ಶಿವಮೊಗ್ಗ | ರೈತರು ದೃತಿಗೆಡಬಾರದು, ಸರ್ಕಾರ ರೈತರ ಪರವಾಗಿದೆ: ಸಚಿವ ಮಧು ಬಂಗಾರಪ್ಪ

Date:

ಬಗರ್‌ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದಿಲ್ಲ, ಯಾವುದೇ ರೈತರು ಧೃತಿಗೆಡಬಾರದು ಸರ್ಕಾರ ರೈತರ ಪರವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

- Advertisement -

ಶಿವಮೊಗ್ಗ ನಗರದ ಲೋಕೋಪಯೋಗಿ ಭವನದಲ್ಲಿನ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಅಕ್ಟೋಬರ್‌ 21ಕ್ಕೆ ಸಾಗರದಲ್ಲಿ ಅರಣ್ಯ ಭೂಮಿ ಸಮಸ್ಯೆ ಕುರಿತು ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ ಸರ್ಕಾರ ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ಬಗರ್‌ಹುಕುಂ ಸಾಗುವಳಿದಾರರ ಪರವಾಗಿ ಕೆಲಸ ಮಾಡುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

“ಶರಾವತಿ ಸಂತ್ರಸ್ತರಿಗೆ ನ್ಯಾಯ ಒದಗಿಸುವ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಉತ್ತಮ ನ್ಯಾಯವಾದಿಗಳನ್ನು ನೇಮಿಸಿ ಐಎ ಹಾಕಲಾಗುವುದು. ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿ ಮತ್ತು ನ್ಯಾಯ ಒದಗಿಸಲು ಎಲ್ಲ ಪ್ರಯತ್ನವನ್ನು ಸರ್ಕಾರ ನಡೆಸುತ್ತಿದೆ. ರೈತರಿಗೆ ಒಳ್ಳೆಯ ಸುದ್ದಿಯನ್ನೇ ನಿಡುತ್ತೇವೆ. ಕೋರ್ಟ್ ವಿಚಾರ ಸೂಕ್ಷ್ಮವಾಗಿದ್ದು, ಹುಷಾರಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಇದು ಇಂದಿನ ಸಮಸ್ಯೆಯಲ್ಲ. ಹಾಗಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಸಂತ್ರಸ್ತರು ಧೃತಿಗೆಡಬಾರದು” ಎಂದರು.

“ಸಂತ್ರಸ್ತರ ಪರವಾದ ಹೋರಾಟವನ್ನು ನಿಲ್ಲಿಸುವುದಿಲ್ಲ. ಅದಕ್ಕಾಗಿ ಜನಪ್ರತಿನಿಧಿಗಳು, ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗುವುದು. ಮುಳುಗಡೆಗೆ ಸಂಬಂಧಪಟ್ಟಂತೆ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆ ಹೋರಾಟ ನಡೆಯುತ್ತಿದೆ. ರೈತರಿಗೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದಲೇ ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿಯನ್ನು ಒಪ್ಪಿಲ್ಲ” ಎಂದು ಹೇಳಿದರು.

“ಬಗರ್‌ಹುಕುಂ ಸಾಗುವಳಿದಾರರ ಪರವಾಗಿ ಸರ್ಕಾರ ಕೆಲಸ ಮಾಡುತ್ತಿದೆ. 2015ರೊಳಗೆ 3 ಎಕರೆ ಒಳಗೆ ಸಾಗುವಳಿ ಮಾಡುತ್ತಿರುವ ರೈತರಿಗೆ ಯಾವುದೇ ರೀತಿಯ ನೋಟಿಸ್ ನೀಡುವುದು, ತೊಂದರೆ ನೀಡದಂತೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಎಲ್ಲ ರೀತಿಯ ಭೂ ಕಬಳಿಕೆ ಪ್ರಕರಣ ನಿರ್ವಹಿಸಲು ಜನಪ್ರತಿಧಿಗಳು ಮತ್ತು ಅಧಿಕಾರಿಗನ್ನೊಳಗೊಂಡ ಅರಣ್ಯ ಸಮಿತಿ ರಚನೆ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

“2015ನೇ ಸಾಲಿನ ಒಳಗೆ 3 ಎಕರೆ ಒಳಗಿರುವ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆಯಿಂದ ನೋಟಿಸ್‌ ನೀಡುವುದಾಗಲಿ, ಒಕ್ಕಲೆಬ್ಬಿಸುವುದಾಗಲಿ ಮಾಡಬಾರದು” ಎಂದು ಸೂಚನೆ ನೀಡಿದರು.

“ಕೋರ್ಟ್ ಪ್ರಕರಣ, ಲೋಕಾಯುಕ್ತ ಪ್ರಕರಣಗಳನ್ನು ಹೊರತುಪಡಿಸಿ 3 ಎಕರೆ ಒಳಗೆ ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆ ನೋಟಿಸ್‌ ನೀಡುವಂತಿಲ್ಲ. ಸಣ್ಣ ಹಿಡುವಳಿದಾರರಿಗೆ ಯಾವುದೇ ರೀತಿಯಲ್ಲಿ ತೊಂದರೆ ಮಾಡಬಾರದು. 3 ಎಕರೆಗಿಂತ ಹೆಚ್ಚಿನ ಭೂಮಿ ಸಾಗುವಳಿ ಮಾಡುತ್ತಿದ್ದರೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು” ಎಂದು ಅರಣ್ಯ ಇಲಾಖೆ ಅಧಿಕಾರಿಳಿಗೆ ಸಚಿವರು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ ಜಿಲ್ಲೆಯ 15 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆ

“ಗ್ರಾಮಗಳಲ್ಲಿ ಗ್ರಾಮ ಸಭೆ ಮಾಡಿ ಸಾಗುವಳಿದಾರರು, ಅವರ ಮಾಹಿತಿ ತೆಗೆದುಕೊಳ್ಳಬೇಕು. ಬಗರ್‌ಹುಕುಂ ಸಾಗುವಳಿದಾರರ ಸಮಸ್ಯೆಗಳನ್ನು ನಿರ್ವಹಿಸಲು ಶೀಘ್ರದಲ್ಲಿ ಸಮಿತಿ ರಚಿಸಲಾಗುವುದು” ಇಲಾಖೆ ಅಧಿಕಾರಿಳಿಗೆ ಸಚಿವರು ಸೂಚಿಸಿದರು.

ಸಭೆಯಲ್ಲಿ ವಿಧಾನಪರಿಷತ್ ಶಾಸಕ ಬಲ್ಮೀಶ್ ಬಾನು, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಾಗರ ಉಪವಿಭಾಗಾಧಿಕಾರಿ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ...