ಶಿವಮೊಗ್ಗ | ರೈತ, ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹ

Date:

Advertisements

ಕೇಂದ್ರ ಸರ್ಕಾರದ ಜನವಿರೋಧಿ ನೀತಗಳು ಮತ್ತು ಧೋರಣೆಗಳನ್ನು ಖಂಡಿಸಿ, ರೈತರ ಮತ್ತು ಕಾರ್ಮಿಕರ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಸಲ್ಲಿಸಿದ ಪ್ರತಿಭಟನಾಕಾರರು, “ರೈತರ ಹಕ್ಕೋತ್ತಾಯಗಳಾದ ಕನಿಷ್ಟ ಬೆಂಬಲ ಬೆಲೆ ಜಾರಿ, ವಿದ್ಯುತ್ ಖಾಸಗೀಕರಣ ಮಾಡದೇ ಇರುವುದು, ವಿದ್ಯುತ್ ತಿದ್ದುಪಡಿ ಮಸೂದೆ ರದ್ದು ಪಡಿಸುವುದು, ರೈತರ ಸಾಲ ಮನ್ನಾ, ಡಾ. ಸ್ವಾಮಿನಾಥನ್‌ರವರ ಶಿಫಾರಸ್ಸಿನಂತೆ ಬೆಂಬಲ ಬೆಲೆ ಕಾನೂನು ರಚಿಸುವುದು, ದೆಹಲಿ ಹೋರಾಟ ನಿರತರ ಮೇಲೆ ಹಾಕಿರುವ ಕೇಸುಗಳನ್ನು ಹಿಂಡೆಯುವುದು ಸೇರಿದಂತೆ ಮುಂತಾದ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿತ್ತು. ಆದರೆ, ಈವರೆಗೂ ಅವುಗಳ ಕುರಿತು ಕ್ರಮ ಕೈಗೊಂಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ರೈತರ ದೆಹಲಿ ಚಲೋ ಚಳವಳಿಗೆ ಅವಕಾಶ ಕೊಡದೆ ಕೇಂದ್ರ ಸರ್ಕಾರ ಬೇರೆ ದೇಶದ ಜೊತೆ ಯುದ್ಧ ಮಾಡುವಂತೆ ರೈತರ ಮೇಲೆ ಲಾಠಿ ಪ್ರಹಾರ, ರಬ್ಬರ್ ಬುಲೆಟ್, ರಾತ್ರಿ ರಸ್ತೆಯಲ್ಲಿ ಮಲಗಿರುವ ರೈತರ ಮೇಲೆ ಆಶ್ರುವಾಯು ಸಿಡಿಸಿರುವುದು ಭಯಾನಕ ಕೃತ್ಯವಾಗಿದೆ. ಈ ರೀತಿ ಅಮಾನವೀಯ ದೌರ್ಜನ್ಯವನ್ನು ನೋಡಿದರೆ ನಾವು ಪ್ರಜಾಪ್ರಭುತ್ವದಲ್ಲಿ ಇದ್ದೆವೆಯೋ ಅಥವಾ ಸರ್ವಾಧಿಕಾರಿ ರಾಷ್ಟ್ರದಲ್ಲಿ ಇದ್ದೆವೆಯೋ ಎಂಬುದು ತಿಳಿಯದಾಗಿದೆ” ಎಂದು ಎಚ್. ಆರ್ ಬಸವರಾಜಪ್ಪ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Advertisements

“ರೈತರ ಶಾಂತಿಯುತ ಚಳವಳಿಯನ್ನು ಈ ರೀತಿ ದೌರ್ಜನ್ಯದಿಂದ ತಡೆಹಿಡಿದಿದ್ದಕ್ಕೆ ರಾಜ್ಯಾದ್ಯಂತ ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಮತ್ತು ದೆಹಲಿ ಚಲೋ ಪ್ರತಿಭಟನೆ ನಡೆಸುತ್ತಿರುವ ರೈತರ ಹಕ್ಕನ್ನು ರಕ್ಷಿಸಬೇಕು. ರೈತರ, ಕಾರ್ಮಿಕರ ನ್ಯಾಯಯುತವಾದ ಒತ್ತಾಯಗಳನ್ನು ಕೂಡಲೇ ಈಡೇರಿಸಬೇಕು” ಎಂದು ಒತ್ತಾಯಿಸಿದರು.

