ಶಿವಮೊಗ್ಗ ಜಿಲ್ಲೆ ಭದ್ರಾವತಿಯ ತಾಲೂಕಿನ ಗೋಂದಿ ಅಣೆಕಟ್ಟಿನ ಪ್ರದೇಶದಲ್ಲಿ ಜೂನ್ 08 ರಂದು ನಾಲೈದು ಮಕ್ಕಳು ಈಜಲು ತೆರಳಿದ್ದರು. ಈ ಪ್ರದೇಶದಲ್ಲಿ ನೀರು ಹೆಚ್ಚಿದ್ದು, ಅದು ಅಪಾಯಕಾರಿ ಪ್ರದೇಶವಾಗಿದ್ದರಿಂದ ಸ್ಥಳೀಯರು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.
ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಮಕ್ಕಳಿಗೆ ಸೂಕ್ತ ತಿಳುವಳಿಕೆ ಹೇಳಿ ಮನೆಗೆ ಕಳುಹಿಸಿದ್ದಾರೆ. ಪೊಲೀಸರ ಸೂಕ್ತ ಸಮಯ ಪ್ರಜ್ಙ್ನೆಯಿಂದ ದೊಡ್ಡ ಅನಾಹುತ ತಪ್ಪಿದ್ದು, ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿಯಾಗಿದೆ.