ಶಿವಮೊಗ್ಗ | ಮಲೆನಾಡಿನಲ್ಲೇ ಕುಡಿಯುವ ನೀರಿಗೆ ಹಾಹಾಕಾರ

Date:

Advertisements

ರಾಜ್ಯದ ನಾನಾ ಭಾಗಗಳಲ್ಲಿ ಅಕಾಲಿಕ ಮಳೆ ಸುರಿದು ಜನಜೀವನ ಅಸ್ಥವ್ಯಸ್ಥವಾಗುತ್ತಿದೆ. ಇಂತಹ ಸಂದರ್ಭದಲ್ಲಿ, ಬೇಸಿಗೆಯಲ್ಲೂ ತಂಪಾಗಿರುವ ಮಲೆನಾಡು ಪ್ರದೇಶದಲ್ಲಿಯೇ ನೀರಿನ ಸಮಸ್ಯೆ ಎದುರಾಗಿದೆ. ಶಿವಮೊಗ್ಗ ಜಿಲ್ಲೆಯ ಹಲವಾರು ಹಳ್ಳಿಗಳ ಜನರು ಕುಡಿಯುವ ನೀರಿಲ್ಲದೆ, ನೀರಿಗಾಗಿ ಪರಿತಪಿಸುತ್ತಿದ್ದಾರೆ.

ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಹರಿಯುವ ತುಂಗಾ ನದಿ ಬತ್ತಿ ಹೋಗಿದೆ. ನದಿಯಲ್ಲಿ ನೀರಿಲ್ಲದ ಕಾರಣ, ತಾಲೂಕಿನ ಸುಮಾರು 95 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಹಲವು ಗ್ರಾಮ ಪಂಚಾಯತಿಗಳು ತಮ್ಮ ವ್ಯಾಪ್ತಿಯಲ್ಲಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿವೆ.

ಪ್ರತಿ ಬೇಸಿಗೆಯಲ್ಲೂ ನದಿ ನೀರು ಕಡಿಮೆಯಾಗುತ್ತದೆ. ಆದರೆ, ಆ ಸಮಯದಲ್ಲೂ ಆಗಾಗ್ಗೆ ಸುರಿಯುವ ಅಕಾಲಿಕ ಮಳೆಯಿಂದ ನದಿಯಲ್ಲಿ ನೀರು ಇರುತ್ತಿತ್ತು. ಈ ಬಾರಿ ಬೇಸಿಗೆ ಹೆಚ್ಚಾಗಿದೆ. ಮಳೆ ಸುರಿದಿಲ್ಲ. ಪರಿಣಾಮ ನದಿ ನೀರು ಸಂಪರ್ಣ ಖಾಲಿಯಾಗಿದೆ. ಜನರಿಗ, ಜಾನುವಾರುಗಳಿಗೆ, ಕಾಡು ಪ್ರಾಣಿಗಳಿಗೂ ನೀರಿಲ್ಲದ ಪರಿಸ್ಥಿತಿ ಎದುರಾಗಿದೆ.

Advertisements

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ರಸ್ತೆ ಅಪಘಾತದಲ್ಲಿ ನಿತ್ಯ ಇಬ್ಬರು ಬಲಿ

ನೀರಿನ ಸಮಸ್ಯೆ ಬಗ್ಗೆ ಮಾತನಾಡಿರುವ ತಾಲೂಕು ಪಂಚಾಯತಿ ಮುಖ್ಯಾಧಿಕಾರಿ ಎನ್ ಶೈಲಾ, “ಕಳೆದ 10 ವರ್ಷಗಳಲ್ಲಿ ಮೊದಲ ಬಾರಿಗೆ ನೀರಿನ ಅಭಾವ ಸೃಷ್ಠಿಯಾಗಿದೆ. ಶಿವಮೊಗ್ಗ ನಗರದಲ್ಲಿ ಮಳೆ ಸುರಿಯುತ್ತಿದೆ. ಆದರೆ, ತೀರ್ಥಹಳ್ಳಿ ತಾಲೂಕಿನಲ್ಲಿ ಮಳೆಯಾಗಿಲ್ಲ. ಮಳೆಯಾಗದಿದ್ದರೆ, ನೀರಿನ ಸಮಸ್ಯೆ ಮತ್ತಷ್ಟು ಹೆಚ್ಚಲಿದೆ. ಸದ್ಯ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X