ಶಿವಮೊಗ್ಗ | ರಾಗಿಗುಡ್ಡ ಬಡಾವಣೆಯಲ್ಲಿ ಹಿಂದೂ–ಮುಸ್ಲಿಮರ ಸೌಹಾರ್ದತೆಗೆ ಸಾಕ್ಷಿಯಾದ ಗಣೇಶೋತ್ಸವ

Date:

ಕೆಲವು ತಿಂಗಳ ಹಿಂದೆ ಕೋಮು ಸಂಘರ್ಷದ ಕಾರಣಕ್ಕೆ ಸುದ್ದಿಯಾಗಿದ್ದ ಶಿವಮೊಗ್ಗ ಜಿಲ್ಲೆಯ ರಾಗಿಗುಡ್ಡವು ಈ ಬಾರಿ ಸೌಹಾರ್ದತೆಗೆ ಸಾಕ್ಷಿಯಾಗಿದೆ.

- Advertisement -

ಹೌದು. ಶಿವಮೊಗ್ಗ ನಗರದ ಹೊರವಲಯ ರಾಗಿಗುಡ್ಡ ಬಡಾವಣೆಯಲ್ಲಿ ಪ್ರತಿಷ್ಠಾಪಿಸಲಾಗಿರುವ ಗಣೇಶ ಮೂರ್ತಿಗಳಿಗೆ, ಹಿಂದೂ ಹಾಗೂ ಮುಸ್ಲಿಂ ಸಮಾಜದ ಮುಖಂಡರು ಒಟ್ಟಾಗಿ ಪೂಜೆ ಸಲ್ಲಿಸಿ, ಸೌಹಾರ್ದತೆಯ ಸಂದೇಶ ಸಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಮಂಗಳವಾರ ಸಂಜೆ ಸೌಹಾರ್ದತೆಯ ಸನ್ನಿವೇಶಕ್ಕೆ ರಾಗಿಗುಡ್ಡದ ವಿವಿಧ ಗಣೇಶ ಮೂರ್ತಿಗಳು ಪ್ರತಿಷ್ಠಾಪನೆಯಾಗಿದ್ದ ಸ್ಥಳಗಳು ಸಾಕ್ಷಿಯಾದವು. ಈ ವೇಳೆ ರಾಗಿಗುಡ್ಡ ಶಾಂತಿ ಪಡೆ ಸಮಿತಿ ಸದಸ್ಯರು, ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಈ ವೇಳೆ ರಾಗಿಗುಡ್ಡದ ಹಿಂದೂ ಹಾಗೂ ಮುಸ್ಲಿಂ ಸಮಾಜದ ಮುಖಂಡರು ಮಾತನಾಡಿ, “ಹಿಂದೂ ಮತ್ತು ಮುಸ್ಲಿಮರ ಭಾವೈಕ್ಯತೆಯ ಸಂಕೇತವಾಗಿ, ಒಟ್ಟಿಗೆ ಸೇರಿ ಗಣೇಶ ಪೂಜೆ ನಡೆಸಿದ್ದೇವೆ. ನಮ್ಮ ದೇಶದಲ್ಲಿ ವಿವಿಧ ಜಾತಿ, ಧರ್ಮ ಮತ್ತು ಜನಾಂಗದವರಿದ್ದಾರೆ. ವಿವಿಧತೆಯಲ್ಲಿ ಏಕತೆ ಸಾರುವ ದೇಶವಾಗಿದೆ. ಗಣೇಶ ಹಾಗೂ ಮೀಲಾದುನ್ನಬಿ ಹಬ್ಬಗಳು ಪ್ರಮುಖವಾದ ಹಬ್ಬಗಳಾಗಿವೆ. ನಮ್ಮೆಲ್ಲರ ಭಾವೈಕ್ಯತೆ ಮತ್ತು ಒಗ್ಗಟ್ಟು ತೋರಿಸಲು ಈ ಸಂದರ್ಭ ಒದಗಿ ಬಂದಿದೆ” ಎಂದರು.

WhatsApp Image 2024 09 11 at 2.08.09 PM

“ರಾಗಿಗುಡ್ಡದಲ್ಲಿ ಸೌಹಾರ್ದತೆ ಗಟ್ಟಿ ಮಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಎಲ್ಲ ರೀತಿಯ ಸಹಕಾರ ನೀಡಿದೆ. ರಾಗಿಗುಡ್ಡದ ಸಾರ್ವಜನಿಕರೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಹಬ್ಬದ ಆಚರಣೆ ಮತ್ತು ಇತರೆ ಕಾರ್ಯಕ್ರಮಗಳು ಯಶಸ್ವಿಯಾಗಲೂ ಕಾರಣಕರ್ತರಾಗಿದ್ದಾರೆ. ಪೊಲೀಸ್ ಇಲಾಖೆಯ ಅವಿರತ ಸೇವೆಯು ಶ್ಲಾಘನೀಯವಾಗಿದೆ” ಎಂದು ತಿಳಿಸಿದರು.

