ಶಿವಮೊಗ್ಗ | ಅಪ್ರಾಪ್ತ ವಯಸ್ಸಿನ ಮಗನಿಂದ ಸ್ಕೂಟರ್ ಚಾಲನೆ : ತಾಯಿಗೆ ₹30 ಸಾವಿರ ದಂಡ

Date:

ಅಪ್ರಾಪ್ತ ವಯಸ್ಸಿನ ಹುಡುಗನಿಗೆ ಸ್ಕೂಟರ್ ಚಾಲನೆ ಮಾಡಲು ಕೊಟ್ಟ ಆತನ ತಾಯಿಗೆ ಶಿವಮೊಗ್ಗದ 3ನೇ ಎಸಿಜೆ ಹಾಗೂ ಜೆಎಂಎಫ್ ನ್ಯಾಯಾಲಯ ₹30 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಅಪ್ರಾಪ್ತ ವಯಸ್ಸಿನ ಹುಡುಗನ ಬಳಿ ಚಾಲನಾ ಪರವಾನಗಿ (ಲೈಸೆನ್ಸ್) ಇಲ್ಲದಿದ್ದರೂ, ಮಗನಿಗೆ ಆತನ ತಾಯಿ ಚಾಲನೆ ಮಾಡಲು ಸ್ಕೂಟರ್ ಕೊಟ್ಟಿದ್ದರು.

ಶಿವಮೊಗ್ಗದ ಎಸ್ ಪಿಎಂ ರಸ್ತೆಯ ಕೋಟೆ ಆಂಜನೇಯನ ದೇವಾಲಯದ ಬಳಿ ಪೂರ್ವ ಸಂಚಾರ ಠಾಣೆಯ ಪಿಎಸ್ಐ ನವೀನ್ ಕುಮಾರ್ ಮಠಪತಿ ಅವರು ಜನವರಿ 30ರಂದು ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ, ಬಾಲಕನೊಬ್ಬ ವಾಹನ ಚಲಾಯಿಸುತ್ತಿದ್ದುದನ್ನು ಕಂಡ ಅವರು ತಡೆದು ತಪಾಸಣೆ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ತಪಾಸಣೆ ವೇಳೆ ಬಾಲಕನ ಬಳಿ ವಾಹನ ಚಾಲನಾ ಪರವಾನಿಗೆ ಇಲ್ಲದಿರುವುದು ತಿಳಿದುಬಂದಿದೆ. ಬಳಿಕ ಆತ 17 ವರ್ಷದ ಬಾಲಕ ಎಂದು ಗೊತ್ತಾಗಿದೆ. ಬಾಲಕ ಹಾಗೂ ಆತನ ತಾಯಿ ಸಂಚಾರ ನಿಯಮವನ್ನು ಉಲ್ಲಂಘನೆ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಆಸ್ತಿ ವಿಚಾರಕ್ಕೆ ಜೋಡಿ ಕೊಲೆ : ಆರೋಪಿ ವಶಕ್ಕೆ

ವಾಹನದ ಮಾಲೀಕರಾದ ಬಾಲಕನ ತಾಯಿಯ ವಿರುದ್ಧ ಶಿವಮೊಗ್ಗ ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಲಘು ಪ್ರಕರಣ ದಾಖಲಿಸಲಾಗಿತ್ತು.

ಸಂಚಾರ ಪೊಲೀಸರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ವರದಿ ಸಲ್ಲಿಸಿದ್ದರು. ಆರೋಪ ಪಟ್ಟಿ ಪರಿಶೀಲಿಸಿದ ನ್ಯಾಯಾಧೀಶರು ಬಾಲಕನ ತಾಯಿಗೆ ₹30 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಬಸ್‌ಗಳಿಲ್ಲದೇ ಪರದಾಟ; ವಿದ್ಯಾರ್ಥಿಗಳ ಪ್ರತಿಭಟನೆ

ಬಸ್ ಅವಾಂತರದಿಂದ ಬೇಸತ್ತ ವಿದ್ಯಾರ್ಥಿಗಳು ಬೇಲೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ....

ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ

ಬೆಳಗಿನ ಜನದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಗರುಡಾಚಾರ್‌ಪಾಳ್ಯ...

ವಿಪಕ್ಷ ನಾಯಕನ ಹುದ್ದೆಗೆ ಅಶೋಕ್ ನಾಲಾಯಕ್: ಪ್ರಮೋದ್ ಮುತಾಲಿಕ್

ವಿಧಾನಸಭೆ ವಿಪಕ್ಷ ನಾಯಕನ ಹುದ್ದೆಗೆ ಆರ್ ಅಶೋಕ್ ನಾಲಾಯಕ್. ಬೆಂಗಳೂರಿನ ಚಾಮರಾಜಪೇಟೆಯಲ್ಲಿ...

ಶಿವಮೊಗ್ಗ | ಫೆ.24ರಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತೀ ಅರ್ಹರಿಗೆ ತಲುಪಿಸುವ ಉದ್ದೇಶದಿಂದ...