ಶಿವಮೊಗ್ಗ | ಕಾರು ಅಡ್ಡ ಹಾಕಿದ್ದಕ್ಕೆ ಬಾನೆಟ್‌ ಮೇಲೆ ಟ್ರಾಫಿಕ್‌ ಪೊಲೀಸ್ ಸಿಬ್ಬಂದಿಯನ್ನೇ ಎಳೆದೊಯ್ದ ಚಾಲಕ!

Date:

ವಾಹನ ತಪಾಸಣೆ ವೇಳೆ ವ್ಯಕ್ತಿಯೊಬ್ಬ ಸಂಚಾರಿ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಕಾರಿನ ಬಾನೆಟ್ ಮೇಲೆ ಹೊತ್ತೊಯ್ದ ಸಿನಿಮೀಯ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.

- Advertisement -

ತಪಾಸಣೆ ಮಾಡುವ ವೇಳೆ ಕಾರು ಗುದ್ದಿ ಬ್ಯಾನೆಟ್‍ ಮೇಲೆ ಪೊಲೀಸ್​ ಸಿಬ್ಬಂದಿಯನ್ನು ಹತ್ತಿಸಿಕೊಂಡು ಚಾಲಕ ನೂರು ಮೀಟರ್​ಗೂ ಹೆಚ್ಚು ದೂರ ಎಳೆದುಕೊಂಡು ಹೋಗಿರುವ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಘಟನೆ ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜು ಬಳಿ ನಡೆದಿದೆ. ಜಿಲ್ಲೆಯ ಭದ್ರಾವತಿಯ ಹೊಸಮನೆ ಬಡಾವಣೆ ನಿವಾಸಿ ಮಿಥುನ್ ಜಗದಾಳೆ ಎಂಬಾತನನ್ನು ಬಂಧಿಸಲಾಗಿದೆ. ಸದ್ಯ ಕಾರು ವಶಕ್ಕೆ ಪಡೆದುಕೊಂಡಿದ್ದು, ಶಿವಮೊಗ್ಗ ಪೂರ್ವ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಡಿಯೋ ಕೃಪೆ: ಶಿವಮೊಗ್ಗ ಲೈವ್

ಬಾನೆಟ್ ಮೇಲೆ ಪೊಲೀಸ್ ಸಿಬ್ಬಂದಿ ಇದ್ದರೂ ಚಾಲಕ ಕಾರು ನಿಲ್ಲಿಸದೇ ಸಹ್ಯಾದ್ರಿ ಕಾಲೇಜು ಗೇಟ್‍ನಿಂದ ಮತ್ತೂರು ರಸ್ತೆಯವರೆಗೂ ಸಾಗಿದ್ದಾನೆ. ಅಲ್ಲಿಂದ ಮುಂದೆ ಕಾರು ನಿಂತಿದೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಪೊಲೀಸ್ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

ಬಾನೆಟ್ ಮೇಲೆ ಬಿದ್ದ ಸಿಬ್ಬಂದಿಯನ್ನ ಪ್ರಭು ಎಂದು ಗುರುತಿಸಲಾಗಿದೆ. ಕಿಯಾ ಸೊನೆಟ್ ಕಾರಿನಲ್ಲಿ ಬಂದವನನ್ನು ಭದ್ರಾವತಿಯ ಕೇಬಲ್ ಆಪರೇಟರ್ ಮಿಥುನ್ ಜಗದಾಳೆ ಎಂಬುದು ಗೊತ್ತಾಗಿದ್ದು, ಈತನ ಮೇಲೆ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ಜಿ.ಕೆ ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...