ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೇರುಬೀಸು ಗ್ರಾಮದ ರೈತನೊಬ್ಬ ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ರಾಮಚಂದ್ರಪ್ಪ (42) ಆತ್ಮಹತ್ಯೆಗೆ ಶರಣಾದ ರೈತ. ರೈತ ರಾಷ್ಟ್ರಿಕೃತ ಬ್ಯಾಂಕ್‌ಗಳಲ್ಲಿ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ 3.21 ಲಕ್ಷ ರೂ. ವ್ಯವಸಾಯಕ್ಕಾಗಿ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸುವುದು ಹೇಗೆ ಎಂದು ಮನನೊಂದು ಮನೆ ಹಿಂಭಾಗದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? ಗಂಡು ಮಕ್ಕಳಿಗೂ ಉಚಿತ ಬಸ್ ಪ್ರಯಾಣ, ಸರ್ಕಾರದಲ್ಲಿ ಚರ್ಚಿಸಿ ನಿರ್ಧಾರ: ಡಿ ಕೆ ಶಿವಕುಮಾರ್
ಈ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.