“ರೈತರ ಉತ್ಪನ್ನಗಳಿಗೆ ಎಂ ಎಸ್ ಸ್ವಾಮಿನಾಥನ್ ಶಿಫಾರಸಿನ ಸಿ2+ಶೇ.50ರ ಪ್ರಕಾರ ಕನಿಷ್ಟ ಬೆಂಬಲ ಬೆಲೆ ಹಾಗೂ ಖರೀದಿ ಖಾತ್ರಿ ಒದಗಿಸುವ ಶಾಸನ ಜಾರಿ ಮಾಡಬೇಕು. ರೈತರಿಗೆ ನೀಡುವ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ವಿದ್ಯುತ್ಛಕ್ತಿ ಮೇಲಿನ ಸಬ್ಸಿಡಿ ಮೊತ್ತ ಹೆಚ್ಚಳವಾಗಬೇಕು. ರೈತರ ಆತ್ಮಹತ್ಯೆ ತಡೆಯಲು ಎಲ್ಲ ರೀತಿಯ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ಕಾರ್ಪೊರೇಟ್ ಪರವಾದ ಪಿಎಂ ಫಸಲ್ ಭೀಮಾ ಯೋಜನೆಯನ್ನು ರದ್ದುಪಡಿಸಿ, ಎಲ್ಲ ಬೆಳೆಗಳಿಗೂ ವಿಮೆ ಒದಗಿಸುವ ಸಮಗ್ರ ಸಾರ್ವಜನಿಕ ವಿಮಾ ಯೋಜನೆ ಜಾರಿ ಹಾಗೂ ಸಮಗ್ರ ಸಾಲ ಮನ್ನಾ ಯೋಜನೆ ಜಾರಿಗೆ ತರಬೇಕು. ಐತಿಹಾಸಿಕ ದೆಹಲಿ ರೈತ ಹೋರಾಟದ ಸಂಧರ್ಭದಲ್ಲಿ ನೀಡಿದ್ದ ಲಿಖಿತ ಭರವಸೆಗಳನ್ನು ಜಾರಿ ಮಾಡಬೇಕು. ಸಿಂಗು ಗಡಿಯಲ್ಲಿ ಹುತಾತ್ಮ ರೈತರ ಸ್ಮಾರಕ ನಿರ್ಮಿಸಲು ಜಾಗ, ಅವರ ಕುಟುಂಬಕ್ಕೆ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಬೇಕು. ಹೋರಾಟ ಸಂದರ್ಭದಲ್ಲಿ ರೈತರ ಮೇಲೆ ಹಾಕಿರುವ ಎಲ್ಲ ಪೋಲಿಸ್ ಕೇಸ್‌ಗಳನ್ನು ಹಿಂಪಡೆಯಬೇಕು” ಎಂದು ಒತ್ತಾಯಿಸಿದರು.

“ವಿದ್ಯುತ್ ರಂಗವನ್ನು ಖಾಸಗೀಕರಣಗೊಳಿಸುವ ವಿದ್ಯುತ್ ತಿದ್ದುಪಡಿ ಮಸೂದೆ 2022ನ್ನು ಸಂಸತ್ತಿನಿಂದ ಹಿಂಪಡೆಯಬೇಕು. ಯಾವುದೇ ಕಾರಣಕ್ಕೂ ಪ್ರೀಪೇಯ್ಡ್ ಮೀಟರ್ ಅಳವಡಿಸಬಾರದು. ರೈತನಿಂದ ಸ್ವಾಧೀನ ಪಡಿಸಿಕೊಂಡ ಭೂಮಿಗೆ ರೈತನೇ ಮಾಲೀಕನಾಗಿರಬೇಕು. ಬರುವ ಆದಾಯದಲ್ಲಿ ರೈತನಿಗೆ ಸಮಪಾಲು ನೀಡಬೇಕು. ಅರಣ್ಯ ಹಕ್ಕು ಕಾಯ್ದೆ ತಿದ್ದುಪಡಿ ಮಾಡಿ 15ವರ್ಷಕ್ಕೂ ಹೆಚ್ಚಿಗೆ ಸಾಗುವಾಳಿ ಮಾಡಿದ ಪ್ರತಿಯೊಬ್ಬ ರೈತನಿಗೂ ಸಾಗುವಾಳಿ ಹಕ್ಕುಪತ್ರ ನೀಡಬೇಕು” ಎಂದರು.

“ರೈತ ಮಹಿಳೆಯರನ್ನು ರೈತರೆಂದು ಪರಿಗಣಿಸಿ ರೈತರಿಗೆ ಸಿಗುವ ಎಲ್ಲ ಸೌಲಭ್ಯ ಸಿಗುವಂತಾಗಬೇಕು. ಮಹಿಳಾ ಸ್ವಸಹಾಯ ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಕೃಷಿಗಾಗಿ ಸಾಲ ಪಡೆದ ಮಹಿಳೆಯರ ಸಾಲ ಮನ್ನಾ ಮಾಡಬೇಕು. ಭಾರತೀಯ ಕಾರ್ಮಿಕ ಸಮ್ಮೇಳನವನ್ನು ನಿಯಮಿತವಾಗಿ ಆಯೋಜಿಸಬೇಕು. ಅದರ ನಿರ್ಣಯಗಳನ್ನು, ಸರ್ಕಾರಗಳು ಜಾರಿ ಮಾಡಬೇಕು” ಎಂದು ಒತ್ತಾಯಿಸಿದರು.

