ಶಿವಮೊಗ್ಗ | ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್ ದಾಖಲು

Date:

ಹಿಂದುತ್ವ ಭಾಷಣಕಾರ, ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

- Advertisement -

ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಎಸ್‌.ಎನ್‌ ಅವರು ನೀಡಿದ್ದ ದೂರಿನ ಆಧಾರದ ಮೇಲೆ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್‌ 505/1ಬಿ 505/1ಸಿ 505/2 ಕಲಂ ಅಡಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇತ್ತೀಚೆಗೆ ಪ್ರಕಟವಾದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ದತಾ ಪರೀಕ್ಷಾ ವೇಳಾಪಟ್ಟಿ ಸಂಬಂಧ ಚಕ್ರವರ್ತಿ ಸೂಲಿಬೆಲೆ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್‌ ಹಾಕಿದ್ದರು. ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದ ಸೂಲಿಬೆಲೆ, ‘KARNATAKA STATE 10 STANDARD EXAM TIME TABLE RELEASED. ALL THE EXAM IN THE MORNING SESSION BUT FOR FRIDAY, WHY?, OH.. TIME FOR NAMAZ 1’ (10ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆಯಾಗಿದೆ. ಎಲ್ಲ ಪರೀಕ್ಷೆಗಳು ಬೆಳಗ್ಗಿನ ಸಮಯದಲ್ಲಿ ನಡೆಯಲಿವೆ. ಆದರೆ, ಶುಕ್ರವಾರ ಮಾತ್ರ ಮಧ್ಯಾಹ್ನವಿದೆ. ಯಾಕೆ? ಓಹ್, ಅಂದು ನಮಾಜ್ ಸಮಯ) ಎಂದು ಪೋಸ್ಟ್ ಹಾಕಿದ್ದರು.

ಅವರ ಪೋಸ್ಟ್‌ ಧಾರ್ಮಿಕ ಭಾವನೆ ಕೆರಳಿಸುತ್ತದೆ. ಶಿಕ್ಷಣ ಮತ್ತು ಪರೀಕ್ಷೆಯ ವಿಚಾರದಲ್ಲಿ ಕೋಮು ಪ್ರಚೋದನೆ ನೀಡುವ ಪ್ರಯತ್ನವನ್ನು ಸೂಲಿಬೆಲೆ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಜಯ್‌ ಕುಮಾರ್ ತಮ್ಮ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಇದೀಗ, ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು, ವಿವಾದಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ, “ಅದೇ ದಿನದಿಂದ (ಶುಕ್ರವಾರ) ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿವೆ. ಬೆಳಗ್ಗೆ ಪಿಯುಸಿ ಪರೀಕ್ಷೆ ನಡೆಯಲಿರುವುದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ. ಸೂಲಿಬೆಲೆ ಕಾಮನ್ ಸೆನ್ಸ್ ಇಲ್ಲದೆ ಏನೇನೋ ಹೇಳುತ್ತಾರೆ. ಆತನ ವಿರುದ್ಧ ಸಾಕಷ್ಟು ದೂರುಗಳು ಬರುತ್ತಿವೆ. ಆತನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ” ಎಂದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...