ಶಿವಮೊಗ್ಗ | ಸಿಇಒ ಹೇಮಂತ್‌ಗೆ ಬೀಳ್ಕೊಡುಗೆ; ನೂತನ ಸಿಇಒ ರಿಷಿ ಆನಂದ್‌ ಸ್ವಾಗತಿಸಿದ ಜಿ.ಪಂ

Date:

ಶಿವಮೊಗ್ಗ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ನಿಕಟಪೂರ್ವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಂತ್ ಎನ್ ಅವರಿಗೆ ಬೀಳ್ಕೊಡುಗೆ ಮತ್ತು ನೂತನ ಸಿಇಒ ರಿಷಿ ಆನಂದ್‌ ಸ್ವಾಗತ ಸಮಾರಂಭವನ್ನು ನೆರವೇರಿಸಲಾಯಿತು.

- Advertisement -

ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿಯವರು ಉಪಸ್ಥಿತರಿದ್ದು, ನಿಕಟಪೂರ್ವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಹೇಮಂತ್ ಎನ್. ಅವರಿಗೆ ಆತ್ಮೀಯ ಬೀಳ್ಕೊಡುಗೆ ನೀಡಿ, ಸಾರ್ವಜನಿಕ ಆಡಳಿತ ಹಾಗೂ ಸೇವಾ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಗಣನೀಯ ಸೇವೆಯನ್ನು ಸ್ಮರಿಸಿ ಗೌರವಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್-ಬಿಜೆಪಿ ನಡುವೆ ಬಿರುಸಿನ ಸ್ಪರ್ಧೆ!

ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು, ಬಿಜೆಪಿ–ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಯ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್‌ನಿಂದ ಶಶಿ ಹುಲಿಕುಂಟೆಮಠ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ...

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...
a9f65d61 05b8 467e 91eb 2b77646f4297

ಇದೇ ಸಂದರ್ಭದಲ್ಲಿ ನೂತನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ್ ರವರನ್ನು ಆತ್ಮೀಯವಾಗಿ ಸ್ವಾಗತಿಸಿ, ಶಿವಮೊಗ್ಗ ಜಿಲ್ಲೆಯ ಆಡಳಿತದಲ್ಲಿ ಯಶಸ್ವಿಯಾಗಿ ಹಾಗೂ ಜನಪರವಾಗಿ ಸೇವೆ ಸಲ್ಲಿಸಲು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್, ಸಿಇಒ ಶ್ರೀಕಾಂತ್, ಜಿಲ್ಲಾಧ್ಯಕ್ಷರಾದ ಆರ್. ಮೋಹನ್ ಕುಮಾರ್, ಕಾರ್ಯದರ್ಶಿಗಳಾದ ಆರ್. ಪಾಪಣ್ಣ, ಖಜಾಂಚಿಗಳಾದ ಡಾ. ಸಿ.ಎ. ಹಿರೇಮಠ್, ವಕೀಲರಾದ ಶ್ರೀಪಾಲ್, ಸಿದ್ದಬಸಪ್ಪ ಬಿ. ಸೇರಿದಂತೆ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶನಿವಾರ ದೆಹಲಿಯಲ್ಲಿ ಸಿಜೆಪಿ 2ನೇ ಬೃಹತ್ ಪ್ರತಿಭಟನೆ

ಎಸ್‌ಐಆರ್‌ ಮತ್ತು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ವಿರುದ್ಧ...

ದೆಹಲಿ ಗಲಭೆ, ಜಾಮಿಯಾ ಹಿಂಸಾಚಾರ: ಎಸ್‌ಐಟಿ ತನಿಖೆ ಕೋರಿದ್ದ ಅರ್ಜಿಗಳು ವಜಾ

2020ರ ಈಶಾನ್ಯ ದೆಹಲಿ ಗಲಭೆ ಹಾಗೂ 2019ರ ಡಿಸೆಂಬರ್‌ನಲ್ಲಿ ಜಾಮಿಯಾ ಮಿಲಿಯಾ...

ದೆಹಲಿ ಪೊಲೀಸ್ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಪತ್ರಕರ್ತೆ ಸೇರಿ 17 ಮಂದಿ ಬಂಧನ

ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ನಡೆದ ಪ್ರತಿಭಟನೆಯ ವರದಿಗಾರಿಕೆ ವೇಳೆ ತಮ್ಮ...

ಶಿವಮೊಗ್ಗ | ಲಾರಿ ಚಾಲಕನಿಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿ!

ಶಿವಮೊಗ್ಗ ನಗರದ ಮಂಜುನಾಥ ಬಡಾವಣೆಯ ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ಎದುರು ಶನಿವಾರ...