“ಉದ್ಯೋಗದ ಹಕ್ಕನ್ನು ಮೂಲಭೂತ ಹಕ್ಕನ್ನಾಗಿ ಮಾಡಬೇಕು. ನಿರುದ್ಯೋಗಿ ಯುವಜನತೆಗೆ ಸಾರ್ವಜನಿಕ ಹೂಡಿಕೆ ಹೆಚ್ಚಿಸಬೇಕು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಕೆಲಸದ ದಿನಗಳನ್ನು 200 ದಿನಕ್ಕೆ ವಿಸ್ತರಿಸಿ, ₹600 ಕೂಲಿ ನಿಗದಿ ಮಾಡಬೇಕು” ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರಕ್ಕೆ ಹಕ್ಕೋತ್ತಾಯಗಳು:

“ವಿದ್ಯುತ್ ಖಾಸಗೀಕರಣ ಮಾಡುವುದಿಲ್ಲವೆಂದು ತಿಳಿಸಿದ ಪ್ರಕಾರ ಬೇರೆ ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳು ವಿದ್ಯುತ್ ಖಾಸಗೀಕರಣ ಮಾಡುವುದಿಲ್ಲವೆಂದು ವಿಧಾನಸಭೆಯಲ್ಲಿ ನಿರ್ಣಯ ಮಾಡಿ ಕೇಂದ್ರಕ್ಕೆ ಕಳುಹಿಸಿದೆ. ಅದೇ ರೀತಿ ರಾಜ್ಯ ಸರ್ಕಾರವೂ ನಿರ್ಣಯ ಮಾಡಿ ಕಳುಹಿಸಬೇಕು ಮತ್ತು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಬಾರದು” ಎಂದರು.

“2023 ಸೆಪ್ಟೆಂಬರ್ 22ರಂದು ಆದೇಶ ಹೊರಡಿಸಿ ರೈತರ ಐಪಿ ಸೆಟ್‌ಗಳಿಗೆ ರೈತರೇ ಅವರ ಸ್ವಯಂ ವೆಚ್ಚದಲ್ಲಿ ಕಂಬ, ತಂತಿ, ಟಿಸಿಗಳನ್ನು ಹಾಕಿಸಿಕೊಳ್ಳಬೇಕೆಂಬ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಕರ್ನಾಟಕ ರಾಜ್ಯ ಸಂಪೂರ್ಣ ಬರಗಾಲವೆಂದು ಘೋಷಣೆಯಾಗಿದ್ದು, ತಕ್ಷಣದಿಂದ ರೈತರಿಗೆ ಎಕರೆಗೆ ₹20,000 ಪರಿಹಾರ ಕೊಡಬೇಕು ಮತ್ತು ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಶಾಶ್ವತ ಕ್ರಮ: ಸಚಿವ ಶಿವಾನಂದ ಪಾಟಿಲ್‌ ಭರವಸೆ

“ಬರಗಾಲ ಸಂದರ್ಭಲ್ಲಿ ಪಹಣಿ, ಮ್ಯುಟೇಷನ್, ಹದ್ದುಬಸ್ತು, ವರಮಾನ ಪ್ರಮಾಣ ಪತ್ರ, ಜಾತಿ ಪ್ರಮಾಣಪತ್ರ ಇತರೆ ಪ್ರಮಾಣ ಪತ್ರಗಳಿಗೆ ಹಿಂದಿಗಿಂತ 3ರಷ್ಟು ದುಬಾರಿ ಶುಲ್ಕವನ್ನು ವಿಧಿಸಿರುವುದನ್ನು ಕೂಡಲೇ ಕಡಿಮೆ ಮಾಡಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಮೇಲಿನ ರಾಜ್ಯ ಸರ್ಕಾರದ ತೆರಿಗೆಯನ್ನು ಗಣನೀಯವಾಗಿ ಇಳಿಕೆ ಮಾಡಬೇಕು. ರೈತರು ನೀಡುವ ಹಾಲಿಗೆ ಪ್ರತಿ ಲೀಟರ್‌ಗೆ ₹50ರಂತೆ ಬೆಲೆ ನಿಗದಿ ಮಾಡಬೇಕು. ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು” ಎಂದು ಒತ್ತಾಯಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X