ಶಿವಮೊಗ್ಗ | ದಲಿತರ ಭೂಮಿ ಒತ್ತುವರಿ; ಎಂಪಿಎಂ ವಿರುದ್ಧ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ ದಸಂಸ

Date:

ದಲಿತರ ಭೂಮಿಯನ್ನು ಎಂಪಿಎಂ(ಮೈಸೂರು ಪೇಪರ್‌ ಮಿಲ್ಸ್‌)ನವರು ಆಕ್ರಮಿಸಿರುವುದನ್ನು ಜಂಟಿ ಸರ್ವೆ ಮಾಡಿಸಿ ಹದ್ದುಬಸ್ತು ಮಾಡಿಸಿ ಬಿಡಿಸಿಕೊಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಮೇ 13ರಿಂದ ದಲಿತರಿಗೆ ಮಂಜೂರಾದ ಸರ್ವೆ ನಂ 12ರ ಭೂಮಿಯಲ್ಲಿಯೇ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಆರಂಭಿಸಿದ್ದು, ಶಿವಮೊಗ್ಗ ಜಿಲ್ಲೆ ಭದ್ರಾವತಿ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.

- Advertisement -

“ವಿಷಯಕ್ಕೆ ಸಂಭಂದಿಸಿದಂತೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಡಿ ಬಿ ಹಳ್ಳಿ ಗ್ರಾಮದ ಹಾಗೂ ಅರದೊಟ್ಟು ಗ್ರಾಮದ 14 ಮಂದಿ ತಮಗೆ ಸೇರಿದ 8.20 ಎಕರೆ ಜಮೀನನ್ನು ಅರದೊಟ್ಟು ಗ್ರಾಮದ ಗ್ರಾಮ ಠಾಣಕ್ಕೆ ಬಿಟ್ಟುಕೊಟ್ಟಿದ್ದರಿಂದ ಇದರ ಬದಲಿಗೆ ಸರ್ಕಾರವು 14 ಜನರಿಗೆ ತಲಾ 2ಎಕರೆಯಂತೆ ಚಂದನಕೆರೆ ಸರ್ವೆ.ನಂ 12ರ 413 ಗೋಮಾಳ ಜಮೀನಿನ ಪೈಕಿ 28 ಎಕರೆ ಭೂಮಿಯನ್ನು ಎಲ್‌ಎನ್‌ಡಿ 147/60.61ರಂತೆ ಸರ್ಕಾರ ಸಾಗುವಳಿ ಚೀಟಿ ನೀಡಿರುತ್ತದೆ ಹಾಗೂ ಚಂದನಕೆರೆಯ ಪರಿಶಿಷ್ಟ ಜಾತಿ ಆದಿಕರ್ನಾಟಕ ಜನಾಂಗಕ್ಕೆ ಸೇರಿದ ಸುಮಾರು 21 ಮಂದಿ ಹಾಗೂ ಕಲ್ಲಿಹಾಳ್ ಗ್ರಾಮದ 20 ಮಂದಿ ತಲಾ 2 ಎಕರೆಯಂತೆ ಸಾಗುವಳಿ ಮಾಡುತ್ತಾ ನಮೂನೆ 50-51ರಲ್ಲಿ ಅರ್ಜಿ ಸಲ್ಲಿಸಿ ಸ್ವಾಧೀನಾನುಭವದಲ್ಲಿದ್ದರು” ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಎಂಪಿಎಂ

“1984-850A ಮೇಲ್ಕಂಡವರೆಲ್ಲರೂ ಸ್ವಾಧೀನಾನುಭವದಲ್ಲಿರುತ್ತಾರೆ. ಆದರೆ ದಲಿತರು ಸಾಗುವಳಿ ಮಾಡುತ್ತಾ ಬಂದಿದ್ದು, ಭೂಮಿಯನ್ನು ಅನಕ್ಷರಸ್ಥರು ಹಾಗೂ ಅಸಹಾಯಕ ದಲಿತರನ್ನು ಹೆದರಿಸಿ ದೌರ್ಜನ್ಯ ಮಾಡಿ 1985-86 ರಲ್ಲಿ ಎಂಪಿಎಂ ನವರು ನೀಲಗಿರಿ ನೆಡು ತೋಪು ಮಾಡಿದ್ದು ದಲಿತರು ಭೂಮಿಯ ಮೇಲೆ ಹೋಗದಂತೆ ತಡೆದು ದೌರ್ಜನ್ಯವೆಸಗಿರುತ್ತಾರೆ. ಸದರಿ ದಲಿತರು ಸರ್ಕಾರದ ಜೊತೆ ಪತ್ರ ವ್ಯವಹಾರ ಮಾಡುತ್ತಲೇ ಓಡಾಡುತ್ತಿದ್ದರು. ಎಂಪಿಎಂನವರ ದೌರ್ಜನ್ಯದಿಂದ ಭೂಮಿ
ಕಳೆದುಕೊಂಡ ಸಂತ್ರಸ್ತರಿಗೆ ಭೂಮಿ ಅವರ ಕೈ ಸೇರಲಿಲ್ಲ. ಕಚೇರಿಗಳಿಗೆ ಅಲೆದಾಡುವುದು ಅವರ ಜೀವನವಾಗಿದೆ. ಇತ್ತೀಚೆಗೆ ಎಂಪಿಎಂನವರು ದೌರ್ಜನ್ಯದಿಂದ ಕಿತ್ತುಕೊಂಡಿದ್ದ ದಲಿತರಿಗೆ ಸೇರಿದ ಭೂಮಿಯನ್ನು ಕೆಲವರು ಅಕ್ರಮವಾಗಿ ಬಗರ್ ಹುಕುಂ ಸಾಗುವಳಿ ಮಾಡಲು ಮುಂದಾಗಿರುವುದು ಸಮಿತಿಯ ಗಮನಕ್ಕೆ ಬಂದಿದೆ” ಎಂದರು.

“ತಾವುಗಳು ತಕ್ಷಣ ಸ್ಥಳಕ್ಕೆ ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿಗಳೊಂದಿಗೆ ಆಗಮಿಸಿ ಜಂಟಿ ಸರ್ವೆಕಾರ್ಯ ನಡೆಸಿ ಸರ್ಕಾರದಿಂದ ದಲಿತರಿಗೆ ಚಂದನಕೆರೆ ಸರ್ವೆ ನಂ 12ರಲ್ಲಿ ಮಂಜೂರಾದ ಭೂಮಿಯನ್ನು ಸರ್ವೆ ಕಾರ್ಯ ನಡೆಸಿ ಹದ್ದುಬಸ್ತು ಮಾಡಿಸಿ ದಲಿತರಿಗೆ ಭೂಮಿಯನ್ನು ಬಿಡಿಸಿಕೊಡಬೇಕು. ಹಾಗೂ ಬಗುರ್ ಹುಕುಂ ಸಾಗುವಳಿದಾರರಿಗೆ ಮಂಜೂರಾತಿ ಹಂತದಲ್ಲಿದ್ದ ಭೂಮಿಯನ್ನು ಸಾಗವಳಿ ಕೊಡಿಸಿಕೊಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಮೇ 16ರಂದು ಪ್ರತಿಭಟನೆ; ಡಿವೈಎಸ್‌ಪಿ ನೇತೃತ್ವದ ಪೂರ್ವಭಾವಿ ಸಭೆ

ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಪ್ರಧಾನ ಸಂಚಾಲಕ ಹನುಮಂತಪ್ಪ ಕಲ್ಲಿಹಾಳ್, ಜಿಲ್ಲಾ ಪ್ರಧಾನ ಸಂಚಾಲಕ ಟಿ ಎಚ್ ಹಾಲೇಶಪ್ಪ, ಗ್ರಾಮಾಂತರ ಸಹ ಸಂಚಾಲಕ ನವೀನ್ ಕುಮಾರ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...