ ಪ್ರತಿಫಲವಾಗಿ ಬೃಹತ್‌ ಸಂವಿಧಾನವನ್ನು ಪಡೆದಿದ್ದೇವೆ. ಸಂವಿಧಾನ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...
WhatsApp Image 2025 01 07 at 1.34.15 PM

“ದೇಶದ ಇತಿಹಾಸದಲ್ಲೇ ಶೂದ್ರ ಸಮುದಾಯವನ್ನು ಅತ್ಯಂತ ಕ್ರೂರವಾಗಿ ನಡೆಸಿಕೊಂಡಿದ್ದ ಪೇಶ್ವೆಗಳ ಆಡಳಿತವನ್ನು ಖಂಡಿಸಿ ಕೋರೆಗಾಂವ್ ನಲ್ಲಿ ಮಹರ್ ರೆಜಿಮೆಂಟಿನ ನಾಯಕ ಸಿದ್ದನಾಯಕರ ನೇತೃತ್ವದಲ್ಲಿ ಯುದ್ಧ ಮಾಡಲಾಯಿತು.  ಭಾರತದ ಮೂಲನಿವಾಸಿಗಳ, ಶೋಷಿತ ಸಮುದಾಯಗಳ ವಿಮೋಚನೆಗಾಗಿ, ಅವರ ಸ್ವಾಭಿಮಾನಕ್ಕಾಗಿ 29 ಸಾವಿರ ಪೇಶ್ವೆ ಸೈನಿಕರ ವಿರುದ್ಧ ಹೋರಾಡಿ ಹುತಾತ್ಮರಾದ ರೆಜಿಮೆಂಟಿನ 28 ಮಹಾ ಸೈನಿಕರ ನೆನಪಿಗಾಗಿ 65 ಅಡಿ ಸ್ಮಾರಕವನ್ನು ಕೋರೆಗಾಂವ್‌ ನಲ್ಲಿ ನಿರ್ಮಿಸಲಾಗಿದೆ. ಅವರ ತ್ಯಾಗ ಬಲಿದಾನವನ್ನು ಸ್ಮರಿಸುವ ಸಲುವಾಗಿ ʼಭೀಮ ಕೋರೆಗಾಂವ್ ವಿಜಯದ ದಿನʼವನ್ನು ಆಚರಿಸಲಾಗುತ್ತದೆ. ಅವರು ತಂದುಕೊಟ್ಟ ಸ್ವಾಭಿಮಾನದ ಮೊದಲ ಸ್ವಾತಂತ್ರ್ಯ ಹಾಗೂ ಸಮಾನತೆಯ ಪ್ರತೀಕವಾದ ಸಂವಿಧಾನ ಸದ್ಯ ಅಪಾಯದಲ್ಲಿದೆ. ನಾವೆಲ್ಲರೂ ಇದರ ರಕ್ಷಣೆಗೆ ಕೈಜೋಡಿಸಬೇಕು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಸರ್ಕಾರಿ ಶಾಲೆ ಶಿಕ್ಷಕಿ ನಿವೃತ್ತಿ; ಅಂಬೇಡ್ಕರ್ ಫೋಟೋ ನೀಡಿ, ಹಳೆ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ

ಕಾರ್ಯಕ್ರಮದಲ್ಲಿ ಡಿಎಸ್ಎಸ್ ಜಿಲ್ಲಾ ಪ್ರಧಾನ ಸಂಚಾಲಕ ಹಾಲೇಶಪ್ಪ, ವಕೀಲ ಎಸ್.ಎಚ್.ಧನಂಜಯ್, ಎ.ಡಿ.ಆನಂದಪ್ಪ, ಎಂ.ಮಂಜುನಾಥ, ಸಂತೆಕಡೂರು ಪರಮೇಶ್, ಹುಣಸೋಡು ಶೇಷಪ್ಪ, ಸೂಗೂರು ಪರಮೇಶ್, ಶ್ರೀಮತಿ ಲತಾ ಹರೀಶ್ ಹಾಗೂ ಕಲ್ಲಿಹಾಳ್ ಹನುಮಂತಪ್ಪ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...

ಕೊಡಗು | ಫಾರಂ-7 ದುರುಪಯೋಗ: ಬಿಜೆಪಿ ಬೂತ್ ಅಧ್ಯಕ್ಷ ಸೇರಿ ಐವರ ವಿರುದ್ಧ ಎಫ್‌ಐಆರ್!

ಕೊಡಗು ಜಿಲ್ಲೆಯ ಬ್ಯಾಡಗೊಟ್ಟ ಗ್ರಾಮದಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ಫಾರಂ-7 ಅರ್ಜಿಗಳನ್ನು...

ಬಾಗೇಪಲ್ಲಿ | ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ:- ಚೇತನ್ ನಾಯ್ಡು ಫೌಂಡೇಷನ್ ಅಧ್ಯಕ್ಷ ಬಿ.ಆರ್.ನರಸಿಂಹ ನಾಯ್ಡು

ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ ಪ್ರಕೃತಿಯಿಂದ ಹಲವು ರೀತಿಯ ಪ್ರಯೋಜನಗಳನ್ನು...