ಶಿವಮೊಗ್ಗ | ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಅವಹೇಳನಕಾರಿ ಪೋಸ್ಟ್‌; ಪ್ರಕರಣ ದಾಖಲು

Date:

ಸಾಗರದ ಕಾಂಗ್ರೆಸ್‌ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಲಾಗಿದ್ದು, ಆರೋಪಿ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್‌ ಒತ್ತಾಯಿಸಿದೆ. ತೇಜೋವಧೆ ಮಾಡುವಂತಹ ಪೋಸ್ಟ್‌ ಹಾಕಿರುವ ಯುವಕನ ವಿರುದ್ಧ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ C M. ಚಿನ್ಮಯ್ ಅವರು ಸಾಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

- Advertisement -

ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕೆ ನಿಗಮದ ಅಧ್ಯಕ್ಷರೂ ಆಗಿರುವ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಇತ್ತೀಚೆಗೆ ಸಾಗರ ಪ್ರಥಮ ದರ್ಜೆ ಕಾಲೇಜಿನ ಎದುರು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಿದ್ದ ಅಂಗಡಿ ಮಾಲೀಕನ ವಿರುದ್ಧ ಕ್ರಮಕ್ಕೆ ಸೂಚಿಸಿದ್ದರು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಆ ವಿಡಿಯೋವನ್ನು ಕಿಡಿಗೇಡಿಯೊಬ್ಬ ತಿರುಚಿ ‘ಖದೀಪ್ ಕಾಂಗ್ರೆಸ್‌’ ಎಂಬ ಇನ್ಸ್‌ಟಾಗ್ರಾಂ ಖಾತೆಯಿಂದ ಹಂಚಿಕೊಂಡಿದ್ದಾನೆ. ವಿಡಿಯೋವನ್ನು ತಿರುಚಿ ಶಾಸಕರಿಗೆ ಅಪಮಾನ ಮಾಡಲಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಪೊಲೀಸರಿಗೆ ದೂರು ನೀಡಿರುವ ಚಿನ್ಮಯ್ ಸಿ.ಎಂ, :ಆರೋಪಿಯ ಈ ಕೃತ್ಯವು ಕಾನೂನುಬಾಹಿರವಾಗಿದ್ದು ಶಾಸಕರ ತೋಜೋವಧೆ ಮಾಡಲಾಗಿದೆ. ಆರೋಪಿಯನ್ನು ಪತ್ತೆ ಹಚ್ಚಿ, ಕಾನೂನು ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಪತ್ತೆಗೆ ಪ್ರಯತ್ನಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...