“ಹಬ್ಬದ ಯಶಸ್ಸಿನಲ್ಲಿ ನಮ್ಮೆಲ್ಲರ ಸಹಮತ ಮುಖ್ಯವಾಗಿರುತ್ತದೆ. ಯಾರೋ ಕೆಲ ಕಿಡಿಗೇಡಿತನದಿಂದ ಮತ್ತು ಯಾವುದೋ ಸನ್ನಿವೇಶದಲ್ಲಿ ಕಳೆದ ಬಾರಿ ಕಹಿ ಘಟನೆಗಳು ಜರುಗಿರುತ್ತವೆ. ಆದರೆ ಅದೆಲ್ಲವನ್ನು ಮರೆತು ಯಾವುದೇ ವೈಮನಸ್ಸು ಮತ್ತು ಸಮಸ್ಯೆಗಳಿದ್ದಲ್ಲಿ ಬಗೆಹರಿಸಿಕೊಂಡು ಒಟ್ಟಾಗಿ ಮುಂದೆ ಸಾಗುತ್ತೇವೆ” ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಹಳೆಯ ರೀತಿಯ ಘಟನೆಗಳು ಜರುಗದಂತೆ ನಾವೆಲ್ಲರೂ ಶ್ರಮಿಸುತ್ತೇವೆ. ಸಹೋದರತ್ವದ ಮನೋಭಾವದೊಂದಿಗೆ, ಎಲ್ಲ ಧರ್ಮದ ಹಬ್ಬಗಳಲ್ಲಿ ಒಟ್ಟಾಗಿ ಭಾಗವಹಿಸಿ ಹಬ್ಬಗಳನ್ನು ಸೌಹಾರ್ದತೆಯಿಂದ ವಿಜೃಂಭಣೆಯಾಗಿ ಆಚರಿಸಲು ನಿರ್ಧರಿಸಿದ್ದೇವೆ. ಹಿಂದಿನ ವರ್ಷ ಈ ಪ್ರದೇಶದಲ್ಲಿ ಜರುಗಿದ ಕಳಂಕ ತೊಳೆಯಬೇಕಿದೆ. ನಮ್ಮ ಮುಂದಿನ ಪೀಳಿಗೆಗೆ, ಮಕ್ಕಳಿಗೆ ಮತ್ತು ಸಮಾಜದ ಇತರರಿಗೆ ಉತ್ತಮ ಸಂದೇಶ ಸಾರುವ ಮುಖಾಂತರ ಮಾದರಿಯಾಗಬೇಕಿದೆ” ಎಂದು ಎರಡೂ ಧರ್ಮಗಳ ಮುಖಂಡರು ಕರೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ರಾಯಚೂರು | ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಕಾಂಗ್ರೆಸ್ ನಾಯಕರಿಂದ ಸ್ವಾಗತ!

ಈ ಸಂದರ್ಭದಲ್ಲಿ ರಾಗಿಗುಡ್ಡದ ನಿವಾಸಿಗಳಾದ ನೂರ್ ಮಸೀದಿ ಅಧ್ಯಕ್ಷ ಭಾಷಾ ಸಾಬ್, ವಕೀಲರಾದ ರಾಮಚಂದ್ರ, ದೇವಸ್ಥಾನ ಸಮಿತಿ ಸದಸ್ಯರಾದ ಗಾರೆ ನಾಗಣ್ಣ, ನೂರ್ ಮಸೀದಿ ಉಪಾಧ್ಯಕ್ಷರಾದ ಸಾದಿಕ್, ಸ್ಥಳೀಯ ಪ್ರಮುಖರುಗಳಾದ ಬಸವರಾಜ್, ನಾಗರತ್ನಮ್ಮ, ರುದ್ರೋಜಿ ರಾವ್, ಮಾರುತಿ, ಭಾಷಾ ಸಾಬ್, ಸಯ್ಯದ್ ಅಕ್ರಮ್, ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಸತ್ಯನಾರಾಯಣ, ಸಬ್ ಇನ್ಸ್‌ಪೆಕ್ಟರ್ ಸ್ವಪ್ನ ಮತ್ತು ಇತರೆ ಪೊಲೀಸ್‌ ಸಿಬ್ಬಂದಿ ಉಪಸ್ಥಿತರಿದ್ದರು.

WhatsApp Image 2024 09 11 at 2.08.10 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...